ರಾಯಚೂರು | ಬಾಣಂತಿಯರ ಸಾವು ಪ್ರಕರಣ; ಸಚಿವ ದಿನೇಶ್ ಗುಂಡೂರಾವ್ ವಜಾಕ್ಕೆ ಬಿಜೆಪಿ ಪ್ರತಿಭಟನೆ

Date:

ಇತ್ತೀಚಿಗೆ ನಿತ್ಯವೂ ಬಾಣಂತಿಯರ ಸಾವು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು.

- Advertisement -

ರಾಯಚೂರು ನಗರದ ಟಿಪ್ಪುಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ವಿರುದ್ಧ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ರಾಜ್ಯದ ಹಲವು ಕಡೆ ಬಾಣಂತಿಯರ ಸಾವು ವರದಿಯಾಗುತ್ತಿದೆ. ಅದೆಷ್ಟೋ ಮಂದಿ ಜೀವ ಕಳೆದುಕೊಂಡು ಶಾಪ ಹಾಕುತ್ತಿದ್ದಾರೆ. ಸರ್ಕಾರ ಕಡಿವಾಣ ಹಾಕುವುದರಲ್ಲಿ ಗಮನಹರಿಸುತ್ತಿಲ್ಲ.‌ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವನ್ನಪ್ಪಿದ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು. ಬಾಣಂತಿಯರು ಮತ್ತು ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ದತ್ತು ತೆಗೆದುಕೊಳ್ಳಬೇಕು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಭದ್ರತೆಯನ್ನು ಖಾತ್ರಿಪಡಿಸಲು ಮೇಲ್ವಿಚಾರಣೆ ಸಮಿತಿ ರಚಿಸಬೇಕು” ಎಂದು ಒತ್ತಾಯಿಸಿದರು.

“ಮಹಿಳೆಯರು,‌ ಬಾಣಂತಿಯರ ಸಾವು ತಡೆಯಲು ವಿಫಲವಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ‌ ಹೆಬ್ಬಾಳಕರ್ ರಾಜೀನಾಮೆ ನೀಡಬೇಕು. ಬಾಣಂತಿಯರ ಸಾವು ಪ್ರಕರಣಗಳನ್ನು ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ

ಪ್ರತಿಭಟನೆಯಲ್ಲಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಲಲಿತಾ ಕಡಗೋಲ, ಶರಣಮ್ಮ ಕಾಮರೆಡ್ಡಿ, ಸುಮಾ‌ ಗಸ್ತಿ, ಜಯಶ್ರೀ, ಸುಮತಿ‌ಶಾಸ್ತ್ರಿ, ನಾಗವೇಣಿ‌ಸಾಹುಕಾರ್, ಸುಲೋಚನಾ, ಪಿ ಯಲ್ಲಪ್ಪ, ಡಾ ನಾಗರಾಜ ಬಾಲ್ಕಿ, ಎನ್ ಕೆ ನಾಗರಾಜ, ವಿಜಯ ಭಾಸ್ಕರ್ ಇಟಗಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...