ರಾಯಚೂರು | ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಭೆ; ಮತಯಾಚನೆ ಮಾಡಿದ ಕೈ ಅಭ್ಯರ್ಥಿ

Date:

ರಾಯಚೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಮಾರ್‌ ನಾಯಕ್‌ ಅವರು ರಾಯಚೂರು ನಗರದಲ್ಲಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಭೆಮಾಡಿ ಮತಯಾಚನೆ ಮಾಡಿದರು.

- Advertisement -

ರಾಯಚೂರು ನಗರದ ಎಚ್‌ಆರ್‌ಬಿ ಕಾಲೋನಿಯಲ್ಲಿ ತಾಲೂಕ ಆರ್ಯ ಈಡಿಗ ಸಂಘದ ಕಚೇರಿಯಲ್ಲಿ ಹಿಂದುಳಿದ ವರ್ಗದ ಮುಖಂಡರುಗಳೊಂದಿಗೆ ಸೌಹಾರ್ಧಯುತವಾಗಿ ಸಮಾಲೋಚನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ವೇಳೆ ಮಾತನಾಡಿ, ನಾನು ಅಧಿಕಾರ ಅವಧಿಯಲ್ಲಿಯೂ ನನ್ನ ಕೈಲಾದಷ್ಟು ಪ್ರಾಮಾಣಿಕವಾಗಿ ಜನರ ಸೇವೆಯನ್ನು ಮಾಡಿದ್ದೇನೆ. ಇನ್ನು ಹೆಚ್ಚಿನ ಸೇವೆಗಾಗಿ ಲೋಕಸಭಾ ಕ್ಷೇತ್ರದಿಂದ ನನಗೆ ಬೆಂಬಲಿಸುವ ಮೂಲಕ ಆಶೀರ್ವದಿಸಬೇಕೆಂದರು.

ನಗರದ ವಾರ್ಡ್ ನಂ. 8ರ ಕೋಟ್ ತಲಾರ ಬಡಾವಣೆಯಲ್ಲಿನ ಇಸ್ಲಾಮಿಕ್ ಸೆಂಟರ್‌ನಲ್ಲಿ ಮುಸ್ಲಿಂ ಸಮಾಜದ ಧರ್ಮ ಗುರುಗಳು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿದರು.

ನಗರದ ವೀರಶೈವ ಲಿಂಗಾಯತ ಮುಖಂಡರುಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಗೆ ಸಹಕಾರದೊಂದಿಗೆ ಜಿಲ್ಲಾಧಿಕಾರಿಯಾಗಿ ಸೇವೆ ಮಾಡಿದ್ದೇನೆ. ಇನ್ನು ಹೆಚ್ಚಿನ ಸಮಾಜ ಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷ ನನಗೆ ಲೋಕಸಭೆ ಅಭ್ಯರ್ಥಿಯನ್ನಾಗಿ ಮಾಡಿದೆ. ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಲಿ ಎಂದು ಮನವಿ ಮಾಡಿದರು.

ನಗರದ ನಗರೇಶ್ವರ ದೇವಸ್ಥಾನದಲ್ಲಿ ಆರ್ಯ ವೈಶ್ಯ ಸಮಾಜದ ಮುಖಂಡರೊಂದಿಗೆ ಸೌಹಾರ್ದಯುವಾಗಿ ಸಭೆ ನಡೆಸಿದರು. ಜಿಲ್ಲೆಯನ್ನು ಕೇಂದ್ರ ಸರ್ಕಾರ ಮಹಾತ್ವಾಕಾಂಕ್ಷಿ ಜಿಲ್ಲೆಯಾಗಿ ಆಯ್ಕೆಮಾಡಿದೆ. ಆದರೆ, ಹೆಚ್ಚಿನ ಅನುದಾನ ನೀಡುವಲ್ಲಿ ವಿಫಲವಾಗಿದೆ. ಏಮ್ಸ್ ಮಂಜೂರು ಸೇರಿ, ಈ ಹಿಂದುಳಿದ ಭಾಗವನ್ನು ಸಂಪೂರ್ಣ ಕಡೆಗಣಿಸಲಾಗುತ್ತಿದೆ. ನಿಮ್ಮ ಮನೆ ಮಗನಂತೆ ಕೆಲಸ ಮಾಡಲು ಈ ಚುನಾವಣೆಯಲ್ಲಿ ನನಗೆ ಆಶೀರ್ವದಿಸಿ. ನಿಮ್ಮ ಜೊತೆಯಲ್ಲಿಯೇ ಇದ್ದು ಕೆಲಸ ಮಾಡುವೆ ಎಂದು ತಿಳಿಸಿದರು.

ಆಜಾದ್ ನಗರ ಬಡಾವಣೆಯಲ್ಲಿ ಬ್ರಾಹ್ಮಣ ಸಮಾಜದ ಮುಖಂಡರಾದ ನರಸಿಂಹರಾವ್ ದೇಶಪಾಂಡೆ ಅವರು ನಿವಾಸದಲ್ಲಿ ಬ್ರಾಹ್ಮಣ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದು, ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದು, ಇದೀಗ ರಾಜಕೀಯದ ಮೂಲಕ ಸೇವೆ ಮಾಡಲು ನನಗೊಂದು ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ರಾಂಪುರ ರಸ್ತೆಯಲ್ಲಿರುವ ಸೆಂಟ್ರಲ್ ಮೆಥಡಿಸ್ಟ್ ಚರ್ಚ್‌ಗೆ ಬೇಟಿ ನೀಡಿ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು ಜಿಲ್ಲೆಯ ಅಭಿವೃದ್ಧಿ ಕೆಲಸ ಮಾಡುವುದಾಗಿ ತಿಳಿಸಿದರು, ಚುನಾವಣೆಯಲ್ಲಿ ಬೆಂಬಲಿಸಬೇಕು ಎಂದರು.

ಚರ್ಚಿನ ಡಿ.ಎಸ್. ರವರೆಂಡ್ ಸೀಮೋನ್ ಅವರು ಪ್ರಾರ್ಥಿಸಿ ಕಾಂಗ್ರೆಸ್ ಅಭ್ಯರ್ಥಿಯಾದ ಕುಮಾರ್ ನಾಯಕರಿಗೆ ಶುಭ ಹಾರೈಸಿ ಸನ್ಮಾನಿಸಿದರು. ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ವೀರಶೈವ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಆಶೀರ್ವದಿಸಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಕಾಂಗ್ರೆಸ್ ಮುಖಂಡ ಕೆ. ಶಾಂತಪ್ಪ, ಮೊಹ್ಮದ್ ಶಾಲಂ, ಜಂಬಣ್ಣ, ದೊಡ್ಡ ಖಾಜನಗೌಡ, ಈರಪ್ಪ ಗೌಡ, ಕೆ. ಹನುಮಂತಪ್ಪ, ಶರಣಪ್ಪ ಕಡಗೋಲ್, ಸುರೇಖಾ, ಈರಮ್ಮ ವಕೀಲ್, ಗಾಯತ್ರಿ  ಜಿಂದಪ್ಪ, ಅಂಜಲಿ, ಇಶಾಮುದ್ದಿನ್, ಮೌಲಾನಾ ಫರೀದ್, ಆದಮ್ ಮಾನ್ವಿ, ಅಸ್ಲಾಂ ಸಾಬ್, ಏಜಾಜ್ ಸಾಬ್, ಇಮ್ತಿಯಾಜ್ ಇಂಜಿನಿಯರ್, ಗಫೂರು, ವೀರಶೈವ ಲಿಂಗಾಯತ ಸಮಾಜ ಮುಖಂಡರಾದ ಹರವಿ ನಾಗನಗೌಡ, ಉಪಾದ್ಯಕ್ಷರಾದ ಅಶೋಕ್ ಕುಮಾರ್ ಪಾಟೀಲ್, ಕಾರ್ಯದರ್ಶಿ ವಿರುಪನಗೌಡ ಬಂಡಿ,  ಬಸವರಾಜ ರೆಡ್ಡಿ, ಶರಣರಡ್ಡಿ, ಕಲ್ಲಯ್ಯ ಸ್ವಾಮಿ, ವಿಜಯ ಬಾಸ್ಕರ್, ಆನಂದ ಪಾಟೀಲ್, ಚನ್ನಬಸವ, ಜಿ.ಶಿವಮೂರ್ತಿ, ಬಸವರಾಜ ಪಾಟೀಲ್ ಅತ್ತನೂರು, ರಾಘವೇಂದ್ರ, ಗೋಪಾಲ್, ಸಾವಿತ್ರಿ ಪುರುಷೋತ್ತಮ, ಪದ್ಮರಾಜ್ ಅಯ್ಯ, ಜಯಂತರಾವ್ ಪತಂಗೆ, ಎಂ.ಆರ್. ದತ್ತು, ಚಾಗಿ ವೆಂಕಟೇಶ, ಚಿತ್ರಾಲ್ ರಮೇಶ, ವಿನೋದ್ ಕುಮಾರ್, ಬ್ರಾಹ್ಮಣ ಸಮಾಜದ ಮುಖಂಡರಾದ ನರಸಿಂಗರಾವ್ ದೇಶಪಾಂಡೆ, ಆನಂದ ಫಡ್ನೀಸ್, ಪ್ರಹಲ್ಲಾದ್ ರಾವ್, ವೆಂಕಟೇಶ ಕೋಲಾರ್, ಸುಧೀರ್, ಗುರುರಾಜರಾವ್ ಕುಲಕರ್ಣಿ, ಕಾಂಗ್ರೆಸ್ ಮುಖಂಡರಾದ ಬಸವರಾಜರೆಡ್ಡಿ, ಬಿ.ರಮೇಶ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...