ರಾಯಚೂರು | ಜೋಳದ ರಾಶಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಲಕ್ಷಾಂತರ ಮೌಲ್ಯದ ಧಾನ್ಯ ಬೂದಿ

Date:

ಗೂಡು ಹಾಕಿದ್ದ ಜೋಳದ ರಾಶಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಲಕ್ಷಾಂತರ ಮೌಲ್ಯದ ಜೋಳ ಹಾಗೂ ಹಸು ತಿನ್ನುವ ಸಿಪ್ಪೆ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದ ಜಮೀನೊಂದರಲ್ಲಿ ನಡೆದಿದೆ.

ಗ್ರಾಮದ ರಾಜಶೇಖರ್ ಗೌಡ ಅವರಿಗೆ ಸೇರಿದ ಜೋಳದ ರಾಶಿ ಎನ್ನಲಾಗಿದೆ. ಸರ್ವೆ ನಂ 61/ಪಿ.1ರ ಒಟ್ಟು 6.5 ಎಕರೆ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ರಾಶಿ ಹಾಗೂ ಸಿಪ್ಪೆಗೆ ಬೆಂಕಿ ಹಚ್ಚಲಾಗಿದೆ. ಸುಮಾರು ₹15 ಲಕ್ಷ ಮೌಲ್ಯದ ಜೋಳದ ತೆನೆ ಹಾಗೂ ದನಗಳು ತಿನ್ನುವ ಸಿಪ್ಪೆ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

ಗ್ರಾಮ ಲೆಕ್ಕಾಧಿಕಾರಿ ಮೌನೇಶ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ವರದಿ ಪಡೆದು ಪರಿಶೀಲನೆ ‌ನಡೆಸಿದರು.

- Advertisement -

ಈ ಸುದ್ದಿ ಓದಿದ್ದೀರಾ?: ರಾಯಚೂರು | ಪ್ರಯಾಗರಾಜ್‌ನ ಕುಂಭಮೇಳದಲ್ಲಿ ಸೂಕ್ತ ವ್ಯವಸ್ಥೆಯಿಲ್ಲದೆ ಹಲವು ಮಂದಿ ಸಾವು: ಎನ್ ಎಸ್ ಬೋಸರಾಜ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಜೋಳದ ರಾಶಿಗೆ ಬೆಂಕಿ ಹಚ್ಚಿದ ಪ್ರಕರಣ ಕುರಿತು ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಜತೆಗೆ ನಷ್ಟಕ್ಕೆ ಒಳಗಾದ ರೈತ ಎನ್ ರಾಜಶೇಖರ್ ಗೌಡ ಅವರಿಗೆ ಸರ್ಕಾರದಿಂದ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...