ರಾಯಚೂರು | ʼಮಾದಕ ವ್ಯಸನದಿಂದ ಯುವಕರ ರಕ್ಷಣೆಗೆ ಪೊಲೀಸ್ ಇಲಾಖೆ ಮುಂದಾಗಬೇಕುʼ

Date:

ಪ್ರಸ್ತುತ ದಿನಮಾನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಯುವ ಸಮೂಹ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದನ್ನು ತಡೆಗಟ್ಟಲು ಇಲಾಖೆಗಳು ಮುಂದಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಬಸವರಾಜ್ ಬಾದರ್ಲಿ ಹೇಳಿದರು.

ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಇತ್ತೀಚೆಗೆ ತಾಲೂಕಿನಲ್ಲಿ ಗಾಂಜಾ, ಡ್ರಗ್ ಸೇರಿದಂತೆ ಅಮಲೇರಿಸುವ ಪದಾರ್ಥಗಳ ಮಾರಾಟ ಜಾಲ ಹೆಚ್ಚುತ್ತಿದ್ದು, ಇದರಿಂದ ಅನೇಕ ಯುವಕರ ಭವಿಷ್ಯ ವಿದ್ಯಾರ್ಥಿ ದಿಸೆಯಲ್ಲಿದ್ದಾಗಲೇ ಕಮರುತ್ತಿದೆ. ಯುವ ಸಮೂಹದ ಸದೃಢ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡು ಭವ್ಯ ದೇಶ ಕಟ್ಟಲು ಮುಂದಡಿಯಿಡಬೇಕು” ಎಂದರು.

ಯಾವುದೇ ರೀತಿಯಲ್ಲೂ ಮಕ್ಕಳು, ಯುವಕರು ಹಾಗೂ ಅವರ ಕುಟುಂಬ ಬೀದಿಗೆ ಬರದಂತೆ ರಕ್ಷಿಸುವ ಕೆಲಸ ಆಗಬೇಕು. ಇಲಾಖೆಯು ಜಿಲ್ಲಾದ್ಯಂತ ತಂಡಗಳನ್ನು ರಚಿಸಿ ಎಗ್ಗಿಲ್ಲದೆ ನಡೆಯುತ್ತಿರುವ ಮಾದಕ ವಸ್ತು ಮಾರಾಟ ಜಾಲಗಳನ್ನು ಬೇಧಿಸಬೇಕು. ಮಾರಾಟ ಮತ್ತು ಸೇವನೆ ಮಾಡಿದವರಿಗೆ ಕಠಿಣ ಶಿಕ್ಷೆ ಎನ್ನುವ ಕಾನೂನು ರೂಪಿಸಬೇಕು. ಇಲ್ಲವಾದಲ್ಲಿ ಸಣ್ಣ ವಯಸ್ಸಿಗೇ ಮಕ್ಕಳಾದಿಯಾಗಿ ಮಾದಕ ಕೂಪಕ್ಕೆ ಬಿದ್ದು ಕುಟುಂಬ ಸಮೇತ ಭವಿಷ್ಯ ಹಾಳಾಗುತ್ತದೆ” ಎಂದು ಕಳವಳಗೊಂಡರು.

- Advertisement -

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ: ಸಚಿವ ಬೋಸರಾಜು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಈ ವೇಳೆ ನಿಸಾರ್ ಖಾನ್, ಜಾವಿದ್ ಖಾದ್ರಿ, ಅಬ್ದುಲ್ ನಾಯಕ್, ಸಿರಾಜ್ ಪಾಶ, ಹನುಮಂತಪ್ಪ ಕರ್ಲಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ರೇಬೀಸ್ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ ಡಾ.ಗುರುಶಾಂತಪ್ಪ 

ರೇಬೀಸ್ ಖಾಯಿಲೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಕಾಣಸಿಗುವಂತಹದ್ದು. ಜಗತ್ತಿನಲ್ಲಿ ಸುಮಾರು 60,000...

ಚಿಕ್ಕಮಗಳೂರು | ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ; ಡಾ.ಭೀಮೇಶ್ವರ ಜೋಷಿ

ಕಳಸ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ...

ಚಿಕ್ಕಮಗಳೂರು | ಕುಡಿತ ಚಟ: ಹೆತ್ತ ತಂದೆಯನ್ನೇ ಹತ್ಯೆಗೈದ ಮಗ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಕುಡಿತದ...