ರಾಯಚೂರು | ಜಗತ್ತೇ ಇಂಟರ್‌ನೆಟ್ ಜಾಲದಲ್ಲಿ ತೇಲುತ್ತಿದೆ, ಎಚ್ಚರಿಕೆಯಿಂದ ಬಳಸಿ:ಇಂಟರ್‌ನೆಟ್

Date:

Advertisements

ಜಗತ್ತು ಇಂಟರ್‌ನೆಟ್‌ ಎಂಬ ಜಾಲದಲ್ಲಿ ಮುಳುಗಿದ್ದು, ಪ್ರಸ್ತುತ ವಿವಿಧ ರೀತಿಯಲ್ಲಿ ವಂಚಿಸುವ ಈ ಜಾಲತಾಣವು ಸಮಾಜವನ್ನು ಕಾಡುತ್ತಿದೆ. ಆದ್ದರಿಂದ ಇಂಟರ್‌ನೆಟ್‌ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ರಾಯಚೂರಿನ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಲಹೆ ನೀಡಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ವಿಶ್ವ ಸುರಕ್ಷಿತ ಅಂತರ್ಜಾಲ ದಿನಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಮೊಬೈಲ್‌ನಲ್ಲಿ ಹಲವು ಆನ್‌ಲೈನ್ ವ್ಯವಹಾರವನ್ನು ಮಾಡುತ್ತಿದ್ದೇವೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡು ಹಲವು ವಂಚಕರು ದುರುಪಯೋಗಪಡಿಸಿಕೊಳ್ಳುವ ಕಾರ್ಯ ಮಾಡುತ್ತಿದ್ದಾರೆ. ಹಾಗಾಗಿ ಒಟಿಪಿ ಇನ್ನಿತರ ಕೋಡ್‌ಗಳನ್ನು ಅನ್ಯರಿಗೆ ನೀಡದೆ ಅವಶ್ಯಕತೆಗೆ ತಕ್ಕಂತೆ ಬಳಸಿಕೊಳ್ಳಬೇಕಾಗಿದೆ” ಎಂದರು.

Advertisements

“ಹಿಂದೆ ನೇರವಾಗಿ ವಂಚನೆಗಳು ದರೋಡೆ, ಕಳ್ಳತನ ಇಂತಹ ವಂಚನೆಗಳಾಗುತ್ತಿದ್ದವು. ಆದರೆ ಈಗ ಆನ್‌ಲೈನ್ ಮೂಲಕ ಉದ್ಯೋಗಾವಕಾಶ, ಹಣಕಾಸು, ವೈಯಕ್ತಿಕ ಮಾಹಿತಿ, ದಾರಿತಪ್ಪಿಸುವ, ಸುಳ್ಳು, ಟ್ರೋಲ್, ಬೆದರಿಕೆ, ಕಿರುಕುಳ, ಅನಿಯಂತ್ರಿತ ವೆಚ್ಚಗಳು, ಸ್ಕ್ಯಾಮ್ ಹೀಗೆ ಹಲವು ರೀತಿಯ ಅಪರಾಧಗಳು ನಡೆಯುತ್ತಿವೆ. ಯಾವುದೇ ಆನ್‌ಲೈನ್ ಅಥವಾ ಸೈಬರ್ ಅಪರಾಧಗಳಾದಾಗ ಸಂಬಂಧಿಸಿದವರಿಗೆ ಕರೆಮಾಡಿ ದೂರು ದಾಖಲಿಸಬಹುದು” ಎಂದರು.

“ಯಾವುದೇ ಬ್ಯಾಂಕ್‌ಗಳು ಕರೆ ಮಾಡಿ ಒಟಿಪಿಯನ್ನು ಕೇಳುವುದಿಲ್ಲ. ಬೇರೆ ಅನ್ಯತಾ ಕಾಲ್ ಬಂದರೆ ಯಾರಿಗೂ ಅನಗತ್ಯ ಒಟಿಪಿ ನೀಡುವ ಕೆಲಸವನ್ನು ಮಾಡಬೇಡಿ. ಪ್ರತಿಯೊಬ್ಬರೂ ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ. ಬಳಸುವ ಪ್ರತಿಯೊಬ್ಬರಿಗೂ ಸುರಕ್ಷಿತ ಬಳಕೆಯ ಬಗ್ಗೆ ಸರಿಯಾದ ಮಾಹಿತಿ ಇರುವುದಿಲ್ಲ. ಸದ್ಯ ಕಚೇರಿ ಕೆಲಸಗಳನ್ನು ಕುಳಿತಲ್ಲಿಂದಲೇ ಮಾಡುವ ಪರಿಣಿತಿಯನ್ನು ಹೊಂದಿದ ಬಳಕೆದಾರರು ಅನೇಕರಿದ್ದಾರೆ. ಅಷ್ಟರ ಮಟ್ಟಿಗೆ ಇಂಟರ್‌ನೆಟ್ ಬಳಕೆ ಮತ್ತು ಅದರ ಉಪಯೋಗವಾಗುತ್ತಿದೆ. ಆದರೆ ಇಷ್ಟೆಲ್ಲ ಲಾಭದ ಮಧ್ಯೆಯೂ ತೊಂದರೆಯನ್ನೂ ಅನುಭವಿಸಬೇಕಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅಧ್ವಾನದ ಆಗರ ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆ

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ಹಾಗೂ ಪೊಲೀಸ್ ಇಲಾಖೆಯ ಸೈಬರ್ ಘಟಕದ ನಿರ್ದೇಶಕ ರವಿಶೇಖರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುರೇಂದ್ರ ಬಾಬು, ಆಯುಷ್ ಇಲಾಖೆಯ ಅಧಿಕಾರಿ ಡಾ. ಶಂಕರಗೌಡ ಎಸ್ ಪಾಟೀಲ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಕೃಷ್ಣ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ನಂದಿತಾ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ. ಮಹ್ಮದ್ ಶಾಕೀರ ಮೊಹಿಯುದ್ದೀನ್, ಸೈಬರ್ ಘಟಕದ ಪೊಲೀಸ್ ಇನ್‌ಸ್ಪೆಕ್ಟರ್ ರಾಜಕುಮಾರ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X