ರಾಯಚೂರು | ರೈತ ಸಂಪರ್ಕ ಕೇಂದ್ರದಲ್ಲಿ ಅಧಿಕಾರಿಗಳೇ ಇಲ್ಲ; ರೈತರ ಪರದಾಟ

Date:

Advertisements

ರೈತರಿಗೆ ಅಗತ್ಯ ಸೇವೆಗಳನ್ನು-ಮಾಹಿತಿಗಳನ್ನು ಒದಗಿಸುವುದು ರೈತ ಸಂಪರ್ಕ ಕೇಂದ್ರ. ಇಲ್ಲಿ ಕೃಷಿಗೆ ಸಂಬಂಧಿಸಿದ  ಬಿತ್ತನೆ ಬೀಜ, ಗೊಬ್ಬರ, ರಾಸಾಯನಿಕ ಧಾನ್ಯಗಳು ಇನ್ನಿತರ ವಸ್ತುಗಳು ದೊರೆಯುತ್ತವೆ. ದಿನನಿತ್ಯ ಇಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಬೇಕಾದ ಸಾಮಾಗ್ರಿಗಳ ಖರೀದಿಗೆ ಬರುತ್ತಾರೆ. ಆದರೆ, ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ರೈತರಿಗೆ ಈ ಕೇಂದ್ರದ ಸೇವೆ ಪಡೆಯಲು ಸಾಧ್ಯವೇ ಆಗುತ್ತಿಲ್ಲ.

ಮಸ್ಕಿ ರೈತ ಸಂಪರ್ಕ ಕೇಂದ್ರಕ್ಕೆ ವಿವಿಧ ಹುದ್ದೆಗಳಿಗೆ ಆರು ಮಂದಿ ಅಧಿಕಾರಿಗಳ ಅಗತ್ಯವಿದೆ. ಆದರೆ, ಒಬ್ಬರೇ ಒಬ್ಬರು ಅಧಿಕಾರಿಗಳೂ ಈ ಕೇಂದ್ರದಲ್ಲಿಲ್ಲ. ಇದು ಇಂದು-ನಿನ್ನೆಯ ಪರಿಸ್ಥಿತಿಯಲ್ಲ. ಬರೋಬ್ಬರಿ 08 ತಿಂಗಳುಗಳಿಂದ ಕೇಂದ್ರವು ಅಧಿಕಾರಿಗಳಿಲ್ಲದೆ ಖಾಲಿ ಬಿದ್ದಿದೆ.

ಅಗತ್ಯವಿರುವ ಆರು ಮಂದಿ ಅಧಿಕಾರಿಗಳಲ್ಲಿ, ಕೆಲವರು ಇದ್ದರು. ಆದರೆ, ಎಂಟು ತಿಂಗಳ ಹಿಂದೆ ಅವರು ವರ್ಗಾವಣೆಯಾಗಿದ್ದಾರೆ. ಮೊಲದೇ ಕೆಲವು ಅಧಿಕಾರಿಗಳ ಕೊರತೆಯಿದ್ದ ಕೇಂದ್ರಕ್ಕೆ, ಇದ್ದ ಅಧಿಕಾರಗಳೂ ವರ್ಗಾವಣೆಯಾಗಿದ್ದರಿಂದ ಸಂಪೂರ್ಣ ಖಾಲಿಯಾಗಿದೆ.

Advertisements

ಕೆಲವೊಮ್ಮೆ ಲಿಂಗಸಗೂರು ಮೇಲಾಧಿಕಾರಿ ಉಸ್ತುವಾರಿಗಳು ಈ ಕೇಂದ್ರಕ್ಕೆ ಬಂದು ಕೃಷಿ ಯೋಜನೆ ಅಡಿಯಲ್ಲಿ ಕೇಂದ್ರಕ್ಕೆ ಬರುವ ತಾಡ್ ಪತ್ರ , ಪೈಪ್‌ಗಳು, ಬಿತ್ತನೆ ಬೀಜಗಳನ್ನು ವಿತರಿಸಿ ಹೋಗುತ್ತಾರೆ. ಆದರೆ, ಅವರು ಯಾವಾಗ ಬರುತ್ತಾರೆ ಎಂಬುದು ಗೊತ್ತಿಲ್ಲದ ರೈತರು ಕೇಂದ್ರದ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ.

ಈ ವರ್ಷ ಮಸ್ಕಿಯಲ್ಲಿ ಒಂದೆಡೆ ಮುಂಗಾರು ಮಳೆ ಕೈಕೊಟ್ಟಿದ್ದಾರೆ, ಮತ್ತೊಂದೆಡೆ ಬಿತ್ತನೆ ಬೀಜ ಸೇರಿದಂತೆ ಅಗತ್ಯ ಕೃಷಿ ಸೌಲಭ್ಯಗಳು ದೊರೆಯದೆ ರೈತರು ಕಂಗಾಲಾಗಿದ್ದಾರೆ. ರೈತ ಸಂಪರ್ಕ ಕೇಂದ್ರದಲ್ಲಿ ಅಧಿಕಾರಿಗಳಿಲ್ಲವೆಂದು ಆಕ್ರೋಶಗೊಂಡಿದ್ದಾರೆ.

ಸ್ಥಳೀಯ ರೈತ ಮುಖಂಡ ವಿಜಯ ಬಡಿಗೇರ್ ಈದಿನ.ಕಾಮ್ ಜೊತೆ ಮಾತನಾಡಿ, “ಸುಮಾರು 08 ತಿಂಗಳಿಂದ ಅಧಿಕಾರಿಗಳು ಇಲ್ಲ. ಸರ್ಕಾರದಿಂದ ತಾಡಪಾತ್ರೆ ಬಂದಿವೆ. ಆದ್ರೆ ಅದನ್ನು ಕೊಡುವುದಕ್ಕೆ ಅಧಿಕಾರಿಗಳೇ ಇಲ್ಲ. ಈ ಸಮಸ್ಯೆಗಳ ಬಗ್ಗೆ ನಾವು ಯಾರಿಗೆ ಕೇಳಬೇಕು” ಎಂಬುದೇ ತಿಳಿಯುತ್ತಿಲ್ಲ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸನಾತನ ಧರ್ಮ ಹೇಳಿಕೆ: ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

“ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳ ಕೊರತೆ ಬಗ್ಗೆ ಮಸ್ಕಿ ಶಾಸಕರು ಬಸನಗೌಡ ತುರುವಿಹಾಳ ಅವರಿಗೆ ಕೂಡ ಮನವಿ ಸಲ್ಲಿಸಲಾಗಿದೆ. ಸಂಬಂಧ ಪಟ್ಟ ಇಲಾಖೆ ಕೂಡಲೇ ಅಧಿಕಾರಿಗಳನ್ನು ನೇಮಕ ಮಾಡಬೇಕು. ಇಲ್ಲವಾದಲ್ಲಿ, ಮುಂದಿನ ದಿನಗಳಲ್ಲಿ ಶಾಸಕರ ಭವನ ಮುಂದೆ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಈದಿನ.ಕಾಮ್ ಜೊತೆ ಮಾತನಾಡಿದ ಲಿಂಗಸಗೂರು ಸಹಾಯಕ ಕೃಷಿ ಅಧಿಕಾರಿ ಅಮರೇಗೌಡ, “ಸಿಬ್ಬಂದಿಗಳ ಕೊರತೆ ಇದೆ. ಕೇಂದ್ರಕ್ಕೆ 06 ಮಂದಿ ಸಿಬ್ಬಂದಿ ಬೇಕಾಗಿದ್ದಾರೆ. ಮಸ್ಕಿ ರೈತ ಸಂಪರ್ಕ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದವರು ವರ್ಗಾವಣೆ ಆಗಿದ್ದಾರೆ. ಈ ಕೊರತೆಯಿಂದ ಸಮಸ್ಯೆ ಆಗಿದೆ. ಪ್ರಸ್ತುತ ನಾನು ಕೂಡ 2 ಕಡೆ ಉಸ್ತುವಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಸಮಸ್ಯೆ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದಷ್ಟು ಬೇಗ ಬಗೆಹರಿಸಲಾಗುವುದು” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X