ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ರಕ್ತದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ ಎಂದು ರಹೆಮತ್ ಫೌಂಡೇಶನ್ ಸಂಚಾಲಕ ಲಾಲ್ ಪೀರ್ ಹೇಳಿದರು.
ರಾಯಚೂರಿನ ಹಟ್ಟಿ ಚಿನ್ನದ ಗಣಿ ಪಟ್ಟಣದ ಹಳೆ ಪಂಚಾಯತ್ ಉರ್ದು ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಭಾರತೀಯ ಸೈನಿಕರ ಸ್ಮರಣಾರ್ಥವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಅವರು. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ಕಾರಣ ಅದೆಷ್ಟೋ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅವಶ್ಯವಾಗಿದೆ. ಯುವ ಜನತೆ ರಕ್ತದಾನಕ್ಕೆ ಮುಂದಾಗಬೇಕು” ಎಂದರು.
ಈ ಸುದ್ದಿ ಓದಿದ್ದೀರಾ?: ರಾಯಚೂರು | ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಶಿಕ್ಷಕರಿಂದ ಮಾತ್ರ ಸಾಧ್ಯ: ಡಿಸಿ ನಿತೀಶ್
ಶಿಬಿರದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಮ್ದಾನಿ, ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ನಾಗರತ್ನ ಶರಣಗೌಡ, ಸದಸ್ಯ ರಾಜ್ ಮಹಮ್ಮದ್, ಸಮೀರ್, ಸಾದಿಕ್, ಚಂದಾವಲಿ, ಹೈಮದ್, ರಫಿ ಟೈಲರ್, ಅಪ್ಸರ್ ಪಾಶ, ರಸೂಲ್ ಸಾಬ್ ಇನ್ನಿತರರು ಇದ್ದರು.
