ರಾಯಚೂರು | ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸವಾಗಬೇಕಿದೆ: ಹಿರಿಯ ಸಾಹಿತಿ ಮುಕ್ಕುಂದಿ

Date:

ಇತ್ತೀಚಿನ ಕಾಲಘಟ್ಟದಲ್ಲಿ ಕನ್ನಡ ಸಾಹಿತ್ಯದ ಹಾದಿ ಬೇರೆಡೆಯೇ ಸಾಗುತ್ತಿದೆ. ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸ ಮಾಡಬೇಕಿದೆ. ಕನ್ನಡ ಓದುವುದು, ಮಾತನಾಡುವುದು ಕಡಿಮೆಯಾಗುತ್ತಿದೆ, ಕನ್ನಡ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ಸಾಗಿಸುವಂತಹ ಚಿಂತನೆಯಾಗಬೇಕಿದೆ ಎಂದು ರಾಯಚೂರಿನ ಹಿರಿಯ ಸಾಹಿತಿ ಶಾಶ್ವತಯ್ಯಸ್ವಾಮಿ ಮುಕ್ಕುಂದಿ ಮಠ ಅಭಿಪ್ರಾಯಪಟ್ಟರು.

- Advertisement -

ನಗರದ ಕನ್ನಡ ಭವನದಲ್ಲಿ ವಿಮಾಬಾಯಿ ಭಗತ್‌ರಾಜ್ ನಿಜಾಮಕಾರಿ ಪ್ರತಿಷ್ಠಾನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಆಯೋಜಿಸಿದ್ದ ʼಬಿ.ಟಿ ಲಲಿತಾ ನಾಯಕ ಅವರಿಗೆ ಪ್ರೇರಣಾ ಪ್ರಶಸ್ತಿʼ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಗತ್‌ರಾಜ್ ನಿಜಾಮಕಾರರು ಅನೇಕ ವರ್ಷಗಳಿಂದ ಪ್ರೇರಣಾ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ. ಕನ್ನಡ ಸಾಹಿತ್ಯವನ್ನ ಬೆಳೆಸಬೇಕು ಎನ್ನುವ ಅವರ ಆಸಕ್ತಿ ಇಳಿ ವಯಸ್ಸಿನಲ್ಲೂ ಕಡಿಮೆಯಾಗಿಲ್ಲ. ತಮ್ಮ ಪತ್ನಿಯ ಹೆಸರಿನಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರೇರಣಾ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. ಅವರ ಈ ನಡೆ ಕನ್ನಡ ಸಾಹಿತ್ಯಾಸಕ್ತಿದಾರರಿಗೆ ಮತ್ತಷ್ಟು ಪ್ರೇರಣೆ ನೀಡಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡಾ. ಸ್ವಾಮಿರಾವ್ ಕಲಬುರಗಿ ಮಾತನಾಡಿ, “ಕನ್ನಡ ಸಾಹಿತ್ಯ ಎತ್ತ ಸಾಗುತ್ತಿದೆ ಅರಿಯದಾಗಿದೆ. ಇಂದಿನ ಪೀಳಿಗೆಗೆ ಕನ್ನಡ ಸಾಹಿತ್ಯದ ಓದು ಬೇಡವಾಗಿದೆ. ಜಾತಿ, ಧರ್ಮ, ಮತ, ಪಂತ, ಪಂಗಡ ಮೀರಿ ಸಾಹಿತ್ಯ, ವೈಚಾರಿಕ ಚಿಂತನೆಗಳ ಮೂಲಕ ಕನ್ನಡ ಕನಸುಗಳನ್ನು ಕಟ್ಟಬೇಕಿದೆ. ಸಮಾಜದಲ್ಲಿ ಸಜ್ಜನರು ಸುಮ್ಮನಿದ್ದರೆ ದುರ್ಜನರು ಘರ್ಜಿಸುತ್ತಾರೆ. ಅನ್ಯಾಯ, ಅನೀತಿಯನ್ನು ಪ್ರತಿಭಟಿಸುವ ಶಕ್ತಿಯನ್ನು ಸಜ್ಜನರ ವರ್ಗ ಕಳೆದುಕೊಳ್ಳುತ್ತಿದೆ. ರಾಜ್ಯದಲ್ಲಿ 17 ಕನ್ನಡ ಪ್ರತಿಷ್ಠಾನಗಳು ಕೆಲಸ ಮಾಡುತ್ತಿವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾತ್ರ ಒಂದೂ ಇಲ್ಲ. ಬಿಜಾಪುರದಲ್ಲಿ 4, ಬೆಂಗಳೂರಿನಲ್ಲಿ 8, ಧಾರವಾಡದ 6 ಪ್ರತಿಷ್ಠಾನಗಳಿಗೆ ಸರ್ಕಾರವೇ ಧನ ಸಹಾಯ ನೀಡುತ್ತಿದೆ. ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರವಾಗಿದೆ, ಶರಣರು, ಜೈನರು, ದಾಸರ ಬೀಡಾಗಿದೆ. ಈ ಭಾಗದಲ್ಲಿ ಪ್ರತಿಷ್ಠಾನ ಮಾಡಲು ರಾಜಕಾರಣಿಗಳು ಮನಸ್ಸು ಮಾಡುತ್ತಿಲ್ಲ. ಕೇವಲ ಆಶ್ವಾಸನೆ, ಭರವಸೆಗೆ ಮಾತ್ರ ಸೀಮಿತವಾಗಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ನಗರದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್: ಪಾಲಿಕೆ ಆಯುಕ್ತ ಜುಬಿನ್

ಈ ವೇಳೆ ಚಿಂತಕಿ ಬಿಟಿ ಲಲಿತಾ ನಾಯಕ ಅವರಿಗೆ ಪ್ರೇರಣಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಾಬು ಬಂಡಾರಿಗಲ್, ಕಸಾಪ ತಾಲೂಕು ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ, ರಾವುತರಾವ್, ಬಷೀರ್ ಅಹ್ಮದ್ ಹೊಸಮನಿ, ಶಿವಶಂಕರ ನಿಜಾಮ ಕಾರಿ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...