ರಾಯಚೂರು | ಮೀಸಲಾತಿ ಅನುಭವಿಸುತ್ತಿರುವವರು ಸಮುದಾಯದ ಋಣ ತೀರಿಸಬೇಕು

Date:

ಪೂನಾ ಒಪ್ಪಂದದಂತೆ ಪರಿಶಿಷ್ಟ ಜಾತಿ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಡಾ ಬಿ ಆರ್ ಅಂಬೇಡ್ಕರ್ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ. ಸ್ವತಃ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯವನ್ನು ಸರಿಪಡಿಸಲು ಶೇ. 15ರಷ್ಟು ಹಣವನ್ನು ಮರಳಿಸಬೇಕು. ಇಲ್ಲದೇ ಹೊದಲ್ಲಿ ಹೈಕೋ‌ರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ಡಾ ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಸಂಸ್ಥಾಪಕ ಅಧ್ಯಕ್ಷ ದೇವಮಿತ್ರ ಹೇಳಿದರು.

- Advertisement -

ರಾಯಚೂರಿನಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ ಅವರು ಮಾತನಾಡಿದರು. “ಅಸ್ಪೃಶ್ಯತೆ ಆಚರಣೆ ನಿರ್ಮೂಲನೆ ಮಾಡಿ, ಪ್ರತ್ಯೇಕ ಮತದಾನ ಹಕ್ಕನ್ನು ಡಾ. ಬಿ ಆರ್ ಅಂಬೇಡ್ಕರ್ ಪಡೆದುಕೊಂಡಿದ್ದರು. ಆದರೆ‌, ಮಹಾತ್ಮ ಗಾಂಧೀಜಿ ಇದನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಿದ್ದರಿಂದ ಪರಿಶಿಷ್ಟರಿಗೆ ಎರಡು ಮತದಾನದ ಅವಕಾಶ ತಪ್ಪಿತು. 1912ರಿಂದ 1932ರವರೆಗೆ ಡಾ ಬಿ ಆರ್ ಅಂಬೇಡ್ಕರ್ ಹೋರಾಟ ನಡೆಸಿ ಅಸ್ಪೃಶ್ಯರಿಗೆ ಪ್ರತ್ಯೇಕ ಮತದಾನದ ಹಕ್ಕನ್ನು ಬ್ರಿಟಿಷರಿಂದ ಪಡೆದಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಗಾಂಧೀಜಿ ಅಸ್ಪೃಶ್ಯರ ಪ್ರತ್ಯೇಕ ಮತದಾನ ಹಕ್ಕಿಗೆ ವಿರೋಧಿಸಿದರು. ಪೂನಾ ಒಪ್ಪಂದದಂತೆ ಅಸ್ಪಶ್ಯ ಸಮುದಾಯಗಳಿಗೆ ಮೀಸಲಾತಿ ನೀಡಲು ತೀರ್ಮಾನಿಸಲಾಯಿತು. ಆದರೆ, ಮೀಸಲಾತಿ ಸದುಪಯೋಗ ಪಡೆದ ಚುನಾಯಿತ ಜನಪ್ರತಿನಿಧಿಗಳು, ಸರ್ಕಾರಿ ನೌಕರರು ಅಸ್ಪೃಶ್ಯತೆ ಮತ್ತು ಬಡತನ ನಿರ್ಮೂಲನೆಗೆ ಪ್ರಯತ್ನಿಸದೆ ಸಮುದಾಯಕ್ಕೆ ಮೋಸ ಮಾಡಿದ್ದಾರೆಂದು ಸ್ವತಃ ಅಂಬೇಡ್ಕರ್ ಅವರೇ ಹೇಳಿದ್ದರು” ಎಂದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಪಡಿತರ ಚೀಟಿ ತಿದ್ದುಪಡಿ; ಇನ್ನೂ ಬಗೆಹರಿಯದ ಸರ್ವರ್‌ ಸಮಸ್ಯೆ

“ಮೀಸಲಾತಿ ಪಡೆದವರಿಂದಲೇ ಆಗುತ್ತಿರುವ ವಂಚನೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿ ಹಣ ಮರಳಿಸಲು ಹೋರಾಟ ನಡೆಸಲಾಗುತ್ತದೆ. ಮೀಸಲಾತಿ ಅನುಭವಿಸುತ್ತಿರುವವರು ಮರಳಿ ಡಾ ಬಿ ಆರ್ ಅಂಬೇಡ್ಕರ್‌ ಅವರ ಋಣ ತೀರಿಸಬೇಕು. ಇಲ್ಲದೇ ಹೋದಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಅಸ್ಪೃಶ್ಯ ನಿರ್ಮೂಲನೆ ಬಳಸಲು ದೂರು ಸಲ್ಲಿಸಲಾಗುತ್ತದೆ” ಎಂದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿ ಎಂ ನಾರಾಯಣ ವಕೀಲ, ಮಹಾಂತೇಶ ಕುಮಾರ ಮಿತ್ರ, ಮದನಕುಮಾರ ಮಿತ್ರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...