ರಾಯಚೂರು | ಕಾರು-ಲಾರಿ ಮುಖಾಮುಖಿ: ಸ್ಥಳದಲ್ಲೇ ಮೂವರ ಸಾವು

Date:

Advertisements

ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಕಲ್ಲೂರ ಗ್ರಾಮದ ಬಳಿ ಸೋಮವಾರ ನಡೆದಿದೆ.

ಮೃತಪಟ್ಟವರನ್ನು ಕಾರಿನಲ್ಲಿದ್ದ ಆಫ್ರಾಜ್ ಬಿರಿಯಾನಿ, ಮಕ್ಬೂಲ್ ಮತ್ತು ಯಾಸೀನ್ ಎಂದು ಗುರುತಿಸಲಾಗಿದೆ. ಲಾರಿ ರಭಸಕ್ಕೆ ಕಾರು ಜಖಂಗೊಂಡಿದ್ದು, ಕ್ರೇನ್‌ನ ಸಹಾಯದಿಂದ ಕಾರನ್ನು ಬೇರ್ಪಡಿಸಿ, ಮೃತದೇಹವನ್ನು ಗ್ರಾಮಸ್ಥರು ಹೊರತೆಗೆದಿದ್ದಾರೆ.

ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಸಿರವಾರ ಕಡೆಗೆ ತೆರಳುತ್ತಿದ್ದರು. ಈ ವೇಳೆ ವಾಹನವೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ಕೂಡಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Advertisements

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ರಾಯಚೂರು ವಿವಿ ಕುಲಪತಿ ಮುಖ್ಯ ಅತಿಥಿ!

ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

WhatsApp Image 2024 10 14 at 5.18.06 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X