ರಾಯಚೂರು | ಶಾಸಕಿ ಪುತ್ರನಿಂದ ಟೋಲ್‌ಗೇಟ್ ಧ್ವಂಸ: ಶ್ರೀದೇವಿ ನಾಯಕ ಖಂಡನೆ

Date:

ಇತ್ತೀಚಿಗೆ ದೇವದುರ್ಗ ಶಾಸಕಿ ಜಿ.ಕರೆಮ್ಮ ನಾಯಕ ಪುತ್ರ  ಸಂತೋಷ ನಾಯಕ ಕಾಕರಗಲ್ ಬಳಿಯ ಟೋಲ್‌ಗೇಟ್ ಧ್ವಂಸಗೊಳಿಸಿದ್ದು, ಖಂಡನೀಯ, ದೇವದುರ್ಗ ವ್ಯಾಪ್ತಿಯಲ್ಲಿ ಶಾಸಕಿಯ ಪುತ್ರನಿಂದಲೇ ಗೂಂಡಾ ವರ್ತನೆ ಕಂಡುಬರುತ್ತಿದ್ದು, ಕೂಡಲೇ ಪೊಲೀಸರು ಸಂತೋಷ ನಾಯಕನನ್ನು ಬಂಧಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ಶ್ರೀದೇವಿ ನಾಯಕ ಆಗ್ರಹಿಸಿದರು.

- Advertisement -

ಅವರಿಂದು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ದೇವದುರ್ಗ ತಾಲೂಕಿನಲ್ಲಿ ಶಾಸಕಿ ಪುತ್ರನ ಗೂಂಡಾ ವರ್ತನೆ ಹೆಚ್ಚಾಗಿ ಹೋಗಿದ್ದು, ಈ ಹಿಂದೆಯೂ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿರುವ ಬಗ್ಗೆಯೂ ಆರೋಪಗಳಿದ್ದು, ಇದೀಗ ಟೋಲ್‌ಗೇಟ್ ಧ್ವಂಸಗೊಳಿಸಿ ಪುಂಡಾಟ ಮೆರೆದಿದ್ದಾನೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಟೋಲ್‌ಗೇಟ್ ತೆರವುಗೊಳಿಸಲು ಅದರದ್ದೇ ಆದ ನಿಯಮಗಳಿವೆ. ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಗಮನಕ್ಕೆ ತರಬೇಕು. ಅಥವಾ ಜಿಲ್ಲೆಯ ಅದಿಕಾರಿಗಳ ಗಮನಕ್ಕೆ ತಂದು ಟೋಲ್‌ಗೇಟ್ ತೆರವು ಮಾಡಿಸಬಹುದಿತ್ತು, ಆದರೆ ಈ ರೀತಿ ಟೋಲ್ ಧ್ವಂಸಗೊಳಿಸಿರುವುದು ಖಂಡನೀಯ ಎಂದರು. 

ಟೋಲ್ ಗೇಟ್ ಜನರ ತೆರಿಗೆಯಿಂದಾದ ಸರ್ಕಾರದ ಆಸ್ತಿಯಾಗಿದ್ದು, ಜನಪ್ರತಿನಿಧಿಯ ಪುತ್ರ ಈ ರೀತಿಯಾಗಿ ಗೂಂಡಾವರ್ತನೆ ತೋರಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಸರ್ಕಾರ ಅಧಿಕಾರಿಗಳು ಮಾತು ಕೇಳಿಲ್ಲವೆಂದು ಇಲಾಖೆಯ ಕಚೇರಿಗಳಿಗೂ ಹಾನಿ ಮಾಡುವ ಸಾಧ್ಯತೆಗಳಿರುತ್ತವೆ ಎಂದರು. 

ರೈತರ ಮೇಲಿನ ಕಾಳಜಿಯಿಂದ ಟೋಲ್ ಗೇಟ್ ಮುಚ್ಚುವಂತೆ ಶಾಸಕಿಯ ಪುತ್ರ ಹಾಗೂ ಬೆಂಬಲಿಗರು ಹೋರಾಟ ಮಾಡುತ್ತಿಲ್ಲ ಬದಲಾಗಿ ತಾವು ನಡೆಸುವ ಮರಳು ಸಾಗಾಣಿಕೆ ಸೇರಿ ಅಕ್ರಮ ದಂದೆಗಳಿಗೆ ತೊಂದರೆ ಉಂಟಾಗುತ್ತದೆ ಎಂಬ ಉದ್ದೇಶದಿಂದ ಈ ರೀತಿ ದಾಳಿಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಿದ್ದು ; ವಾಹನ ಭಸ್ಮ

ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಮಾಡಲಾಗುವುದು. ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೂ ಕೂಡ ಕೂಡಲೇ ಆರೋಪಿಯನ್ನು ಬಂದಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಮಾಲಾ ಭಜಂತ್ರಿ, ಮಂಜುಳಾ, ಖಾಸಿಂಬಿ ,ಲಕ್ಷ್ಮೀ ,ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...