ಜಿಲ್ಲಾಡಳಿತ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಯರಗೇರಾ ವತಿಯಿಂದ ತಾಲೂಕಿನ ಯರಗೇರಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕಚೇರಿಯಲ್ಲಿ ತೊಗರಿ ಬೆಳೆ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹ್ಮದ್ ನಿಜಾಮುದ್ದೀನ್, “ರೈತರು ಬೆಳೆದ ತೊಗರಿಗೆ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಎಕರೆಗೆ ಕನಿಷ್ಟ 4 ಕ್ವಿಂಟಲ್ ಗರಿಷ್ಠ 40 ಕ್ವಿಂಟಲ್ ಖರೀದಿ ಮಿತಿ ನಿಗದಿಪಡಿಸಿದ್ದು, ಪ್ರತಿ ಕ್ವಿಂಟಲ್‌ಗೆ ಕೇಂದ್ರ ಸರ್ಕಾರದಿಂದ 7550 ರೂ ಮತ್ತು ರಾಜ್ಯ ಸರ್ಕಾರದ ಸಹಾಯಧನ 450 ರೂ ಸೇರಿ ಒಟ್ಟು 8000 ರೂಗಳಿಗೆ ತೊಗರಿ ಖರೀದಿಸಿಲಾಗುವುದು” ಎಂದು ತಿಳಿಸಿದರು.
ಇದೇ ವೇಳೆ ಖರೀದಿ ಕೇಂದ್ರಕ್ಕೆ ಆರ್.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕ ವಿಜಯ್ ಕುಮಾರ್ ಪಾಟೀಲ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಶೇಖ್ ಹುಸೇನ್ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ: ರಾಯಚೂರು | ವಿವಿಗಳನ್ನು ಮುಚ್ಚುವ ತೀರ್ಮಾನ ಕೂಡಲೇ ಹಿಂಪಡೆಯಲು ಸಿಪಿಐಎಂ ಆಗ್ರಹ
ಈ ವೇಳೆ ಸಹಕಾರ ಸಂಘದ ಉಪಾಧ್ಯಕ್ಷ ಕೆ ವೆಂಕಟೇಶ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಫಾರುಖ್ ಹುಸೇನ್, ನಿರ್ದೇಶಕ ಗುಜ್ಜಾಲ್ ತಾಯಪ್ಪ ನಾಯಕ, ಕಛೇರಿ ಸಹಾಯಕ ಮಹ್ಮದ್ ಶಫಿ ಹಾಗೂ ರೈತರು ಉಪಸ್ಥಿತರಿದ್ದರು.
