ಕೂಲಿಕಾರರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಮಹಿಳೆ ಸಾವು ,ಆರು ಜನರಿಗೆ ಗಾಯಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದಲ್ಲಿ ನಡೆದಿದೆ.
ಗಂಗಮ್ಮ (40) ಮೃತ ಮಹಿಳೆ ಎಂದು ಗುರುತಿಸಲಾಗಿದೆ.ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ತುಂಗಭದ್ರಾ ಎಡದಂಡೆ ಉಪ ಕಾಲುವೆಯಲ್ಲಿ ಚಾಲಕನ ನಿಯಂತ್ರಣ ಕಾಲುವೆಗೆ ಉರುಳಿದೆ ಎಂದು ಹೇಳಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ʼಹಟ್ಟಿ ಕಾರ್ಮಿಕ ಸಂಘʼದ ಚುನಾವಣೆ ನಡೆಸಲು ಒತ್ತಾಯ
ಟ್ರ್ಯಾಕ್ಟರ್ ನಲ್ಲಿದ್ದ ಆರು ಜನರಿಗೆ ಗಾಯಾಳುಗಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸುದ್ದಿ ತಿಳಿದು ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
