ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಬಸ್, ಮುದಗಲ್ ಪಟ್ಟಣದಿಂದ ಲಿಂಗಸುಗೂರಿಗೆ ತೆರಳುತ್ತಿತ್ತು. ಮಾರ್ಗ ಮಧ್ಯದಲ್ಲಿ ಬಸ್‌ನ ಎಕ್ಸಲೇಟರ್ ಕಟ್ಟಾಗಿದೆ. ಚಾಲಕನ ನಿಯಂತ್ರಣಕ್ಕೆ ಬಾರದೆ ಪಲ್ಟಿಯಾಗಿದೆ ಎನ್ನಲಾಗಿದೆ. ಬಸ್ ನಲ್ಲಿ ಮಹಿಳೆಯರು, ಶಾಲಾ ಮಕ್ಕಳು ಕೂಡ ಪ್ರಯಾಣಿಸುತ್ತಿದ್ದರು. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ?: ರಾಯಚೂರು | ಪಕ್ಷದಲ್ಲಿ ಸ್ಥಾನಕ್ಕಾಗಿ ಕಚ್ಚಾಡುವುದು ಶೋಭೆಯಲ್ಲ: ಶಾಸಕ ಮಾನಪ್ಪ ವಜ್ಜಲ್
