ರಾಯಚೂರು | ಮಹಿಳೆಯ ಸರಗಳ್ಳತನ ಇಬ್ಬರ ಬಂಧನ; 20 ಬೈಕ್ ವಶಕ್ಕೆ

Date:

ಮಹಿಳೆ ನಡೆದುಕೊಂಡು ಹೋಗುವಾಗ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಸಿಂಧನೂರು ಪೊಲೀಸರು ಇಬ್ಬರನ್ನು ಬಂಧಿಸಿ ರೂ.16,35,00 ಮೌಲ್ಯದ ಬೈಕ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಆರೋಪಿಗಳಾದ ಆರೀಪ್ (23), ಸಿದ್ದರಾಮಪ್ಪ(20), ಮತ್ತು ಅಪ್ರಾಪ್ತ ಬಾಲಕನನ್ನು ಬಂಧಿಸಿ, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಇತ್ತೀಚೆಗೆ ಒಂಟಿ‌ ಮಹಿಳೆ ನಡೆದುಕೊಂಡು ಹೋಗುವಾಗ ಕೊರಳಲ್ಲಿನ ಬಂಗಾರದ ಸರಗಳ್ಳತನ ಮಾಡಿದ್ದ‌ ಆರೋಪಿಗಳು ಈ‌ ಹಿಂದೆ ಮತ್ತು ಬೈಕ್ ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದರು.

ಮಹಿಳೆಯ ಕೊರಳಲ್ಲಿ ಸುಮಾರು 2 ಲಕ್ಷ ಬೆಲೆಬಾಳುವ, 31.87 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಮಹಿಳೆ ಪ್ರಕರಣ ದಾಖಲಿಸುತ್ತಿದ್ದಂತೆ, ಎಚ್ಚೆತ್ತ ಪೋಲಿಸರು ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಹಾಗೂ ಅಪ್ರಾಪ್ತನನ್ನು ಹಿಡಿದು ಸರಗಳ್ಳತನ ಪ್ರಕರಣ ಭೇದಿಸಿದ್ದಾರೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್ ವಿತರಣಾ ಕೇಂದ್ರ ಸ್ಥಳಾಂತರಕ್ಕೆ ಕೈ ಬಿಡಬೇಕು ; ರೈತ ಸಂಘ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಇದರೊಂದಿಗೆ ಸಿಂಧನೂರು ನಗರದಲ್ಲಿ ಕಳೆದ 06 ತಿಂಗಳಿಂದ ಕಳ್ಳತನವಾದ 20 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಗಾರ ಮತ್ತು ಬೈಕ್‌ಗಳ ಒಟ್ಟು ಮೌಲ್ಯ ರೂ 16.35.000/- ಜಪ್ತಿ ಮಾಡಿಕೊಂಡು ವಿವಿಧ ಪ್ರಕರಣಗಳನ್ನು ಪತ್ತೆಹಚ್ಚಿದ್ದು, ಬಂಗಾರದ ಸರಗಳ್ಳತನ ಮತ್ತು ಬೈಕ್‌ಗಳನ್ನು ಕಳ್ಳತನದಲ್ಲಿ ಭಾಗಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...