ರಾಯಚೂರು | ಕಲಿಕ ಕಲ್ಯಾಣಕ್ಕಾಗಿ ಎರಡು ತಿಂಗಳ ಶೈಕ್ಷಣಿಕ ಅಭಿಯಾನ; ಇಮ್ತಿಯಾಜ್‌ ಸಿಂಧನೂರು

Date:

ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರಗಳ ಕುರಿತು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್ (ಎಸ್‌ಐಓ) ರಾಜ್ಯ ಘಟಕದ ವತಿಯಿಂದ ಡಿಸೆಂಬರ್ 15ರಿಂದ ಫೆಬ್ರವರಿ 15ರವರೆಗೆ ಎರಡು ತಿಂಗಳ ಅವಧಿಯ ‘ಕಲಿಕ ಕಲ್ಯಾಣ’ ಶೈಕ್ಷಣಿಕ ಅಭಿಯಾನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಎಸ್‌ಐಓ ಮುಖಂಡ ಇಮ್ತಿಯಾಜ್ ಸಿಂಧನೂರು ಹೇಳಿದರು.

- Advertisement -

ನಗರದ ಪತ್ರಿಕಾ ಭವನದಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಹೆಚ್ಚಾಗಿರುವುದು, ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕುಸಿತ, ಶಿಕ್ಷಕರ ಕೊರತೆ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳು ಶಿಕ್ಷಣ ಕ್ಷೇತ್ರವನ್ನು ಕಾಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅಭಿಯಾನದ ಭಾಗವಾಗಿ ಶಿಕ್ಷಣದ ಮಹತ್ವ ಕುರಿತು ಜಾಗೃತಿ ಮೂಡಿಸುವುದು, ಶಾಲೆಗಳಿಗೆ ಹೋಗಿ ಸಮಸ್ಯೆಯನ್ನು ಅಲಿಸುವದು, ಬೀದಿ ಬದಿ ಸಭೆಗಳು, ಉಪನ್ಯಾಸಗಳು, ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತರಬೇತಿ ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶ ಹೊಂದಲಾಗಿದೆ. ವಿಶೇಷವಾಗಿ ಜಿಲ್ಲಾ ಮತ್ತು ತಾಲೂಕ ಮಟ್ಟದಲ್ಲಿ ಚುನಾಯಿತ ಜನಪ್ರತಿನಿಧಿಗಳಾದ ಸಂಸದರು, ಶಾಸಕರುಗಳನ್ನು ಭೇಟಿ ಮಾಡಿ ಚರ್ಚಿಸಲಾಗುತ್ತದೆ. ವೃತ್ತಿ ನಿರತರಿಂದ ಮಾರ್ಗದರ್ಶನ ಉಪನ್ಯಾಸಗಳು, ದುಂಡುಮೇಜಿನ ಸಭೆ ಜಿಲ್ಲಾ ಮಟ್ಟದಲ್ಲಿ ನಡೆಸಿ ಮಾಹಿತಿ ಕ್ರೋಢೀಕರಿಸಲಾಗುತ್ತದೆ ಎಂದರು.

ಅಭಿಯಾನ ಉದ್ದೇಶಿಸಿ ಮತ್ತೋರ್ವ ಮುಖಂಡ ಸೈಯದ್ ಆಕಿಫ್ ಆಯ್ನಾನ್ ಮಾತನಾಡಿ, ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ನಡೆಯಲಿರುವ ಕಲಿಕ ಕಲ್ಯಾಣ ಅಭಿಯಾನ ಮೂಲಕ ಶೈಕ್ಷಣಿಕ ಸಮಸ್ಯೆ, ಪರಿಹಾರ ಸವಾಲುಗಳ ಕುರಿತು ಸಮಾಲೋಚಿಸಲಾಗುತ್ತದೆ. ಗುಣಮಟ್ಟ ಶಿಕ್ಷಣಕ್ಕೆ ಸಮುದಾಯ ಜವಾಬ್ದಾರಿಯನ್ನು ಜಾಗೃತಗೊಳಿಸುವ ಜೊತೆಗೆ ಸರ್ಕಾರವನ್ನು ಗಮನಸೆಳೆಯುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಂಪಿಸಿಎಲ್- ಕೃಷ್ಣಬ್ರಿಡ್ಜ್ ರಸ್ತೆಯಲ್ಲಿ ನಿಲ್ಲದ ರಸ್ತೆ ಅಪಘಾತ

ಪತ್ರಿಕಾಗೋಷ್ಠಿಯಲ್ಲಿ ಆರೀಫ್, ನೂರ ಅಹ್ಮದ, ಆಸೀಫ್ ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...