ರಾಯಚೂರು | ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಅನೈರ್ಮಲ್ಯ; ಬಯಲಲ್ಲೇ ಶೌಚ

Date:

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಲಕರ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಅನೈರ್ಮಲ್ಯದಿಂದ ಕೂಡಿದ್ದು, ಉತ್ತಮ ಊಟ ನೀಡದೆ ಬೇಕಾಬಿಟ್ಟಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

- Advertisement -

“ಗ್ರಾಮೀಣ ಭಾಗದ ಬಡಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅನುಕೂಲವಾಗಲೆಂದು ವಸತಿ ನಿಲಯಗಳಿಗೆ ಸರ್ಕಾರ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತದೆ.‌ ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲವೆಂಬ ಗಾದೆ ಮಾತು ನೆನಪಾಗುತ್ತದೆ” ಎಂದು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗಳು ಹೇಳುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಉನ್ನತ ದರ್ಜೆಯ ವಿದ್ಯಾಭ್ಯಾಸಕ್ಕಾಗಿ ಮನೆ-ಮಠ ಬಿಟ್ಟು ನಗರಕ್ಕೆ ಬಂದು ವಸತಿ ನಿಲಯದಲ್ಲಿ ವಾಸ್ತವ್ಯವಿರುತ್ತೇವೆ. ಆದರೆ ಇಲ್ಲಿನ ಪರಿಸ್ಥಿತಿ ನೋಡಿದರೆ ನಮ್ಮ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತೆಂದು ಭಯವಾಗುತ್ತದೆ” ಎಂದು ಹೆಸರೇಳಲಿಚ್ಛಿಸದ ವಿದ್ಯಾರ್ಥಿ ಕಳವಳ ವ್ಯಕ್ತಪಡಿಸಿದರು.

1000078919

“ವಸತಿಯ ನಿಲಯದ ಮೂಲಸೌಕರ್ಯ, ಊಟ, ಸ್ವಚ್ಚತೆ ಬಗ್ಗೆ ನಿತ್ಯವೂ ವಸತಿ ಸಿಬ್ಬಂದಿಗಳ ಜತೆಗೆ ವಾದ ವಿವಾದಗಳು ಸಂಭವಿಸುತ್ತಿರುತ್ತವೆ. ಶಿಕ್ಷಣಕ್ಕೆ ಸಮಸ್ಯೆಯಾಗಬಾರದೆಂಬ ಕಾರಣಕ್ಕೆ ಕಳಪೆ ಊಟ ಸೇವಿಸುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಸ್ಥಳೀಯ ಹೋರಾಟಗಾರ ಜಾವೀದ್ ಖಾನ್ ವಸತಿ ನಿಲಯಕ್ಕೆ ಭೇಟಿ ನೀಡಿ ಈ‌ ದಿನ.ಕಾಮ್ ಜತೆಗೆ ಮಾತನಾಡಿ, “ಮಕ್ಕಳಿಗೆ ನೀಡುವ ಊಟವನ್ನು ವಸತಿಯ ಸಿಬ್ಬಂದಿ ಹಾಗೂ ಅಧಿಕಾರಿಗಳೇ ಸೇವಿಸಲಿ. ಕಳಪೆ ಊಟ ನೀಡಿ, ಉಳಿದ ಪದಾರ್ಥಗಳು ಹಾಗೂ ಕಾಳನ್ನು ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಗರ್ ಹುಕುಂ ಭೂಮಂಜೂರಾತಿಗೆ ತೊಡಕಾಗಿರುವ ಕಾನೂನು ತಿದ್ದುಪಡಿ ಮಾಡಿ: ಭೂಮಿ ವಂಚಿತರ ಆಗ್ರಹ

“ಕಳಪೆ ಊಟವನ್ನು ಸೇವಿಸಲಾಗದೆ ಮಕ್ಕಳು ಊಟವನ್ನು ಹಾಗೆ ಬಿಡುತ್ತಾರೆ. ಈ ರೀತಿ ಉಳಿದ ಆಹಾರವನ್ನು ನಿತ್ಯವೂ ಚೀಲಗಟ್ಟಲೆ ಆಹಾರವನ್ನು ಜಾನುವಾರು ಸಾಕುವವರಿಗೆ ಚೀಲಕ್ಕೆ ಇಂತಿಷ್ಟರಂತೆ ಮಾರಾಟ ಮಾಡುತ್ತಾರೆ. ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳ ಜತೆಗೆ ಸಂವಾದ ಮಾಡಲಿ ಎಲ್ಲ ಸಮಸ್ಯೆಗಳು ಹೊರಬರುತ್ತವೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ವಸತಿ ನಿಲಯದಲ್ಲಿ ಶೌಚಾಲಯವಿದ್ದರೂ ಮಕ್ಕಳು ಬಯಲು ಶೌಚಾಲಯಕ್ಕೆ ತೆರಳುತ್ತಿದ್ದಾರೆ. ನಿಲಯದ ಮಕ್ಕಳು ಯಾರಿಗೂ ಹೇಳದ ಪರಿಸ್ಥಿತಿಯಲ್ಲಿದ್ದಾರೆ. ಕಳಪೆ ಊಟ ಸೇವಿಸಿ ಶಾಲೆ ಕಾಲೇಜಿಗೆ ತೆರಳುತ್ತಿದ್ದಾರೆ. ಇದನ್ನು ಆದಷ್ಟು ಮೇಲಧಿಕಾರಿಗಳು ಗಮನಿಸಿ ಸೂಕ್ತ ಕ್ರಮ ಕೈಗೊಂಡು ಉತ್ತಮ ಊಟ, ಮೂಲ ಸೌಕರ್ಯ ಒದಗಿಸಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...