ರಾಯಚೂರು | ಅಕಾಲಿಕ ಮಳೆಗೆ ಜೋಳ ಬೆಳೆ ಹಾನಿ; ಸಂಕಷ್ಟದಲ್ಲಿ ರೈತರು

Date:

ರಾಯಚೂರು ನಗರ ಹಾಗೂ ತಾಲೂಕಿನ‌ ವಿವಿಧೆಡೆ ಸುರಿದ ಏಕಾಏಕಿ ಮಳೆಯ ಪರಿಣಾಮ ಹೊಲದಲ್ಲಿ ಕಟಾವು ಮಾಡಿದ ಜೋಳ ಹಾನಿಗೀಡಾಗುವಂತಾಗಿದೆ. ಜಿಲ್ಲೆಯ ಬಹುತೇಕ ಕಡೆ ಜೋಳ ರಾಶಿ ನಡೆದಿದ್ದು, ಜೋಳ ಕಟಾವು ಮಾಡಿ ನೆಲದ ಮೇಲೆ ಹಾಕಲಾಗಿದೆ. ಏಕಾಏಕಿ ಮಳೆ ಬಂದಿದ್ದರಿಂದಾಗಿ ಜೋಳ ನೆಲದ ಪಾಲಾಗುವಂತಾಗಿದೆ.

- Advertisement -

ರಾಯಚೂರು ತಾಲೂಕಿನ ಮನ್ಸಲಾಪೂರ, ಹೊಸಪೇಟೆ, ಮರ್ಚೇಡ್, ಮಲ್ಲಾಪೂರ, ಜೇಗರಕಲ್ ಸೇರಿದಂತೆ ಸೋಮವಾರ ಬೆಳಗಿನ ಜಾವ, ತಡರಾತ್ರಿ ಮಳೆ ಸುರಿದಿದೆ. ಅಕಾಲಿಕವಾಗಿ ಮಳೆ ಸುರಿಯುತ್ತಿರುವುದರಿಂದ ಬಿಳಿ ಜೋಳ ಬೆಳೆದ ರೈತರಲ್ಲಿ ಆತಂಕ ಮೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಜೋಳ ಕಟಾವು ಮಾಡಿದ್ದರಿಂದ ರಾಶಿ ಸಂದರ್ಭದಲ್ಲಿ ಜೋಳ ಕಪ್ಪಾಗಲಿದೆ. ಇದರಿಂದ ರೈತರು ಹಾನಿ ಅನುಭವಿಸುವಂತಾಗಿದೆ. ಮೋಡ ಕವಿದ ವಾತಾವರಣದಿಂದ ರೈತರಲ್ಲಿ ಆತಂಕಕ್ಕೆ ಕಾರಣವಾಗಿದ್ದ ಮಳೆ ಸುರಿದಿರುವುದು ಅನ್ನದಾತರಿಗೆ ಭೀತಿ ಮೂಡಿಸಿದೆ. ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮೋಡ ಮುಸುಕಿದ ವಾತಾವರಣವಿದೆ.

ಅಕಾಲಿಕ ಮಳೆ ಹೊಡೆತಕ್ಕೆ ಬೆಳೆದು ನಿಂತ ಬೆಳೆಗಳು ನೆಲಕಚ್ಚಿದ್ದು ಹೀಗಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಬೀಳಿಜೋಳ, ಕಟಾವು ಮಾಡಿ ಇನ್ನೇನು ರಾಶಿ ಮಾಡಬೇಕು ಎನ್ನುವಷ್ಟರಲ್ಲಿ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಾಸ್ಟೆಲ್ ವಿದ್ಯಾರ್ಥಿಗಳಿಂದ ಮಧ್ಯರಾತ್ರಿ ಪ್ರತಿಭಟನೆ; ಮೂಲಸೌಲಭ್ಯ ಕಲ್ಪಿಸಲು ಒತ್ತಾಯ

ಅಕಾಲಿಕ ಮಳೆಯಿಂದ ಸಾವಿರಾರು ಪ್ರದೇಶದಲ್ಲಿ ಬೆಳೆ ಹಾನಿಗೊಳಗಾಗಿದ್ದು ಜಿಲ್ಲಾಡಳಿತ ಬೆಳೆಗಳ ಸಮೀಕ್ಷೆ ನಡೆಸಿ ಹಾನಿ ಅನುಭವಿಸಿದ ರೈತರ ನೆರವಿಗೆ ಮುಂದಾಗಬೇಕೆಂಬುದು ರೈತರ ಒತ್ತಾಯವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...