ರಾಯಚೂರು | ನದಾಫ್, ಪಿಂಜಾರ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ಒತ್ತಾಯ

Date:

Advertisements

ನದಾಫ್, ಪಿಂಜಾರ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ದಿ ನಿಗಮ ಮಂಡಳಿ ಸ್ಥಾಪಿಸಿ, ಸೂಕ್ತ ಅನುದಾನ ಘೋಷಿಸಬೇಕೆಂದು ಅಖಿಲ ಕರ್ನಾಟಕ ಪಿಂಜಾರ, ನದಾಫ್ ಮನ್ಸೂರಿ ಹಕ್ಕುಗಳ ಸಂಘದ ಪದಾಧಿಕಾರಿಗಳು ರಾಯಚೂರು ಜಿಲ್ಲಾಧಿಕಾರಿಗಳ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ರಾಜ್ಯದಲ್ಲಿ ಸುಮಾರು 30 ರಿಂದ 35 ಲಕ್ಷಗಳ ಜನಸಂಖ್ಯೆ ಹೊಂದಿರುವ ನದಾಫ್/ಪಿಂಜಾರ ಜನಾಂಗವು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಔದ್ಯೋಗಿಕ, ರಾಜಕೀಯ ಹಾಗೂ ಹಲವಾರು ರಂಗಗಳಲ್ಲಿ ಅತ್ಯಂತ ಹಿಂದುಳಿದಿದೆ. ಕಡುಬಡತನದ ನೆರಳಲ್ಲಿ ಕಷ್ಟಕರ ಜೀವನವನ್ನು ನಡೆಸುತ್ತಿರುವ ಶೋಷಿತ ಸಮಾಜವಾಗಿದೆ ಎಂದು ತಿಳಿಸಿದರು.

ಸಮುದಾಯ ಹಿಂದುಳಿದ ಪ್ರವರ್ಗ-1 ರಲ್ಲಿ ಬರುತ್ತದೆ. ಆದರೆ ಸರ್ಕಾರದ ಯಾವುದೇ ಯೋಜನೆಗಳು ಈ ನಮ್ಮ ಜನಾಂಗಕ್ಕೆ ತಲುಪಿಸಿರುವುದಿಲ್ಲ. ಸರಕಾರದ ಯೋಜನೆಗಳಿಂದ ನಮ್ಮ ಸಮುದಾಯದವರು ವಂಚಿತರಾಗಿದ್ದಾರೆ. ಸುಮಾರು ವರ್ಷಗಳಿಂದ ನಮ್ಮ ಜನಾಂಗದ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಬೇಕೆಂದು ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.

Advertisements
ರಾಯಚೂರು

ಹಿಂದಿನ ಬಿಜೆಪಿ ಸರ್ಕಾರ ಆಡಳಿತದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರು ಪಿಂಜಾರ, ನದಾಫ್ ಹಾಗೂ ಇತರ 13 ಜಾತಿಗಳ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ಘೋಷಿಸಿದ್ದರು. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರ ಇದುವರೆಗೆ ಯಾವುದೇ ರೀತಿಯಲ್ಲಿ ಸದರಿ ಜಾತಿಯವರಿಗೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ಚನ್ನಗಿರಿಯಲ್ಲಿ ಯುವಕನ ಕಸ್ಟಡಿ ಸಾವು: ಸತ್ಯಶೋಧನಾ ವರದಿ ಬಿಡುಗಡೆ

ಕಾಂಗ್ರೆಸ್ ಪಕ್ಷಕ್ಕೆ ಪಿಂಜಾರ ಸಮುದಾಯವು‌ ಸಂಪೂರ್ಣ ಮತ ಚಲಾಯಿಸಿ ಅಧಿಕಾರಕ್ಕೆ ಬರಲು ಕಾರರ್ಣಕರ್ತರಾಗಿದ್ದೇವೆ. ಅಧಿಕಾರ ಬಂದು ವರ್ಷ ಕಳೆದರೂ ಕೂಡ ಜನಾಂಗಕ್ಕೆ ಇದುವರೆಗೆ ಯಾವುದೇ ಯೋಜನೆಗಳು ನೀಡಿಲ್ಲ. ಕಾಂಗ್ರೆಸ್‌ನವರು ಹಿಂದುಳಿದ ನಾಯಕರೆಂದು ಕೇವಲ ಭಾಷಣಗಳಲ್ಲಿ ಬಿಂಬಿಸಿಕೊಳ್ಳುತ್ತಾ ಇರುವುದು ವಿಪರ್ಯಾಸ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X