ದೆಹಲಿಯಲ್ಲಿ ನಡೆಯುತ್ತಿರುವ ರೈತರ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 19ನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ರೈತರ ಬೇಡಿಕೆ ಈಡೇರಿಸಬೇಕು ಎಂದು ರಾಯಚೂರು ಸಂಸದ ಕುಮಾರ ನಾಯಕ್ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದರು.
ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ರೈತರು ಪಂಜಾಬ್ ಹಾಗೂ ಹರಿಯಾಣ ಗಡಿ ಭಾಗದಲ್ಲಿ ಚಳಿ ಮಳೆ ಲೆಕ್ಕಿಸದೆ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ರೈತರು ಎರಡು ದಿನಗಳ ಹಿಂದೆ ಪಾದಯಾತ್ರೆ ಮಾಡಿ ದೆಹಲಿ ಪ್ರವೇಶಕ್ಕೆ ಮುಂದಾದಾಗ ಪೊಲೀಸರು ತಡೆದು ಆಶ್ರುವಾಯು ಸಿಡಿಸಿ, ಜಲ ಫಿರಂಗಿ , ಪ್ರಯೋಗ ಮಾಡಿದ್ದಾರೆ. ಇದರಿಂದ ಹಲವು ರೈತರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇಂತಹ ದಬ್ಬಾಳಿಕೆಯ ಪೊಲೀಸ್ ದೌರ್ಜನ್ಯ ಖಂಡಿಸಬೇಕು ಎಂದು ಮನವಿ ಮಾಡಿದರು.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ 19ನೇ ದಿನಕ್ಕೆ ಕಾಲಿಟ್ಟಿದ್ದು, ಸಂಸತ್ ಅಧಿವೇಶದಲ್ಲಿ ಚರ್ಚಿಸದೇ ರೈತರ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ ಕೂಡಲೇ ರೈತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಸದ ಕುಮಾರ ನಾಯಕ ಅವರ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದರು.
ಸಂಸತ್ ಭವನದಲ್ಲಿ ಅಧಿವೇಶನ ನಡೆದರೂ ಯಾವುದೇ ಸಂಸದರು ರೈತರ ಸಮಸ್ಯೆ, ಚಳುವಳಿ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಚುನಾವಣೆ ಸಮಯದಲ್ಲಿ ರೈತ ಈ ದೇಶದ ಬೆನ್ನೆಲುಬು ಎಂದು ಬಿಗಿ ಬಿಗಿದು ಭಾಷಣದಲ್ಲಿ ಮಾತನಾಡುತ್ತಾರೆ. ಕೇಂದ್ರ ಸರ್ಕಾರ ಗಂಭೀರವಾಗಿ ಪ್ರತಿಕ್ರಿಯೆ ನೀಡದೆ ಮಾತುಕತೆಗೂ ಆಹ್ವಾನಿಸದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದರು.
ಗಡಿ ಭಾಗದಲ್ಲಿ ನಡೆಯುತ್ತಿರುವ ರೈತರ ಒಳತಿಗಾಗಿ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಉಪವಾಸ ಸತ್ಯಾಗ್ರಹ 19 ನೇ ದಿನಕ್ಕೆ ಮುಂದುವರೆದಿದೆ. ಆರೋಗ್ಯ ಸ್ಥಿತಿ ಹದಗೆಟ್ಟಿದೆ. ತಕ್ಷಣವೇ ಜನಪ್ರತಿನಿಧಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ರೈತರ ಸಮಸ್ಯೆ ಬಗ್ಗೆ ವಿಚಾರಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರ ಕೂಡಲೇ ರೈತರ ಹಿತ ಕಾಪಾಡಲು ರೈತರ ಸಮಸ್ಯೆಯನ್ನು ಬಗೆಹರಿಸಬೇಕು. ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನನ್ನು ಜಾರಿಗೆ ತರಬೇಕು. ಡಾ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ಬರಬೇಕು ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ರಾಯಚೂರು | ವೈದ್ಯರ ನಿರ್ಲಕ್ಷ್ಯ ಆರೋಪ: ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆ
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶಿವಾರ್ಜುನ ನಾಯಕ, ಸಂಗಮೇಶ ನಾಯಕ, ಭೀಮನಗೌಡ ಇಡಪನೂರು, ಬೀಮರಾಯ, ವಿರೂಪಾಕ್ಷಪ್ಪ ಗೌಡ ಪೋತ್ನಾಳ, ರಾಮ್ ರಹೀಮ್, ತಾಯಪ್ಪ ಶಿವಂಗಿ ವಕೀಲ, ವೆಂಕಟೇಶ ನಾಯಕ, ಸತ್ಯರೆಡ್ಡಿ ಸೇರಿದಂತೆ ಇತರರು ಇದ್ದರು.
