ರಾಯಚೂರು | ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದ ಹಣ ಗ್ಯಾರಂಟಿಗಳಿಗೆ ಬಳಕೆ; ಆರೋಪ

Date:

ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡುವ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ದಲಿತಪರ ಸಂಘಟನೆಗಳಿಂದ ಶೀಘ್ರವೇ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಯಚೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಪಿ.ಅನಿಲ್ ಕುಮಾರ್ ತಿಳಿಸಿದರು.

ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “2024-25ನೇ ಸಾಲಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಗೆ ಸುಮಾರು 39,121 ಕೋಟಿ ಅನುದಾನ ಮೀಸಲಿಡಲಾಗಿತ್ತು. ಈ‌ ಪೈಕಿ ಕೇವಲ‌ ಶೇ.56 ರಷ್ಟು ಹಣ ಮಾತ್ರ‌ ಖರ್ಚು ಮಾಡಲಾಗಿದೆ. ಇದರಲ್ಲಿ ಶೇ.36 ರಷ್ಟು ಅಂದರೆ 14,280 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ಇದರಲ್ಲಿ 3825 ಕೋಟಿಯನ್ನು ಗೃಹಲಕ್ಷ್ಮಿ‌ ಯೋಜನೆಗೆ ವ್ಯಯಿಸಲಾಗಿದೆ. ಇನ್ನೂ 4057 ಕೋಟಿ ಅನುದಾನವನ್ನು ಇದೇ ಯೋಜನೆಗೆ ಮೀಸಲಿಡಲಾಗಿದೆ. ಒಟ್ಟು ಅನುದಾನದಲ್ಲಿ‌ ಶೇ.20‌ ರಷ್ಟು ಮಾತ್ರ ದಲಿತರಿಗೆ ಖರ್ಚು ಮಾಡಿದೆ” ಎಂದು ಮಾಹಿತಿ ನೀಡಿದರು.

ಕಳೆದ ಬಿಜೆಪಿ ಸರ್ಕಾರ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆಯ 7ಡಿ ತಿದ್ದುಪಡಿ ಮಾಡಿ ಅನುದಾನದ ಹಣವನ್ನು ಅನ್ಯ ಯೋಜನೆಗಳಿಗೆ ಬಳಸಿಕೊಂಡು ದುರ್ಬಳಕೆ ಮಾಡಿಕೊಂಡಿತ್ತು. ದಲಿತಪರ ಸಂಘಟನೆಗಳ ತೀವ್ರ ಹೋರಾಟದ ಬಳಿಕ 7ಡಿ ರದ್ದು ಮಾಡಿತ್ತು. ಅಂದು ಬಿಜೆಪಿ ಮಾಡಿದ ಮೋಸವನ್ನು ಪ್ರಸ್ತುತ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ದಲಿತರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿ ಮಾಡಲು ಹಾಗೂ ಇತರೆ ಸಮಾಜದ ನಡುವಿನ ಅರ್ಥಿಕ ಅಸಮಾನತೆ ಕಡಿಮೆ ಮಾಡುವ ಉದ್ದೇಶದಿಂದ ಜಾರಿ ಮಾಡಲಾಗಿರುವ ಈ ಯೋಜನೆಯನ್ನು ಸರ್ಕಾರವೇ ಬುಡಮೇಲು ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಇದನ್ನೂ ಓದಿ: ರಾಯಚೂರು | ಒಳ ಮೀಸಲಾತಿ ಜಾರಿಯಾಗದೇ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ; ಹೋರಾಟಕ್ಕೆ ಸಜ್ಜು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಈ ವೇಳೆ ಜಿಲ್ಲಾಧ್ಯಕ್ಷ ಜೆ.ಅಬ್ರಾಹಂ ಹೊನ್ನಟಗಿ, ಜಯಪ್ಪ ಸಿರವಾರ್, ಜನಾರ್ಧನ ಹಳ್ಳಿಬೆಂಚಿ, ತಾಯಪ್ಪ ಹೆಗ್ಗಸನಹಳ್ಳಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...