ರಾಯಚೂರು | ಗ್ಯಾರಂಟಿ ಯೋಜನೆಗೆ ಎಸ್‌ಸಿ, ಎಸ್‌ಟಿ ಅನುದಾನ ಬಳಕೆ; ಬಿಜೆಪಿ ಪ್ರತಿಭಟನೆ

Date:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ದಿಗೆ ಮೀಸಲಾಗಿರುವ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ರಾಯಚೂರು ನಗರದಲ್ಲಿಂದು ಬಿಜೆಪಿ ಪ್ರತಿಭಟನೆ ನಡೆಸಿತು.

ನಗರದ ವೀರಶೈವ ಕಲ್ಯಾಣ ಮಂಟಪದಿಂದ ಪ್ರಾರಂಭವಾದ ಪ್ರತಿಭಟನಾ ರ‍್ಯಾಲಿ ನಗರದ ವಿವಿಧ ರಸ್ತೆಗಳ ಮೂಲಕ ಡಾ. ಬಿ ಆರ್ ಅಂಬೇಡ್ಕರ ವೃತ್ತಕ್ಕೆ ತಲುಪಿ ಸರ್ಕಾರದ ದಲಿತ ವಿರೋಧಿ ನೀತಿಯನ್ನು ಖಂಡಿಸಿತು. “ಪರಿಶಿಷ್ಟ ಜಾತಿಗಳಿಗೆ ಮೀಸಲಾದ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಒಟ್ಟು 11,144 ಸಾವಿರ ಕೋಟಿ ರೂಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. 2024ರಲ್ಲಿಯೂ 14,282.68 ಸಾವಿರ ಕೋಟಿ ರೂ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ” ಹೀಗಾದರೆ ಕೆಳ ಸ್ತರದಲ್ಲಿರುವ ಪಜಾತಿ ಹಾಗೂ ಪಪಂಗಡ ಸಮುದಾಯಗಳ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

“ಹಿಂದುಳಿದ ವರ್ಗದವರೂ ಸೇರಿದಂತೆ ಎಲ್ಲರಿಗೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಆದರೆ ಎಸ್‌ಸಿ ಎಸ್‌ಟಿ ಅನುದಾನ ಮಾತ್ರ ಬಳಸಿಕೊಂಡು ಸಮೂದಾಯಗಳಿಗೆ ದ್ರೋಹ ಎಸಗಿದೆ. ಅಂಬೇಡ್ಕರ ಅಭಿವೃದ್ದಿ ನಿಗಮ, ಆದಿಜಾಂಬವ ಅಭಿವೃದ್ದಿ ನಿಗಮ, ತಾಂಡಾ ಅಭಿವೃದ್ದಿ ನಿಗಮ, ಭೋವಿ ಅಭಿವೃದ್ದಿ ನಿಗಮ, ವಾಲ್ಮೀಕಿ ಅಭಿವೃದ್ದಿ ನಿಗಮ, ಲಿಡ್ಕರ್, ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮಗಳಿಗೆ ಅನುದಾನ ನೀಡದೇ ವಂಚಿಸಿ ಎಸ್‌ಸಿ ಎಸ್‌ಟಿ ಸಮುದಾಯಗಳ ಅಭಿವೃದ್ದಿಯನ್ನು ಸರ್ಕಾರ ಕಡೆಗಣಿಸಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ದುರ್ಬಳಕೆ ಮಾಡಿಕೊಂಡ ಅನುದಾನವನ್ನು ಕೂಡಲೇ ಮರಳಿ ನೀಡಬೇಕು. ದಲಿತರ ಮೀಸಲು ನಿಧಿಯನ್ನು ಅದೇ ಸಮುದಾಯಗಳ ಅಭಿವೃದ್ದಿಗೆ ಬಳಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಸುರೇಶ ವರ್ಮಾರಿಗೆ ನೀಡಲಾಯಿತು.

- Advertisement -

ಇದನ್ನೂ ಓದಿ: ರಾಯಚೂರು | ಆಟೋ ನಿಲ್ದಾಣ ನಿರ್ಮಿಸಿ ಪೊಲೀಸರ ಕಿರುಕುಳ ತಪ್ಪಿಸುವಂತೆ ಆಟೋ ಚಾಲಕರ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕರಪ್ಪ, ಮಾಜಿ ಶಾಸಕ ತಿಪ್ಪರಾಜ ಹವಲ್ದಾರ, ಮಾಜಿ ಸಂಸದ ಬಿ.ವಿ.ನಾಯಕ, ರವೀಂದ್ರ ಜಲ್ದಾರ, ರಾಜಕುಮಾರ, ಪಿ.ಯಲ್ಲಪ್ಪ, ಮೌನೇಶ, ಜಿ.ಶಂಕರರೆಡ್ಡಿ, ಶರಣಮ್ಮ ಕಾಮರೆಡ್ಡಿ, ವಿಜಯಕುಮಾರ ಸಜ್ಜನ, ಅಮರೇಶ ಬಲ್ಲಿದವ, ರಾಮಚಂದ್ರ ಕಡಗೋಳ, ಯು.ನರಸರೆಡ್ಡಿ, ಪ್ರಕಾಶ ಸೇರಿದಂತೆ ಅನೇಕ ಮುಖಂಡರುಗಳು, ಮೋರ್ಚಾಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...