ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ರಾಯಚೂರು ನಗರದ ಗಾಜಗಾರಪೇಟೆ ನಿವಾಸಿಗಳು ಕುಂಭಮೇಳದ ದರ್ಶನ ಪಡೆದು ಹಿಂದಿರುಗುವಾಗ ವಾಹನ ಅಪಘಾತಕ್ಕೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಾಗಪುರ್ ಬಳಿ ನಡೆದಿದೆ.
ಗಾಜಗಾರಪೇಟೆ ನಿವಾಸಿಗಳು ಮರಳಿ ಬರುವಾಗ ಟೆಂಪೊ ಮತ್ತು ಲಾರಿ ಮಧ್ಯೆ ಡಿಕ್ಕಿಯಾಗಿ ನಾಲ್ಕು ಜನರು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಅನೈರ್ಮಲ್ಯ; ಬಯಲಲ್ಲೇ ಶೌಚ
ಬೆಳಗಿನ ಜಾವ ಘಟನೆ ನಡೆದಿದ್ದು, ಗಾಯಗಳನ್ನು ಅಪಘಾತ ಸ್ಥಳದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿ ಸುಮಾರು 10 ಜನರಿದ್ದರು. ಗೋನಾರ ಮಧು ಮತ್ತು ಬೇಲ್‌ಪುರಿ ವಿಠ್ಠಲ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಎಲ್ಲರೂ ಅಪಾಯದಿಂದ ಪಾರಾಗಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
