ರಾಯಚೂರು | ಅರಕೇರಾ ತಾಲ್ಲೂಕಿಗೆ ಎನ್ ಗಣೇಕಲ್ ಗ್ರಾಮ ಸೇರ್ಪಡೆ ಹಿಂಪಡೆಯಬೇಕು; ಗ್ರಾಮಸ್ಥರ ಒತ್ತಾಯ

Date:

ದೇವದುರ್ಗ ತಾಲ್ಲೂಕು ಗಬ್ಬೂರು ಹೋಬಳಿ ವ್ಯಾಪ್ತಿಯಲ್ಲಿ ಬರುವ ಎನ್. ಗಣೇಕಲ್ ಗ್ರಾಮವನ್ನು ಅರಕೇರಾ ತಾಲೂಕಿಗೆ ಸೇರ್ಪಡೆ ಮಾಡಿರುವುದು ನಿಯಮಬಾಹಿರ ಕ್ರಮವಾಗಿದೆ ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಎನ್.ಗಣೇಕಲ್ ಗ್ರಾಮಸ್ಥರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ದೇವದುರ್ಗ ತಾಲ್ಲೂಕಿನಿಂದ ನೂತನವಾಗಿ ಆಗಿರುವ ಅರಕೇರಾ ತಾಲ್ಲೂಕಿಗೆ ಎನ್ ಗಣೇಕಲ್ ಸೇರ್ಪಡೆ ಮಾಡಿರುವುದರಿಂದ ಸುಮಾರು 60 ಕಿಲೋ ಮೀಟರ್ ಹೋಗುವ ಪರಿಸ್ಥಿತಿ ನಿರ್ಮಾಣ ಉಂಟಾಗಿದೆ ಇದರಿಂದ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನೂತನ ತಾಲೂಕ ಕೇಂದ್ರಕ್ಕೆ ಹೋಗಬೇಕಾದರೆ ಎನ್ ಗಣೇಕಲ್ ಗ್ರಾಮದಿಂದ ಗಬ್ಬೂರಿಗೆ 9 ಕಿ.ಮೀ ಅಲ್ಲಿಂದ ದೇವದುರ್ಗಕ್ಕೆ 30 ಕಿಮೀ ಮತ್ತು ದೇವದುರ್ಗದಿಂದ ಅರಕೇರಾ ತಾಲ್ಲೂಕಿಗೆ 28 ಕಿಮೀ ಒಟ್ಟು 60 ರಿಂದ 70 ಕಿಮೀ ಸುತ್ತುವರೆದು ಪ್ರಯಾಣ ಮಾಡಬೇಕಾಗಿದೆ. ಕೊಂಕಣ ಸುತ್ತಿ ಮೈಲಾರಕ್ಕೆ ಎಂಬಂತಾಗಿದೆ ಜನ ನಿತ್ಯ ಅಲೆದಾಡಲು ರೋಷಿ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇವದುರ್ಗ ತಾಲ್ಲೂಕಿಗೆ ಎನ್ ಗಣೇಕಲ್ ಗ್ರಾಮವು 40 ಕಿಮೀದಲ್ಲಿ ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ನೂತನ ತಾಲೂಕು ರಚನೆ ಇದು ಅವೈಜ್ಞಾನಿಕವಾಗಿದ್ದು ಜನ ವಿರೋಧಿ ನೀತಿಯಾಗಿದ್ದು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಒತ್ತಾಯಿಸಿದರು.

ಎನ್.ಗಣೇಕಲ್ ಗ್ರಾಮವನ್ನು ಅರಕೇರ ತಾಲ್ಲೂಕಿನಿಂದ ಕೈ ಬಿಡದಿದ್ದರೆ ಮುಂಬರುವ ಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ ಚುನಾವಣೆಗೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ತಿಳಿಸಿದರು. ದೇವದುರ್ಗ ತಾಲೂಕು ಕೇಂದ್ರದಲ್ಲಿ ಎನ್.ಗಣೇಕಲ್ ಗ್ರಾಮವನ್ನು ಉಳಿಸಿ ಮುಂದುವರಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಗ್ರಾಮಸ್ಥರಿಂದ ಉಗ್ರವಾದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಷಪೂರಿತ ನೀರು ಸೇವನೆ; 50ಕ್ಕೂ ಹೆಚ್ಚು ಕುರಿಗಳು ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ವೇಳೆ ತಿರುಮಲ ಆಚಾರಿ ಜೋಶಿ ಗಣೇಕಲ್, ಗಂಗಪ್ಪ ಬೋವಿ, ಅಂಬರೀಶ ತೆಗ್ಯಾಳ್, ತಿಮ್ಮಣ್ಣ ನಾಯಕ, ಅಂಬರೀಶಗೌಡ ಗಣೇಕಲ್, ಶರಣಪ್ಪ ಬೋವಿ, ತಿಮ್ಮಣ್ಣ ಬೋವಿ, ವಿರುಪಾಕ್ಷಿ ಗಣೇಕಲ್, ಹನುಮಂತ ಗುಡೆಕಾಯಿ, ಶರಣಪ್ಪ ವೆಂಕಟಾಪುರ, ರವಿ ಬಡಿಗೇರ್, ವೆಂಕಟೇಶ್ ಅವಳಿ, ನರಸಪ್ಪ ಗಣೇಕಲ್, ತುಕಾರಾಂ ಗಣೇಕಲ್, ಬಸಲಿಂಗ ಗಣೇಕಲ್, ಅಂಬರೀಶ್ ಗಣೇಕಲ್ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...