ರಾಯಚೂರು | ಯರಗೇರಾ ಹೋಬಳಿಗೆ ಬಸ್‌ ನಿಲ್ದಾಣ ನಿರ್ಮಾಣಕ್ಕೆ ; ಸಿಪಿಐಎಂಎಲ್ ಪ್ರತಿಭಟನೆ

Date:

ರಾಯಚೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಯರಗೇರಾ ಗ್ರಾಮದಲ್ಲಿ ಸುಸಜ್ಜಿತ ಬಸ್ ನಿಲ್ದಾಣವಿಲ್ಲದೇ ಗ್ರಾಮಸ್ಥರು ತೀವ್ರ ಪರದಾಡುತ್ತಿದ್ದಾರೆ. 20ಕ್ಕೂ ಹೆಚ್ಚು ಹಳ್ಳಿಗಳಿಗೆ ಸಂಪರ್ಕಿಸುವ ಯರಗೇರಾ ಗ್ರಾಮಕ್ಕೆ ಬಸ್ ನಿಲ್ದಾಣ ನಿರ್ಮಿಸಬೇಕೆಂದು ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ಯರಗೇರಾ ಹೋಬಳಿ ಸಮಿತಿ ಒತ್ತಾಯಿಸಿದರು.

- Advertisement -

ಹೋಬಳಿ ಕೇಂದ್ರವಾದ ಯರಗೇರಾ ಗ್ರಾಮದಲ್ಲಿ ಸುಮಾರು ಎರಡು ಮೂರು ದಶಕದಿಂದ ಬಸ್ ನಿಲ್ದಾಣ ಇಲ್ಲದಿರುವುದರಿಂದ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಗ್ರಾಮಸ್ಥರು, ಕೂಲಿ ಕಾರ್ಮಿಕರು ರಸ್ತೆ ಮಧ್ಯೆಯೇ ನಿಲ್ಲುವಂತಾಗಿದೆ. ಇದರಿಂದ ಕೆಲವು ಅಪಘಾತಗಳು ಕೂಡ ಸಂಭವಿಸಿವೆ ಎಂದು ಅಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಈ ಹೋಬಳಿಯು ಸುಮಾರು 20ಕ್ಕೂ ಹೆಚ್ಚು ಹಳ್ಳಿಗಳಿಗೆ ಹಾಗೂ ಮಂತ್ರಾಲಯ ದೇವಸ್ಥಾನಕ್ಕೆ ಮತ್ತು ಶ್ರೀಶೈಲಕ್ಕೆ ಹೋಗುವ ಪ್ರವಾಸಿ ತಾಣಗಳಿಗೆ ಭಕ್ತರಿಗೆ ಮುಖ್ಯ ಜಂಕ್ಷನ್ ಇದಾಗಿದೆ. ಹೋಬಳಿಗೆ ವಿವಿಧ ಗ್ರಾಮಗಳಾದ ತಲಮಾರಿ ಮಿರ್ಜಾಪುರ, ಇಡಪನೂರು, ಮಿಡಗಲದಿನ್ನಿ, ಗಧಾರ, ಜಂಬಲದಿನ್ನಿ ,ಕೊತ್ತಾದ್ದೊಡ್ಡಿ, ಕನ್ಯಾದೊಡ್ಡಿ, ಮಲ್ಲಾಪುರು, ಮುರ್ಕಿದೊಡ್ಡಿ, ಉಪ್ರಾಳ, ಗೋಡಿಹಾಳ್ ಅಲ್ಕೋರು ಗ್ರಾಮಗಳಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರಿಗೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಗ್ರಾಮಸ್ಥರು ಎಂದು ಬೇಸರ ವ್ಯಕ್ತಪಡಿಸಿದರು.

ಯರಗೇರಾ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ NH.167 ಹೈದ್ರಾಬಾದ್ ದಿಂದ ಬೆಂಗಳೂರಿಗೆ ಹೆದ್ದಾರಿ ಸಂಪರ್ಕ ಹೊಂದಿದೆ. ಹೋಬಳಿಯಿಂದ 15 ರಿಂದ 16 ಕಿ.ಮೀ ತೆಲಂಗಾಣ ಮತ್ತು ಆಂಧ್ರಪ್ರದೇಶ ಗಡಿಭಾಗ ಹೊಂದಿರುವುದರಿಂದ ಜನರ ಪ್ರಯಾಣದ ಪ್ರಮಾಣ ಅತಿ ಹೆಚ್ಚು ಆಗಿರುವುದರಿಂದ ನಮಗೆ ಬಸ್ ತುಂಗುದಾಣ ಅತಿ ಅವಶ್ಯಕವಾಗಿದೆ. ಕೂಡಲೇ ಗ್ರಾಮಸ್ಥರ ಅಳಲನ್ನು ಗಂಭೀರವಾಗಿ ಪರಿಗಣಿಸಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಲಿಂಗಸೂಗೂರು | ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಭದಲ್ಲಿ ಗ್ರಾಮ ಘಟಕ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಹನೀಫ್ ಅಬಕಾರಿ, ಮುಖಂಡರಾದ ಜಗನ್ನಾಥ್ ನಾಯಕ್, ಜಗದೀಶ್ ಹಡಪದ್, ಮೊಯಿಜ್, ಭೀಮೇಶ್ ,ಮೊಹಮ್ಮದ್ ಆರಿಫ್, ಇಕ್ಬಾಲ್ ಆಫ್ರೋಜ್ ,ಗೌಸ್ ,ಜಿಲಾನಿ , ಆಂಜನೇಯ್ಯ ಮಲ್ಲೇಶ್, ವಿರೇಶ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...