ರಾಯಚೂರು | ಮಹಿಳೆಯರ ಮೇಲಿನ ದೌರ್ಜನ್ಯ ಪ್ರತಿನಿತ್ಯವೂ ಹೆಚ್ಚಳ: ದೇವಿ

Date:

Advertisements

ಮಹಿಳೆ ಮಹಿಳೆಯಾಗಿ, ಕಾರ್ಮಿಕಳಾಗಿ ನಾಗರಿಕಳಾಗಿ ಪ್ರತಿನಿತ್ಯ ಒಂದಲ್ಲಾ ಒಂದು ರೀತಿ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾಳೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಅವರು ಹೇಳಿದರು.

ಹಟ್ಟಿ ಪಟ್ಟಣದ ಪೈ ಭವನದ ಆವರಣದಲ್ಲಿ ಬುಧವಾರ ನಡೆದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಲಿಂಗಸುಗೂರು ತಾಲೂಕು ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿನಿತ್ಯ ಮಹಿಳೆಯರ ಮೇಲೆ ದೌರ್ಜನ್ಯಗಳು ದಬ್ಬಾಳಿಕೆ ಲೈಂಗಿಕ ಕಿರುಕುಳ ಜಾತಿ ಧರ್ಮದ ಜನಾಂಗ ಹೆಸರಿನಲ್ಲಿ ನಿರಂತರವಾಗಿ ನಡೆಯುತ್ತಿದೆ. ಮೋದಿ ಅವರು ಭೇಟಿ ಬಚಾವ್ ಭೇಟಿ ಪಡಾವ್ ಘೋಷಣೆ ಘೋಷಣೆಗಳಾಗಿಯೇ ಉಳಿದಿವೆ. ಕಳೆದ 10 ವರ್ಷದ ಅವಧಿಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಾಳಿಯಿಂದಾಗಿ ಮಂಡ್ಯ ,ಕಲಬುರ್ಗಿ, ಕೊಪ್ಪಳ ,ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳಿವೆ ಎಂದರು.

Advertisements

ಕೇಂದ್ರ ಸರ್ಕಾರ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಏತರ ಸಂಸ್ಥೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಜನಸಾಮಾನ್ಯರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ‌. ನರೇಂದ್ರ ಮೋದಿ ಕಾರ್ಪೊರೇಟ್ ಚೇಲಾಗಳ ಪರವಾಗಿ ಬಜೆಟ್ ನಲ್ಲಿ ಆದ್ಯತೆ ನೀಡಿ ಮಹಿಳಾ ಸಬಲೀಕರಣಕ್ಕೆ ಉದ್ಯೋಗ ಖಾತ್ರಿ ಯೋಜನೆ ಬ್ಯಾಂಕ್‌ಗಳಲ್ಲಿ ಮಹಿಳೆಯರಿಗೆ ಸಾಲ ಸೌಲಭ್ಯ ಕೊಡುವುದರಲ್ಲಿ ವಿಫಲವಾಗಿದೆ ಎಂದರು.

ಜನವಾದಿ 1

ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಮಾತನಾಡಿ, ಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರು, ಶೌಚಾಲಯ, ರಸ್ತೆ, ಗ್ರಂಥಾಲಯ, ವಿದ್ಯುತ್ ದೀಪಗಳು, ಉತ್ತಮ ಪರಿಸರ ಇಲ್ಲದೇ ಜನ ಜ್ವಲಂತ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಇನ್ನೊಂದು ಕಡೆ ಮಟಕಾ, ಇಸ್ಪೀಟ್, ಕ್ರಿಕೇಟ್ ಬೆಟ್ಟಿಂಗ್, ಗಾಂಜಾ ದಂಧೆಗಳು ಪಟ್ಟಣ ಸೇರಿ ಸುತ್ತಮುತ್ತಲ ಗ್ರಾಮಗಳ ಕುಟುಂಬಗಳನ್ನು ಬೀದಿಗೆ ತಂದಿವೆ ಎಂದು ಹೇಳಿದರು.

ಸ್ಥಳೀಯ ಪೊಲೀಸ್ ಠಾಣೆ ಈ ದಂಧೆಗಳಲ್ಲಿ ಸಂಪೂರ್ಣವಾಗಿ ಶಾಮೀಲಾಗಿದೆ. ಇದರ ವಿರುದ್ಧವಾಗಿ ಮಹಿಳಾ ಸಂಘಟನೆ ಹೋರಾಟ ರೂಪಿಸಬೇಕು. ಜನರ ಸಮಸ್ಯೆಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಶಾಸಕರು, ಅಧಿಕಾರಿಗಳು ಸ್ಪಂದಿಸದೇ ಅಸಡ್ಡೆ ತೋರುತ್ತಿದ್ದಾರೆ. ಹಟ್ಟಿಯ ಮಹಿಳೆಯರಿಗೆ ನಿಜವಾದ ಸ್ವಾತಂತ್ರ್ಯ ಸಿಗಬೇಕಿದೆ ಎಂದರು.

ಇದನ್ನು ಓದಿದ್ದೀರಾ? ರಾಯಚೂರು | ಹುಚ್ಚು ನಾಯಿ ಕಡಿತ: ಬಾಲಕನಿಗೆ ಗಂಭೀರ ಗಾಯ

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷೆ ಶಕುಂತಲಾ ಪಾಟೀಲ್, ಕಾರ್ಯದರ್ಶಿ, ವರಲಕ್ಷ್ಮೀ, ಮುಖಂಡರಾದ ದಿಲ್ ಶಾದ್, ರಾಜೇಶ್ವರಿ, ಯಮನಮ್ಮ ನಾಯಕ್, ರಾಧಿಕಾ, ಉಮಾದೇವಿ, ನಾಗಮ್ಮ, ಹುಲಿಗೆಮ್ಮ, ಸಾಹಿರಾ ಬೇಗಂ, ಕುಮಾರಿ, ಲಕ್ಷ್ಮೀ ಒಡಕಿ, ಫಾತೀಮಾ, ಅಮೀನುದ್ದೀನ್ ಸಾಸಿಹಾಳ, ಚನ್ನಬಸವ ಅಂಬೇಡ್ಕರ್ ನಗರ, ನಿಂಗಪ್ಪ, ಹನೀಫ್, ಮಹಾಂತೇಶ್, ದಾವೂದ್, ಅಲ್ಲಾಭಕ್ಷ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಜನವಾದಿ1
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X