ರಾಯಚೂರು | ಉಸ್ತುವಾರಿ ಸಚಿವರ ವಿರುದ್ದ ‘ಗೋಬ್ಯಾಕ್’ ಹೋರಾಟದ ಎಚ್ಚರಿಕೆ

Date:

ಸರ್ಕಾರಿ ಶಾಲೆಗೆ ಮೀಸಲಿಟ್ಟ ಜಾಗ ಒತ್ತುವರಿಯಾಗಿರುವುದನ್ನು ತೆರವುಗೊಳಿಸದಿದ್ದರೆ ರಾಯಚೂರು ಜಿಲ್ಲೆ ಉಸ್ತುವಾರಿ ಸಚಿವರ ವಿರುದ್ದ ಗೋ ಬ್ಯಾಕ್ ಹೋರಾಟ ನಡೆಸಲಾಗುತ್ತದೆ ಎಂದು ದಲಿತ ಮತ್ತು ಪ್ರತಗತಿಪರ ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡ ಅಶೋಕ ಜೈನ್ ಹೇಳಿದರು.

- Advertisement -

ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ನಗರದ ವಾರ್ಡ್ ನಂ.28ರ ಸಂತೋಷಿ ನಗರದ ಬಡಾವಣೆಯಲ್ಲಿ ಸರ್ವೆ ನಂ. 384/1/ಎ ನಾಗರಿಕ ಕೋಟಾದಲ್ಲಿ ಇರುವ ಜಾಗದಲ್ಲಿ ಕನ್ನಡ ಶಾಲೆಗೆ ಮಂಜೂರಾಗಿದ್ದು, ಕನ್ನಡ ನಿರ್ಮಾಣಕ್ಕೆ ಈಗಾಗಲೇ ಪಿಡಬ್ಲ್ಯೂಡಿ ಇಲಾಖೆಗೆ ಕಾಮಗಾರಿ ವಹಿಸಲಾಗಿದೆ. ಈ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ತೆರವುಗೊಳಿಸಿ ಶಾಲಾ ಕಟ್ಟಡ ಪ್ರಾರಂಭಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕನ್ನಡ ಶಾಲೆಗಾಗಿ ಮೀಸಲಿಟ್ಟ ಜಾಗದಲ್ಲಿ ವೆಂಕಟೇಶ ಎನ್ನುವವರು ಒತ್ತುವರಿ ಮಾಡಿಕೊಂಡು ಟಿನ್‌ಶೆಡ್ ನಿರ್ಮಾಣ ಮಾಡಿ, ಆ ಶೆಡ್‌ಗೆ ಬಣ್ಣ ಬಳಿದು ದೇವಸ್ಥಾನವನ್ನಾಗಿ ಮಾರ್ಪಡಿಸಲು ಮುಂದಾಗಿದ್ದಾರೆ. ಶೈಕ್ಷಣಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಸರ್ಕಾರಿ ಪ್ರೌಢಶಾಲೆ ಎಲ್‌ಬಿಎಸ್ ನಗರದ ಕನ್ನಡ ಮಾಧ್ಯಮ ಶಾಲೆಗೆ 1017.45. ಚದರ ಅಡಿ ಖಾಲಿ ನಿವೇಶನ ಜಾಗವು ಈ ಹಿಂದೆ ಆರ್‌ಡಿಎಯಿಂದ ಹಂಚಿಕೆಯಾಗಿದೆ” ಎಂದರು‌.

“ಕೆಲ ಬಡಾವಣೆಯಲ್ಲಿನ ಕುತಂತ್ರದಿಂದ ದೇವರು ಮತ್ತು ದೇವಸ್ಥಾನದ ಹೆಸರಿನಲ್ಲಿ ನಿವೇಶನ ಕಬಳಿಸಲು ಹುನ್ನಾರ ನಡೆಸಿದ್ದಾರೆ” ಎಂದು ಆರೋಪಿಸಿದರು.

“ಮನೆ ನಿರ್ಮಾಣಕ್ಕೆ ತಾತ್ಕಾಲಿಕ ಟಿನ್‌ಶೆಡ್ ನಿರ್ಮಿಸಿ ಕೆಲಸ ಮಾಡುವ ವಸ್ತುಗಳನ್ನು ಇರಿಸಲಾಗಿತ್ತು. ಇದೀಗ ಆ ಶೆಡ್‌ಗೆ ಬಣ್ಣ ಬಳಿದು ದೇವಸ್ಥಾನವನ್ನಾಗಿ ಮಾರ್ಪಡಿಸುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದಲ್ಲದೆ, ಸರ್ಕಾರಿ ಶಾಲೆಗೆ ಮೀಸಲಿಟ್ಟ ಜಾಗವನ್ನು ಕಬಳಿಸಲು ಮುಂದಾಗಿದ್ದಾರೆ” ಎಂದು ದೂರಿದರು.

“ಟಿನ್‌ಶೆಡ್ ತೆರವುಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಶಿಕ್ಷಣ ಇಲಾಖೆ ಹಾಗೂ ನಗರಸಭೆಗೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೆ ಕುಂಟು ನೆಪಗಳನ್ನು ಒಡ್ಡುತ್ತಿದ್ದಾರೆಯೇ ಹೊರತು ತೆರವುಗೊಳಿಸಲು ಮುಂದಾಗಿಲ್ಲ. ಉಸ್ತುವಾರಿ ಸಚಿವರೇ ಖುದ್ದಾಗಿ ತೆರವುಗೊಳಿಸಿ, ಒತ್ತುವರಿ ಮಾಡಿದವರ ವಿರುದ್ಧ ದೂರು ದಾಖಲಿಸಲು ಆದೇಶ ನೀಡಿದರೂ ಸಚಿವರ ಆದೇಶಕ್ಕೆ ಕಿಮ್ಮತ್ತು ಇಲ್ಲದಂತಾಗಿದೆ. ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಾಸಕ ಶಿವರಾಜ ಪಾಟೀಲ್ ಇದಕ್ಕೆ ಅಡ್ಡಗಾಲು ಹಾಕಿ ವೆಂಕಟೇಶ ಎನ್ನಯವವರಿಂದ ಒತ್ತುವರಿ ಮಾಡಿಸಿದ್ದಾರೆ” ಎಂದು ಆರೋಪಿಸಿದರು.

“ಸರ್ಕಾರಿ ಶಾಲೆಯನ್ನು ಉಳಿಸಿ ಬೆಳಸಬೇಕಾದವರೇ ಅಳಿಸಲು ಮುಂದಾಗಿದ್ದು ಶೋಚನೀಯ. ವೆಂಕಟೇಶ ಎನ್ನುವವರಿಂದ ಒತ್ತುವರಿ ಮಾಡಿಸಿ ಇದಕ್ಕೆ ₹15 ಲಕ್ಷ ಖರ್ಚು ಮಾಡಿದ್ದಾರೆಂದು ತಿಳಿದುಬಂದಿದೆ. ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಲು ಮುಂದಾಗದೇ ಇದ್ದಲ್ಲಿ ಗೋ ಬ್ಯಾಕ್ ಚಳವಳಿ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಎಸ್ ನರಸಿಂಹಲು ಮಾತನಾಡಿ, “ಸರ್ಕಾರಿ ಶಾಲೆ ನಿರ್ಮಾಣಕ್ಕಾಗಿ ನೀಡಿದ ಜಾಗದಲ್ಲಿ ಶಾಲಾ ಕಟ್ಟಡ ಕಡ್ಡದೆ ಶಾಲೆಯನ್ನೇ ಬೇರೆ ಕಡೆ ಸ್ಥಳಾಂತರ ಮಾಡಲು ಶಾಸಕರು ಪತ್ರ ಬರೆದಿದ್ದು, ಇದರಿಂದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಶಾಲೆಯ ಕಟ್ಟಡವಿಲ್ಲದೆ ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 600 ಮಂದಿ ಮಕ್ಕಳು ಅಲ್ಪ ಸಂಖ್ಯಾಂತರ ಇಲಾಖೆಯ ಕಟ್ಟಡದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯ ಹಿತ ಕಾಪಾಡದೇ ಒತ್ತುವರಿ ಮಾಡಿಸಿದವರಿಗೆ ಪ್ರೋತ್ಸಾಹಿಸುತ್ತಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿದೆ” ಎಂದು ಆರೋಪಿಸಿದರು.

“ತಮ್ಮ ಹಿಂಬಾಲಕರು, ವ್ಯಾಪಾರಸ್ಥರ ಪರವಾಗಿ ನಿಂತು ಅವರ ಪರ ವಕಾಲತ್ತು ಮಾಡಿದ್ದು ನಾಚಿಕೆಗೇಡಿತನವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿನಿಲಯದ ವಿದ್ಯಾರ್ಥಿಗಳ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ಅಂಬಾಜಿ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೆ ನಗರದಲ್ಲಿ ಮಾತ್ರ ಬಿಜೆಪಿ ಸರ್ಕಾರವಿದೆ. ಐಎಎಸ್, ಐಪಿಎಸ್ ಅಧಿಕಾರಿಗಳೇ ಇವರು ಹೇಳಿದಂತೆ ಮಾಡುವಂತಾಗಿದೆ. ಸರ್ಕಾರದ ಉಸ್ತುವಾರಿ ಸಚಿವರೂ ಕೂಡ ಶಾಸಕರ ಬೆಂಬಲಕ್ಕೆ ನಿಂತಿದ್ದಾರೆ. ಜಿಲ್ಲೆಯು ಶೈಕ್ಷಣಿಕವಾಗಿ ಹಿಂದುಳಿದಿದ್ದು, ಮುಂದೆ ತರುವ ಕೆಲಸ ಮಾಡಬೇಕು. ಆದರೆ ಇದಕ್ಕೆ ಅಡ್ಡಗಾಲು ಹಾಕಲಾಗಿದೆ. ಕೂಡಲೇ ಟಿನ್‌ಶೆಡ್ ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸದಿದ್ದಲ್ಲಿ ʼಉಸ್ತುವಾರಿ ಸಚಿವರೇ ಗೋ ಬ್ಯಾಕ್ʼ ಹೋರಾಟ ಮಾಡಲಾಗುತ್ತದೆ” ಎಂದು ತಿಳಿಸಿದರು.

ಕೆ ರಂಗನಾಥ, ಶಿವುಕುಮಾರ ಯಾದವ್, ಶ್ರೀನಿವಾಸ ಕಲವಲದೊಡ್ಡಿ, ಮಹೆಬೂಬ್ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...