ರಾಯಚೂರು | ಮೂರು ದಿನಗಳಿಗೊಮ್ಮೆ ನೀರು; ನಗರಸಭೆಗೆ ಮುತ್ತಿಗೆ ಎಚ್ಚರಿಕೆ

Date:

ನಗರದಲ್ಲಿ ಮೂರು ದಿನಗಳಿಗೊಮ್ಮೆ ನೀರು ಬಿಡುವುದಾಗಿ ನಗರಸಭೆ ಪೌರಾಯುಕ್ತರು ಪ್ರಕಟಿಸಲು ಅಧಿಕಾರ ಇಲ್ಲ. ನಗರಸಭೆ ಸದಸ್ಯರು ಹಾಗೂ ಶಾಸಕರೊಂದಿಗೆ ಚರ್ಚಿಸದೇ ಪ್ರಕಟಿಸಿರುವುದನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಮಾಜಿ ಶಾಸಕ ಎ.ಪಾಪಾರೆಡ್ಡಿ ಹೇಳಿದರು.

ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾರಾಯಣಪುರ ಜಲಾಶಯ ಮತ್ತು ಗಣೇಕಲ್ ಜಲಾಶಯದಲ್ಲಿ ನೀರು ಸಂಗ್ರಹವಿದೆ. ಆದರೂ, ಮೂರು ದಿನಗಳಿಗೊಮ್ಮೆ ನೀರು ಬಿಡುವದಾಗಿ ಹೇಳುತ್ತಿದ್ದಾರೆ. ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು, ಸದಸ್ಯರು, ಶಾಸಕರು, ಸಂಸದರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸದೇ ಏಕಾಎಕಿ ಪ್ರಕಟಿಸಿದ್ದಾರೆ. ಅವರಿಗೆ ಈ ಅಧಿಕಾರವಿಲ್ಲ. ಕೂಡಲೇ ಸಭೆ ಕರೆದು ತೀರ್ಮಾನ ಪ್ರಕಟಿಸಬೇಕು.

ನಗರಸಭೆ ಪೌರಾಯುಕ್ತರು ಕುಡಿಯುವ ನೀರಿನ ಗೊಂದಲ ಸೃಷ್ಟಿಸುವ ಜೊತೆಗೆ ಮುಟ್ಯೇಷನ್, ಇ-ಖಾತಾ ನೀಡುವುದನ್ನು ತಡೆದಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿ ನೀಡಬಹುದಾಗಿದ್ದರೂ ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ನಗರದಲ್ಲಿ ಸ್ವಚ್ಚತೆ ಸೇರಿದಂತೆ ಯಾವುದೇ ಕಾಮಗಾರಿಗಳನ್ನು ಸಹ,  ಪೌರಾಯುಕ್ತರು ಬಡಾವಣೆಗೆ ಆಗಮಿಸಿ ವೀಕ್ಷಣೆ ಮಾಡಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೇಸಿಗೆ ದಿನಗಳು ಸಮೀಪಿಸುವ ಮುನ್ನವೇ ಕುಡಿಯುವ ನೀರಿನ ಸಮಸ್ಯೆಯಾಗದಂತೆ  ಎಚ್ಚರಿಕೆವಹಿಸಬೇಕಿದೆ. ಅನಗತ್ಯವಾಗಿ ಸಮಸ್ಯೆಯನ್ನು ಸೃಷ್ಟಿಸಬಾರದು. ಆಡಳಿತಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು, ಪೌರಾಯುಕ್ತರಿಗೆ ನಿರ್ದೇಶನ ನೀಡಬೇಕು. ಇಲ್ಲದೇ ಹೋದಲ್ಲಿ ನಗರಸಭೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು. ನಗರ ಜನತೆ ಹಾಗೂ ಪತ್ರಕರ್ತರು ಸಹ ಆತ್ಮಾವಲೋಕನ ಮಾಡಿಕೊಳ್ಳಬೇಕು. ಚರಂಡಿಗೆ ಕಸ ಹಾಕುವುದನ್ನು ನಿಲ್ಲಿಸಬೇಕು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರುಗಳಾದ ಶಶಿರಾಜ, ಎನ್. ಕೆ. ನಾಗರಾಜ, ಬಿಜೆಪಿ ನಗರ ಅಧ್ಯಕ್ಷ ಬಿ.ಗೋವಿಂದ, ಆರ್‌ಡಿಎ ಮಾಜಿ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಮಹೇಂದ್ರರೆಡ್ಡಿ, ಯು.ನರಸರೆಡ್ಡಿ, ಗುಡ್ಡಿ ನರಸರೆಡ್ಡಿ, ವೀರೇಶ್ ಪೋಗಲ್ ಉಪಸ್ಥಿತರಿದ್ದರು.

ವರದಿ : ಸಿಟಿಜನ್‌ ಜರ್ನಲಿಸ್ಟ್‌, ಹಫೀಜುಲ್ಲ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬಸ್‌ ನಿಲ್ಲಿಸದ ಹಾಗೂ ಅಸಭ್ಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆಗ್ರಹ

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಹೊರವಲಯದ ಎಸ್.ಆರ್.ಕೆ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ...

ನಾಗೇಂದ್ರ ರಾಜೀನಾಮೆ ಹಿನ್ನೆಲೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಝಮೀರ್ ಅಹಮದ್ ಹೆಗಲಿಗೆ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಸಚಿವ ಝಮೀರ್ ಅಹಮದ್ ಖಾನ್...

ತುಮಕೂರು | ಕಲುಷಿತ ನೀರು ಸೇವನೆ ಪ್ರಕರಣ : ಮೃತರ ಸಂಖ್ಯೆ ಏಳಕ್ಕೆ ಏರಿಕೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ...