ಕಲುಷಿತ ನೀರು ಕುಡಿದು 20 ಜನರಿಗೆ ಹೊಟ್ಟೆ ನೋವು ಉಂಟಾಗಿ ವಾಂತಿ ಭೇದಿಯಾಗಿ ಅಸ್ವಸ್ಥರಾದ ಘಟನೆ ಸಿಂಧನೂರು ತಾಲ್ಲೂಕು ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಕಳೆದ ಒಂದು ವರ್ಷದಿಂದ ನೀರಿನ ಟ್ಯಾಂಕ್‌ನ್ನು ಸ್ವಚ್ಛಗೊಳಿಸದಿರುವುದೇ ಕಲುಷಿತಗೊಂಡ ಕಾರಣವೇ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ವಾಂತಿ, ಭೇದಿಗೆ ನರಳುತ್ತಿರುವ ಜನರಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನಿಬ್ಬರಿಗೆ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಷಯ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ತಾಲ್ಲೂಕು ಆರೋಗ್ಯ ಅಧಿಕಾರಿಗಳು ತುರ್ತು ಚಿಕಿತ್ಸೆಗೆ ಸಿಬ್ಬಂದಿಯನ್ನು ನೇಮಿಸಿ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರಾ ನಿಗಾವಹಿಸಬೇಕು.ಗ್ರಾಮದ ಜನರು ಸೇವಿಸುವ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು ,ವರದಿ ನಂತರವೇ ಕಾರಣ ಗೊತ್ತಾಗಲಿದೆ ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕಿರಾಣಿ ಅಂಗಡಿಯಲ್ಲಿ ಕಳ್ಳತನ ; ಇಬ್ಬರ ಬಂಧನ
ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ ಹಾಗೂ ಜಿ.ಪಂ. ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ವಿಜಯಲಕ್ಷ್ಮೀ ಸೇರಿದಂತೆ ಅಧಿಕಾರಿಗಳ ತಂಡ ರೋಗಿಗಳ ಮನೆ ಮನೆಗೆ ತೆರಳಿ ಸಮಸ್ಯೆ ಆಲಿಸಿದರು.ಆರೋಗ್ಯದಲ್ಲಿ ಏರುಪೇರು ಕಂಡು ಬಂದರೆ ತಕ್ಷಣವೇ ಚಿಕಿತ್ಸೆಗೆ ಆಸ್ಪತ್ರೆಗೆ ಬರಬೇಕೆಂದು ಹೇಳಿದರು.