ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ತರಗತಿಗಳು ಸರಿಯಾಗಿ ನಡೆಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಕಾಲೇಜು ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದರು.
ಕಾಲೇಜಿನಲ್ಲಿ ಪೂರ್ಣಕಾಲಿಕವಾಗಿ ಕೇವಲ ಇಬ್ಬರು ಉಪನ್ಯಾಸಕರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಉಳಿದ ವಿಷಯಗಳ ಪಾಠಗಳು ನಡೆಯದೇ ವಿದ್ಯಾರ್ಥಿನಿಯರು ಹಿಂದುಳಿಯುತ್ತಿರುವುದಾಗಿ ಪ್ರತಿಭಟನಾಕಾರಿಣಿಯರು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಒಂದು ತಿಂಗಳು ಕಳೆಯುತ್ತಾ ಬಂದರೂ ಸಹ ಸರ್ಕಾರ ಅತಿಥಿ ಉಪನ್ಯಾಸಕರನ್ನು ನೇಮಿಸದೆ ಇರುವುದರಿಂದ ಶೈಕ್ಷಣಿಕವಾಗಿ ತೊಂದರೆಯಾಗುತ್ತಿದ್ದು, ಈ ಕೂಡಲೇ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದರು ಬೇಡಿಕೆ ಬಗೆಹರಿಸಿಲ್ಲ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಕೂಡಲೇ ಸಮಸ್ಯೆಗೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ, ಬೀದಿಗೆ ಇಳಿದು ಪ್ರತಿಭಟನೆ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕಾಲೇಜಿನ ಪ್ರಾಂಶುಪಾಲರಾದ ಮಹಾಂತಪ್ಪ ಕೊಡಗಲಿ ಅವರಿಗೆ ವಿದ್ಯಾರ್ಥಿನಿಯರು ಮನವಿ ಪತ್ರ ಸಲ್ಲಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ
ಈ ವೇಳೆ ವಿದ್ಯಾರ್ಥಿನಿಯರಾದ ಶ್ರೀದೇವಿ ಮುರಳಿ, ಶಿಲ್ಪಾ, ಲಕ್ಷ್ಮಿ, ಮಹಿಳಾ ಕಾಲೇಜಿನ ಅನೇಕ ವಿದ್ಯಾರ್ಥಿನಿಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
