ರಾಯಚೂರು | ಹಟ್ಟಿ ಚಿನ್ನದ ಗಣಿಯಲ್ಲಿ ಕಾರ್ಮಿಕ ಸಾವು; ಕುಟುಂಬಕ್ಕೆ ಉದ್ಯೋಗಕ್ಕಾಗಿ ಪ್ರತಿಭಟನೆ

Date:

ಲಿಂಗಸುಗೂರು ತಾಲೂಕು ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ಮಾಡುವಾಗ ಕಾರ್ಮಿಕ ಸುಮನ್ ಮೃತಪಟ್ಟಿದ್ದು, ಆತನ ಕುಟುಂಬಕ್ಕೆ ಉದ್ಯೋಗ ಒದಗಿಸಬೇಕು ಎಂದು ಆಗ್ರಹಿಸಿ ಗಣಿ ಕಂಪನಿಯ ಆಸ್ಪತ್ರೆಯಲ್ಲಿ ಮೃತದೇಹವಿಟ್ಟು ಕಾರ್ಮಿಕರು ಪ್ರತಿಭಟನೆ ನಡೆಸಿದರು.

- Advertisement -

ಕಾರ್ಮಿಕ ಮುಖಂಡರು ಮಾತನಾಡಿ, ‘ಗಣಿ ಕಂಪನಿಯ ಸೆಂಟ್ರಲ್ ಶಾಫ್ಟ್‌ನಲ್ಲಿ ಕೆಲಸ ಮಾಡುವಾಗ ಸುಮನ್ ಮೃತಪಟ್ಟಿದ್ದು, ಅನುಕಂಪದ ಆಧಾರದ ಮೇಲೆ ನೀಡುವ ಉದ್ಯೋಗವನ್ನು ಅವರ ಕುಟುಂಬದ ಒಬ್ಬರಿಗೆ ಶಿಕ್ಷಣಕ್ಕೆ ಅನುಗುಣವಾಗಿ ನೀಡಬೇಕು. ಹಿಂದೆ ಗಣಿಯಲ್ಲಿ ಕೆಲಸ ಮಾಡುವಾಗ, ಆನ್ವರಿ ಗ್ರಾಮದ ಕಾರ್ಮಿಕ ಮೃತಪಟ್ಟಾಗ ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗ ನೀಡಿದ ಉದಾಹರಣೆಯಿದೆ. ಅದರ ಅನ್ವಯ ಮೃತರ ಕುಟುಂಬಕ್ಕೆ ಉದ್ಯೋಗ ನೀಡಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

‘ಗಣಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಬೆಲೆ ಇಲ್ಲದಂತಾಗಿದೆ. ಹಲವು ವರ್ಷ ಸೇವೆ ಸಲ್ಲಿಸಿದ ಕಾರ್ಮಿಕರಿಗೆ ಉದ್ಯೋಗ ನೀಡುವಲ್ಲಿ ಗಣಿ ಕಂಪನಿ ಮೀನಮೇಷ ಮಾಡುತ್ತಿರುವುದು ಸರಿಯಲ್ಲ. ಮೊಂಡುತನ ಬಿಟ್ಟು ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಕಾರ್ಮಿಕರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಕಾರ್ಮಿಕರು ಗಣಿ ಕಂಪನಿಯ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಸಿಐಟಿಯು ಸಂಘದ ಕಾರ್ಮಿಕ ಮುಖಂಡರಾದ ಶಾಂತಪ್ಪ ಆನ್ವರಿ, ಗುಂಡಪ್ಪಗೌಡ ಗುರಿಕಾರ, ಜಮದಗ್ನಿ ಕೋಠಾ, ನಾಗರಾಜ, ಯಂಕೋಬ ಮಿಯ್ಯಾಪುರ, ಸಿದ್ದಪ್ಪ, ಚಂದ್ರಶೇಖರ ನೆಲೋಗಿ, ಗಣಿ ಕಂಪನಿಯ ಕಾರ್ಮಿಕರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...

ಚಿಕ್ಕಮಗಳೂರು | ಎಸ್ಟೇಟ್‌ನಲ್ಲಿ ಕಾರ್ಮಿಕರಿಗೆ ದೌರ್ಜನ್ಯ: ಸಿಪಿಐ (ಎಂಎಲ್) ರೆಡ್ ಸ್ಟಾರ್ ತೀವ್ರ ಖಂಡನೆ

ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಪಕ್ಷದ ಜಿಲ್ಲಾ ಸಮಿತಿ ನಿಯೋಗ...

ಮಾಜಿ ಶಾಸಕರಿಗೆ ಲಕ್ಷಾಂತರ ರೂ. ಸೌಲಭ್ಯ: ಜನಸಾಮಾನ್ಯರ ಬೇಡಿಕೆಗಳಿಗೆ ಮಾತ್ರ ಆರ್ಥಿಕ ಹೊರೆಯ ನೆಪ!

ಮಾಜಿ ಶಾಸಕರಿಗೆ ಪಿಂಚಣಿ, ವೈದ್ಯಕೀಯ ನೆರವು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು...