ರಾಯಚೂರು | ಸರ್ಕಾರಗಳ ಗುತ್ತಿಗೆ ಪದ್ಧತಿಯಿಂದ ಕಾರ್ಮಿಕರನ್ನು ಒಕ್ಕಲೆಬ್ಬಿಸುತ್ತಿದ್ದಾರೆ: ಸೈಯದ್ ಮುಜೀಬ್

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಯಂ ನೇಮಕಾತಿ ಪದ್ದತಿ ತೆಗೆದು ವ್ಯವಸ್ಥಿತವಾಗಿ ಗುತ್ತಿಗೆ ಪದ್ದತಿ ಜಾರಿ ಮಾಡಿ ಕೆಲಸದ ಅಭದ್ರತೆ ಮಾಡುತ್ತಿವೆ ಹಾಗೂ ಉದ್ಯೋಗ ಸೃಷ್ಟಿಮಾಡುವಲ್ಲಿ ವಿಫಲವಾಗಿವೆ ಎಂದು ಸಿಪಿಎಂ ರಾಜ್ಯ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್ ಮುಜೀಬ್ ಹೇಳಿದರು.

- Advertisement -

ರಾಯಚೂರು ನಗರದ ರಂಗ ಮಂದಿರದಲ್ಲಿ ರಾಯಚೂರು ಜಿಲ್ಲಾ ಸಿಪಿಎಂ 14ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಿರುವ ಉದ್ಯೋಗಗಳಿಗೆ ಭದ್ರತೆ ಕೊಡುತ್ತಿಲ್ಲ. ಆಡಳಿತ ಸರ್ಕಾರ ಕಾರ್ಮಿಕರ ಪರವಾಗಿದ್ದ ನಲವತ್ತು ಸೌಲಭ್ಯಗಳಿರುವ ಕಾನೂನುಗಳನ್ನ ತೆಗೆದು ನಾಲ್ಕು ಕಾರ್ಮಿಕ‌ ಕಾಯ್ದೆ ಸಂಯುಕ್ತ ಮಾಡಿ ಕಾರ್ಮಿಕರನನ್ನು ಬೀದಿಪಾಲು ಮಾಡುತ್ತಿವೆ” ಎಂದು ತಿಳಿಸಿದರು.

“ವೇತನದಲ್ಲಿಯೂ ಕೂಡ ಕನಿಷ್ಠ ವೇತನ ಜಾರಿ ಮಾಡಲಾಗದೆ ಮಾಲೀಕರ ಪರವಾಗಿ ಸರ್ಕಾರಗಳು ಕೆಲಸ ಮಾಡುತ್ತಿವೆ. ದೇಶ ಕಟ್ಟುವ ರೈತ, ಕಾರ್ಮಿಕರ ವಿರೋಧಿ ನೀತಿಗಳನ್ನು ಸರ್ಕಾರ ಜಾರಿಗೆ ತಂದು ಒಕ್ಕಲೆಬ್ಬಿಸುತ್ತಿವೆ. ದೇಶದಲ್ಲಿರುವ ರೈತರ ಭೂಮಿಯನ್ನು ಕಸಿದುಕೊಂಡು ಬಹುರಾಷ್ಟ್ರೀಯ ಕಂಪನಿಗಳಿಗೆ ಕೋಡಲು ಮುಂದಾಗಿವೆ‌. ಇದರಿಂದಾಗಿ ದೇಶದಲ್ಲಿ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗುತ್ತದೆ. ಈ ಸರ್ಕಾರಗಳ ನೀತಿ ವಿರುದ್ಧ ದೊಡ್ಡ ಮಟ್ಟದಲ್ಲಿ ರೈತ ಕಾರ್ಮಿಕರು ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಎಚ್ಚರಿಸಬೇಕಾಗಿದೆ” ಎಂದು ಸಲಹೆ ನೀಡಿದರು.

ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ ಕೆ ಪ್ರಕಾಶ ಮಾತನಾಡಿ‌, “ದೇಶದಲ್ಲಿ ಕೇಂದ್ರ ಸರ್ಕಾರ ಧರ್ಮ ಮತ್ತು ಜಾತಿ ಹೆಸರಿನಲ್ಲಿ ಜನರನ್ನು ವಿಭಜನೆ ಮಾಡುತ್ತದೆ. ನಿಜವಾದ ಜನರ ಸಂಕಷ್ಟಗಳಾದ ಬಡತನ, ನಿರುದ್ಯೋಗ, ರೈತರು ಬೆಳೆದ ಬೆಳೆಗಳಿಗೆ ಬೆಂಬಲಿತ ಬೆಲೆ ಕೊಡಲಾರದೆ ಧರ್ಮದ ಅಫೀಮಿನಲ್ಲಿ ದಾರಿ ತಪ್ಪಿಸುತ್ತಿವೆ” ಎಂದು ಆರೋಪಿಸಿದರು.

“ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ ನೀತಿ ತಂದು ರಾಜ್ಯ ಸರ್ಕಾದಿಂದ ಜಾರಿ ಮಾಡಿಸಲು ಮುಂದಾಗಿವೆ. ಕೇಂದ್ರ ಸರ್ಕಾರದ ನೀತಿಯಿಂದ ಬಿಪಿಎಲ್‌ ಕಾರ್ಡ್‌ಗಳು ರದ್ದಾಗುತ್ತಿವೆ. ರಾಜ್ಯ ಸರ್ಕಾರ‌, ಕೇಂದ್ರ ಸರ್ಕಾರದ ನೀತಿ ವಿರೋಧಿಸುವಲ್ಲಿ ವಿಫಲವಾಗಿದೆ‌. ವಕ್ಫ್‌ ಕೂಡ ಸುಪ್ರೀಂ ಕೊರ್ಟ್ ಆದೇಶದಂತೆ ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಆದೇಶವಾಗಿದೆ. ಆದರೆ ಪ್ರಸ್ತುತ ಬಿಜೆಪಿಯವರು ವಕ್ಫ್‌ ಹೆಸರಿನಲ್ಲಿ ರಾಜಕೀಯ ಮಾಡಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ. ಎರಡೂ ಸರ್ಕಾರಗಳು ಉದ್ಯೋಗ‌, ಆರೋಗ್ಯ, ಶಿಕ್ಷಣ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ” ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ನಮ್ಮ ಶಾಲೆ ಮುಚ್ಚಕ್ಕೆ ಬಿಡಲ್ಲ: ಬ್ಯಾಲಹಳ್ಳಿ ಹೈಸ್ಕೂಲ್ ವಿದ್ಯಾರ್ಥಿಗಳ ಪೋಷಕರ ಆಕ್ರೋಶ

“ದೇಶದಲ್ಲಿ ಎಡ ಮತ್ತು ಪ್ರಜಾಸತ್ತಾತ್ಮಕ ರಾಜಕೀಯ ಗಟ್ಟಿಳಿಸಲು ಸಿಪಿಐಎಂ 14ನೇ ಜಿಲ್ಲಾ ಸಮ್ಮೇಳನ ಆಯೋಜಿಸಲಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಏಮ್ಸ್, ನೀರಾವರಿ ಯೋಜನೆ, ಕೈಗಾರಿಕೆಗಾಗಿ ದೊಡ್ಡ ಹೋರಾಟ ಮಾಡಲು ಎರಡು ದಿನ ನಡೆಯುವ ಸಮ್ಮೇಳನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಹೇಳಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಕೆಜಿ ವೀರೇಶ್, ಕಾರ್ಯದರ್ಶಿ ಮಂಡಳಿ ಸದಸ್ಯರಾದ ಎಚ್ ಪದ್ಮಾ, ನರಸಣ್ಣ ನಾಯಕ, ಶರಣಬಸವ, ಶಬ್ಬೀರ್, ಗಿರಿಯಪ್ಪ ಪೂಜಾರಿ, ದೇವಿಂದ್ರಗೌಡ, ಶೇಖಮ್ಮ ದೇಸಾಯಿ, ವರಲಕ್ಷ್ಮೀ,ಎಸ್ ಎಸ್ ಐ ಜಿಲ್ಲಾಧ್ಯಕ್ಷ ರಮೇಶ ವೀರಾಪುರ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...