ರಾಯಚೂರು | ಯರಗೇರಾ ತಾಲ್ಲೂಕಿಗೆ ಹೋರಾಟ –ಸಿಎಂ ಭರವಸೆ ; ನಿಜಾಮ್

Date:

ಯರಗೇರಾ ತಾಲ್ಲೂಕು ಕೇಂದ್ರಕ್ಕಾಗಿ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆದ ಹೋರಾಟದ ವೇಳೆ ಮುಖ್ಯಮಂತ್ರಿ ಅವರನ್ನು ಭೇಟಿಯಾದಾಗ ತಾಲ್ಲೂಕು ಕೇಂದ್ರವನ್ನಾಗಿಸಲು ಅಗತ್ಯವಿರುವ ದಾಖಲೆಗಳನ್ನು ಪರಿಶೀಲಿಸಿ, ಮುಂದೆ ಕ್ರಮವಹಿಸಲಾಗುವುದು ಭರವಸೆಯನ್ನು ನೀಡಿದ್ದಾರೆ ಎಂದು ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಮಹ್ಮದ್ ನಿಜಾಮುದ್ದೀನ ಹೇಳಿದರು.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯರಗೇರಾ ಹೋಬಳಿಯನ್ನು ತಾಲ್ಲೂಕು ಕೇಂದ್ರವನ್ನಾಗಿಸಲು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಮಾಡಲಾಗಿದ್ದು, ಜೊತೆಗೆ ಸಿಎಂ ಕಂದಾಯ ಸಚಿವರು, ಸೇರಿದಂತೆ ಇತರೆ ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಲಾಗಿದೆ. ಇದೀಗ ಯರಗೇರಾ ತಾಲ್ಲೂಕು ಕೇಂದ್ರವನ್ನಾಗಿಸಲು ದಾಖಲೆ ಸಿಕ್ಕಿದ್ದು, ಸರ್ಕಾರ ಯರಗೇರಾವನ್ನು ತಾಲೂಕು ಕೇಂದ್ರವನ್ನಾಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ತಾಲ್ಲೂಕು ಕೇಂದ್ರವಾಗಿದ್ದ ಯರಗೇರಾ ಹೋಬಳಿಯನ್ನು ಪುನಃ ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಗ್ರಾಮಸ್ಥರು ಸರ್ಕಾರವನ್ನು ಒತ್ತಾಯಿಸಿದ್ದಾರೆ ಹೈದ್ರಾಬಾದ್‌ನಲ್ಲಿ ದೊರಕಿರುವ ಯರಗೇರಾ ತಾಲ್ಲೂಕು ಕೇಂದ್ರವಾಗಿದ್ದ ಮಹತ್ವದ ದಾಖಲೆಗಳನ್ನು ಒಳಗೊಂಡಿದೆ. ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಯರಗೇರಾ ತಾಲ್ಲೂಕು ಮರುಸ್ಥಾಪನೆ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ಸರಕಾರದ ಗಮನ ಸೆಳೆಯಲು ತಮ್ಮ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.

ಒಂದು ವೇಳೆ ಯರಗೇರಾ ತಾಲ್ಲೂಕು ಕೇಂದ್ರವನ್ನಾಗಿಸದೇ ಸರ್ಕಾರ ನಿರ್ಲಕ್ಷ ವಹಿಸಿದರೇ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟವನ್ನು ರೂಪಿಸಲಾಗುವುದು, ರಸ್ತೆ ತಡೆ ಚಳುವಳಿಯನ್ನು ಮಾಡಲಾಗುವುದು ಎಂದು ಎಚ್ಚರಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಆಟೋ ಪಲ್ಟಿ ಹಲವರಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಈ ಸಂದರ್ಭದಲ್ಲಿ ಬಸವರಾಜ ಹೂಗಾರ, ಮಹೆಬೂಬ್ ಪಟೇಲ್, ಕೆ.ಲಕ್ಷ್ಮೀಪತಿ, ಮಹ್ಮದ್ ರಫಿ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...