ರಾಯಚೂರು ನಗರಕ್ಕೆ ಮಹಾಗಣಪತಿ ವಿಸರ್ಜನೆಯ ಅಂಗವಾಗಿ ಆಗಮಿಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪ್ರವೇಶ ನೀಡಬಾರದು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಪಕ್ಷವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ದ್ವೇಷ ಭಾಷಣ ಮಾಡಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುವ ಕಾರಣ ಶಾಂತಿ ಭಂಗಕ್ಕೆ ಕಾರಣರಾಗಿದ್ದಾರೆ. ರಾಯಚೂರು ನಗರದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗಿರುವುದರಿಂದ ದ್ವೇಷ ಭಾಷಣ ಮಾಡುವ ಸಾಧ್ಯತೆ ಇರುತ್ತದೆ. ಇದರಿಂದ ಸೌಹಾರ್ದತೆಯ ನಾಡನ್ನು ಹಾಳು ಮಾಡುವ ಭೀತಿಯಿದೆ ಎಂದು ಆಗ್ರಹಿಸಿದರು.
ಯತ್ನಾಳ ಅನೇಕ ಬಾರಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಪ್ರಚೋದನಾತ್ಮಕ ಹೇಳಿಕೆಗಳು, ಮುಸ್ಲಿಂ ಮಹಿಳೆಯರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಅವರು ನಿರಂತರವಾಗಿ ಮಾಡುತ್ತಿದ್ದಾರೆ ಹಾಗೂ ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಅವರ ಭೇಟಿಯ ನಂತರ ಗಲಭೆ ಉಂಟಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ಇದರಿಂದ ಸಮಾಜದಲ್ಲಿ ಭಿನ್ನಾಭಿಪ್ರಾಯ ಉಂಟಾಗುತ್ತಿದೆ. ಆದ್ದರಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್ ಹಾಗೂ ಸಂಬಂಧಿತ ಕಾನೂನುಗಳಡಿ ತಕ್ಷಣ ತಡೆ ಕ್ರಮ ಕೈಗೊಂಡು, ಯತ್ನಾಳರ ಪ್ರವೇಶ ಮತ್ತು ಕಾರ್ಯಕ್ರಮಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ತಾತ್ಕಾಲಿಕ ಸೇತುವೆ ಕೊಚ್ಚಿ ಹೋದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ್
ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ತೌಸಿಫ್ ಅಹ್ಮದ್, ಸೈಯದ್ ಮುರ್ಷದ್ ಜಾನಿ ಸಾಹೇಬ್, ಸೈಯದ್ ಶಮ್ರುದ್ದಿನ್, ಸೈಯದ್ ಮಾಸೂಮ್ ಶೇಖ್, ಅಕ್ಬರ್ ಹುಸೇನ್ ನಾಗುಂಡಿ, ಎಂ.ಡಿ.ಗೌಸ್, ಸೈಯದ್ ಅಬ್ದುಲ್ ಅಜೀಜ್, ಗೌಸ್ ಮೊಯಿನುದ್ದಿನ್, ಎಂ.ಡಿ.ಶಫಿ, ಎಂ.ಡಿ.ಖಾಜಾ ಮೊಯಿನುದ್ದಿನ್, ಆರೀಫ್, ರಿಯಾಜ್, ಮೋಹಿದ್ ಸೇರಿದಂತೆ ಅನೇಕರಿದ್ದರು.
