ರಾಯಚೂರು | ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ರಾಯಚೂರು ಪ್ರವೇಶ ತಡೆಯುವಂತೆ : ಎಸ್‌ಡಿಪಿಐ ಮನವಿ

Date:

ರಾಯಚೂರು ನಗರಕ್ಕೆ ಮಹಾಗಣಪತಿ ವಿಸರ್ಜನೆಯ ಅಂಗವಾಗಿ ಆಗಮಿಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪ್ರವೇಶ ನೀಡಬಾರದು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಪಕ್ಷವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ದ್ವೇಷ ಭಾಷಣ ಮಾಡಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುವ ಕಾರಣ ಶಾಂತಿ ಭಂಗಕ್ಕೆ ಕಾರಣರಾಗಿದ್ದಾರೆ. ರಾಯಚೂರು ನಗರದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗಿರುವುದರಿಂದ ದ್ವೇಷ ಭಾಷಣ ಮಾಡುವ ಸಾಧ್ಯತೆ ಇರುತ್ತದೆ. ಇದರಿಂದ ಸೌಹಾರ್ದತೆಯ ನಾಡನ್ನು ಹಾಳು ಮಾಡುವ ಭೀತಿಯಿದೆ ಎಂದು ಆಗ್ರಹಿಸಿದರು.

ಯತ್ನಾಳ ಅನೇಕ ಬಾರಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಪ್ರಚೋದನಾತ್ಮಕ ಹೇಳಿಕೆಗಳು, ಮುಸ್ಲಿಂ ಮಹಿಳೆಯರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಅವರು ನಿರಂತರವಾಗಿ ಮಾಡುತ್ತಿದ್ದಾರೆ ಹಾಗೂ ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಅವರ ಭೇಟಿಯ ನಂತರ ಗಲಭೆ ಉಂಟಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ಇದರಿಂದ ಸಮಾಜದಲ್ಲಿ ಭಿನ್ನಾಭಿಪ್ರಾಯ ಉಂಟಾಗುತ್ತಿದೆ. ಆದ್ದರಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್ ಹಾಗೂ ಸಂಬಂಧಿತ ಕಾನೂನುಗಳಡಿ ತಕ್ಷಣ ತಡೆ ಕ್ರಮ ಕೈಗೊಂಡು, ಯತ್ನಾಳರ ಪ್ರವೇಶ ಮತ್ತು ಕಾರ್ಯಕ್ರಮಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ? ಸಿಂಧನೂರು | ತಾತ್ಕಾಲಿಕ ಸೇತುವೆ ಕೊಚ್ಚಿ ಹೋದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ತೌಸಿಫ್ ಅಹ್ಮದ್, ಸೈಯದ್ ಮುರ್ಷದ್ ಜಾನಿ ಸಾಹೇಬ್, ಸೈಯದ್ ಶಮ್ರುದ್ದಿನ್, ಸೈಯದ್ ಮಾಸೂಮ್ ಶೇಖ್, ಅಕ್ಬರ್ ಹುಸೇನ್ ನಾಗುಂಡಿ, ಎಂ.ಡಿ.ಗೌಸ್, ಸೈಯದ್ ಅಬ್ದುಲ್‌ ಅಜೀಜ್, ಗೌಸ್ ಮೊಯಿನುದ್ದಿನ್, ಎಂ.ಡಿ.ಶಫಿ, ಎಂ.ಡಿ.ಖಾಜಾ ಮೊಯಿನುದ್ದಿನ್, ಆರೀಫ್, ರಿಯಾಜ್, ಮೋಹಿದ್ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...