ರಾಯಚೂರು | ಯಲಗಟ್ಟಾ ಪ್ರೌಢಶಾಲೆ ವಿದ್ಯಾರ್ಥಿಗಳ ಅನಿರ್ದಿಷ್ಟಾವಧಿ ಧರಣಿ; ಶಾಮಿಯಾನ, ಅಂಬೇಡ್ಕರ್‌ ಫೋಟೋ ಕಿತ್ತೆಸೆದ ಪೊಲೀಸರು

Date:

ಪ್ರತಿಭಟನಾ ಸ್ಥಳದಲ್ಲಿ ಧರಣಿಯ ಶಾಮಿಯಾನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್, ಭಗತ್ ಸಿಂಗ್ ಅವರ ಫೋಟೋವನ್ನು ಪೊಲೀಸರು ಕಿತ್ತೆಸೆದು ಅವಮಾನ ಮಾಡಿದ್ದಾರೆಂದು ಆರೋಪಿಸಿ ರಾಯಚೂರು ಜಿಲ್ಲೆಯ ಎಸ್‌ಎಫ್‌ಐ ಸಂಘಟನೆ, ಎಸ್‌ಡಿಎಂಸಿ, ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಯಲಗಟ್ಟ ಗ್ರಾಮದ ಸರ್ಕಾರಿ ಫ್ರೌಢಶಾಲೆಯ ಮುಖ್ಯೋಪಾಧ್ಯಾಯ‌ ನಾಗನಗೌಡ ಅವರು ನಿರಂತರವಾಗಿ ಅನಧಿಕೃತ ಗೈರು ಹಾಜರಾಗಿರುವ ಕುರಿತು ಕಠಿಣ ಕ್ರಮ ವಿಧಿಸಿ ಅಮಾನತು ಮಾಡಬೇಕೆಂದು ನಡೆಯುತ್ತಿರುವ 07 ನೇ ದಿನದಂದು ನಡೆದ ಪೊಲೀಸರ ದೌರ್ಜನ್ಯದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗ್ರಾಮಸ್ಥರು ಹಾಗೂ ವಿಧ್ಯಾರ್ಥಿಗಳ ನೇತೃತ್ವದಲ್ಲಿ ತರಗತಿ ಬಹಿಷ್ಕರಿಸಿ ಧರಣಿ ನಡೆಸುತ್ತಿದ್ದು, “ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಧ್ಯಾಯ ನಾಗನಗೌಡ ಅವರು 4 ವರ್ಷಗಳಿಂದ ಶಾಲೆಗೆ ನಿರಂತರವಾಗಿ ಅನಧಿಕೃತ ಗೈರಾಗುತ್ತಿದ್ದು, ಅಧಿಕಾರಗಳು ಕ್ರಮ ಜರುಗಿಸದೆ ಹಿಂದೇಟು ಹಾಕುತ್ತಿರುವುದು ಖಂಡನೀಯ” ಎಂದು ಗ್ರಾಮದಲ್ಲಿ ಬೈಕ್ ಜಾಥಾ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪುರ ಮಾತನಾಡಿ, “ಕಳೆದ 2 ದಿನಗಳಿಂದ ಪೊಲೀಸರು ಧರಣಿ ಹತ್ತಿಕ್ಕಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಸಂಘಟಕರಿಗೆ ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ. ತಾಲೂಕಿನಲ್ಲಿ ಸಾಕಷ್ಟು ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಇದರಲ್ಲಿ ಇಲಾಖೆ ಸಂಪೂರ್ಣ ಕೈ ಜೋಡಿಸಿ ಹಫ್ತಾ ವಸೂಲಿಗೆ ಶಾಮೀಲಾಗಿದ್ದಾರೆ. ಇದರ ಪರಿಣಾಮ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಈ ಬಗ್ಗೆ ಚಕಾರ ಎತ್ತದ ಪೊಲೀಸರು ಜನರ ಬದುಕಿನ ಪ್ರಶ್ನೆ, ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಹೋರಾಟಗಾರರ ಮೇಲೆ ಗೂಂಡಾಪ್ರವೃತ್ತಿ ಮೆರೆಯುತ್ತಿದ್ದಾರೆ” ಎಂದು ಆರೋಪಿಸಿದರು.

“ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ನಾಗನಗೌಡನ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ” ಎಂದು ಪ್ರಶ್ನಿಸಿದ ಅವರು, “ನಾಳೆ ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಸೇರಿ ತರಗತಿಗೆ ಬಹಿಷ್ಕಾರ ಹಾಕಿ ಪಂಚಾಯತ್ ಎದುರು ಪ್ರತಿಭಟನೆ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪರಿಸರ ಸಂರಕ್ಷಣೆ ಕುರಿತು ಪ್ರಜ್ಞಾವಂತ ಯುವಜನರು ಧ್ವನಿ ಎತ್ತಬೇಕಿದೆ: ನ್ಯಾ. ದಿನೇಶ್‌ ಬಿ ಜಿ

ಯಲಗಟ್ಟ ಗ್ರಾಪಂ ಸದಸ್ಯ ಸಿದ್ದಪ್ಪ ಗಾಣದಾಳ, ಎಸ್‌ಡಿಎಂಸಿ ಅಧ್ಯಕ್ಷ ನಿಂಗಪ್ಪ ಸಾಹುಕಾರ್, ಸದಸ್ಯ ನಾಗಪ್ಪ ಕಮಲದಿನ್ನಿ, ತಾಲೂಕು ಕಾರ್ಯದರ್ಶಿ ಪವನ್ ಕಮದಾಳ, ತಾಲೂಕು ಮುಖಂಡರಾದ ವಿನಯ್ ಕುಮಾರ್, ಪಿಆರ್‌ಎಸ್ ತಾಲೂಕು ಮುಖಂಡ ನಿಂಗಪ್ಪ ಎಂ, ಗ್ರಾಮದ ಹಿರಿಯರಾದ ಲಕ್ಷ್ಮಣ್, ಗುಂಡಪ್ಪ ದಿನ್ನಿ, ಸಿದ್ದಪ್ಪ ವಡಿಗೀರಿ, ಶೇಖರಪ್ಪ ಗಂಗಾವತಿ, ವಿವಿಧ ಸಂಘಟನೆಗಳ ಶಿವಶಂಕರ, ವಡಿಕೆಪ್ಪ, ಯಲ್ಲಪ್ಪ ಪ್ಯಟಿಗೌಡ, ರಾಜು ನಾಯಕ, ಶಿವು ಪಿ ಜಿ, ಕೆಆರ್‌ಎಸ್ ಮುಖಂಡರಾದ ಸದ್ದಾಂ ಹುಸೇನ್, ಹಂಪಯ್ಯ ಮಹ್ಮದ್ ರಫಿ, ನಾಗನಗೌಡ, ಸಿದ್ರಾಮಯ್ಯ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...