ರಾಯಚೂರು | ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ; ಯುವಕ ಬಂಧನ

Date:

ರಾಯಚೂರು ಜಿಲ್ಲೆಯ ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ಅಶ್ಲೀಲ ವಿಡಿಯೊಗಳನ್ನು ವೀಕ್ಷಿಸುತ್ತಿದ್ದ ಆರೋಪದಡಿ ಸೈಬರ್ ಕ್ರೈಂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಹಗಲು–ರಾತ್ರಿ ಎನ್ನದೇ ನಿರಂತರವಾಗಿ ಅಶ್ಲೀಲ ವಿಷಯಗಳನ್ನು ವೀಕ್ಷಿಸುತ್ತಿದ್ದ ಎನ್ನಲಾಗಿದೆ.

- Advertisement -

ವೆಬ್‌ಸೈಟ್‌ಗೆ ಲಿಂಕ್ ಆಗಿದ್ದ ಇ-ಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿದ ವೇಳೆ ಯುವಕನ ಕೃತ್ಯ ಅಧಿಕಾರಿಗಳ ಗಮನಕ್ಕೆ ಬಂದಿದೆ. ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸಿದ ಬಳಿಕ ಯುವಕ ತನ್ನ ಮೊಬೈಲ್‌ನಲ್ಲಿ ಹಿಸ್ಟರಿ ಅಳಿಸುತ್ತಿದ್ದನು. ಆದರೆ, ಆತ ವೀಕ್ಷಿಸಿದ್ದ ವಿಡಿಯೋಗಳ ವಿವರಗಳು ಸಂಬಂಧಿತ ವೆಬ್‌ಸೈಟ್‌ನ ದತ್ತಾಂಶದಲ್ಲಿ ದಾಖಲಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸುದ್ದಿ ಓದಿದ್ದೀರಾ? ಲಿಂಗಸೂಗೂರು | ಬೆಂಕಿ ಅವಘಡ: ₹70 ಸಾವಿರ ಮೌಲ್ಯದ ಬಣವೆಗಳು ಭಸ್ಮ

ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿ ಖಾತರಿ ಪಡಿಸಿಕೊಂಡ ಬಳಿಕ, ಮಕ್ಕಳ ಲೈಂಗಿಕ ಶೋಷಣೆ ವಸ್ತುಗಳು (CSAM) ಸೈಬರ್ ಕ್ರೈಂ ಕಾಯ್ದೆಯಡಿ 9 ಪ್ರಕರಣಗಳು ಸೇರಿದಂತೆ ಒಟ್ಟು 32 ಪ್ರಕರಣಗಳನ್ನು ದಾಖಲಿಸಿದ್ದಾರೆ. ಆರೋಪಿಯ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...