ಗುತ್ತಿಗೆ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಯಚೂರು ಹೊರ ವಲಯದ ಯರಮರಸ್ ಮುಖ್ಯ ಕೇಂದ್ರ ಬಳಿ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ನೌಕರರು ಕೆಲಸಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದರು.
“ಪರ್ವ ಮೇಕ್ ಕಂಪನಿಯಿಂದ ಹೊರ ರಾಜ್ಯದ ಕಿರಿಯ ಕಾರ್ಮಿಕರಿಗೆ ಹೆಚ್ಚಿನ ವೇತನ ನೀಡಲಾಗುತ್ತಿದೆ. ಸ್ಥಳೀಯ ಹಿರಿಯ ಕಾರ್ಮಿಕರಿಗೆ ಕಡಿಮೆ ವೇತನ ನೀಡುತ್ತಿದ್ದು, ಅದು ಕೂಡ ಸರಿಯಾಗಿ ನೀಡುತ್ತಿಲ್ಲ. ವಾರ್ಷಿಕ ಭತ್ಯೆ, ಇನ್ಕ್ರಿಮೆಂಟ್ ಸೇರಿ ಯಾವುದೇ ಸೌಲಭ್ಯ ನೀಡುತ್ತಿಲ್ಲ” ಎಂದು ಪರ್ವ ಮೇಕ್ ಕಂಪನಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವೈಟಿಪಿಎಸ್ ಕೇಂದ್ರದ ಒಳಗೆ ಕೆಲಸ ಮಾಡುವ ಕಾರ್ಮಿಕರಿಗೆ ಸೌಲಭ್ಯಗಳ ಕೊರತೆ, ಕೆಲಸ ಮಾಡುವ ಕಾರ್ಮಿಕರಿಗೆ ಊಟದ ಸಮಯದಲ್ಲಿ ಕುಳಿತು ಊಟ ಮಾಡಲು ಸರಿಯಾದ ಸ್ಥಳಾವಕಾಶ ಇಲ್ಲ, ಊಟ ಮಾಡುವ ಸ್ಥಳ ಧೂಳುಯವಾಗಿದ್ದು ಕಾರ್ಮಿಕರು ಅದೇ ಧೂಳಿನಲ್ಲಿ ಊಟ ಮಾಡುವ ಪರಿಸ್ಥಿತಿ ಇದೆ ಎಂದು ಕಾರ್ಮಿಕರು ಕಿಡಿಕಾರಿದರು.
ಇದನ್ನೂ ಓದಿ: ರಾಯಚೂರು | ಪಿಡಿಓ, ಅಧಿಕಾರ ದುರ್ಬಳಕೆ ಆರೋಪ: ಕೂಲಿ ಕಾರ್ಮಿಕರು ಧರಣಿ
ಆದಷ್ಟು ಬೇಗ ಕಾರ್ಮಿಕರ ಬೇಡಿಕೆ ಈಡೇರಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.