ರಾಯಚೂರು ಜಿಲ್ಲೆಯ ಲಿಂಗಸೂಗೂರು ಪುರಸಭೆಗೆ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಸದಸ್ಯರು 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ ಆರೋಪದ ಮೇಲೆ ನಾಲ್ವರು ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಆದೇಶ ಹೊರಡಿಸಿದ್ದಾರೆ.
ಲಿಂಗಸೂಗೂರು ಪುರಸಭೆಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ಸದಸ್ಯರುಗಳಾದ ಫಾತಿಮಾ ಮೌಲಾಸಾಬ, ಮೌಲಾಸಾಬ ಚೋಟುಸಾಬ, ಪ್ರಮೋದ ಕುಮಾರ, ಶರಣಪ್ಪ ಕೆಂಗೇರಿ ಇವರು ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಪಕ್ಷಾಂತರ ಮಾಡಿರುವ ಕುರಿತು ಲಿಂಗಸೂಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ದೂರು ನೀಡಿ ಸದಸ್ಯತ್ವ ಅನರ್ಹಗೊಳಿಸಲು ಮನವಿ ಮಾಡಿದ್ದರು. ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ ಸದಸ್ಯರುಗಳಿಗೆ ನೊಟೀಸ್ ಜಾರಿ ಮಾಡಿದ್ದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಆರ್‌ಟಿಒ ಅಟೆಂಡರ್
ಸಮರ್ಪಕ ಉತ್ತರ ನೀಡದೇ ಇರುವುದರಿಂದ ಸದಸ್ಯತ್ವ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ(ಪಕ್ಷಾಂತರ ನಿಷೇಧ)ಕಾಯ್ದೆ 1987ರ ನಿಯಮದಡಿ ಸದಸ್ಯತ್ವ ಅನರ್ಹಗೊಳಿಸಿ ಆದೇಶಿಸಿದ್ದಾರೆ.