ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರೈತ ವಿರೋಧಿ ಕಾಯ್ದೆಗಳ ರದ್ದತಿಗೆ ಆಗ್ರಹ

Date:

  • ಸಿದ್ದರಾಮಯ್ಯನವರಿಗೆ ರೈತರ ಬೇಡಿಕೆ ಈಡೇಡಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ
  • ರಾಜ್ಯದಲ್ಲಿ ರೈತ ವಿರೋಧಿಯಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಭೂ ಸುಧಾರಣೆ ಕಾಯ್ದೆಯ ಮಹಾತ್ವಾಕಾಂಕ್ಷೆಯ ಉದ್ದೇಶ ‘ಉಳುವವನೇ ಭೂ ಒಡೆಯ’ ಎಂಬುದಕ್ಕೆ ಕೊಡಲಿ ಪೆಟ್ಟು ನೀಡಿ ‘ಉಳ್ಳವನೇ ಭೂ ಒಡೆಯ’ ಆಗಲೂ ಅವಕಾಶ ಕಲ್ಪಿಸಿ, ಕಾಯ್ದೆಯ ಮೂಲ ಉದ್ದೇಶವನ್ನೇ ನಾಶ ಮಾಡಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆರೋಪಿಸಿದೆ.

- Advertisement -

ಗುರುವಾರ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಯಚೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ರಾಜ್ಯದಲ್ಲಿ ರೈತ ವಿರೋಧಿಯಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತರ ಬೇಡಿಕೆ ಈಡೇಡಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿದರು.

ರೈತರ ಬೇಡಿಕೆಗಳೇನು?

  • ಮಾರುಕಟ್ಟೆ ವ್ಯವಸ್ಥೆಯನ್ನು ಮತ್ತಷ್ಟು ವಿಸ್ತರಿಸಿ ರೈತರಿಗಾಗುತ್ತಿರುವ ವಂಚನೆ, ಮೋಸ ತಪ್ಪಿಸಬೇಕು ಹಾಗೂ  ಎಪಿಎಂಸಿ ಮಾರುಕಟ್ಟೆಯನ್ನು ರೈತ ಸ್ನೇಹಿಯಾಗಿ ರೂಪಿಸಬೇಕು.
  • ಭೂ ಸುಧಾರಣಾ ಕಾಯ್ದೆಯನ್ನು ಉಳುವ ರೈತನ ಕೇಂದ್ರಿತ ದೃಷ್ಠಿಯಿಂದ ಮತ್ತಷ್ಟು ಬಲಪಡಿಸಬೇಕು ಹಾಗೂ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕು.
  • ಕುಮಾರಸ್ವಾಮಿ ನೇತೃತ್ವ ಸರ್ಕಾರದ 2012ರ ಭೂ ಸ್ವಾಧೀನಕಾಯ್ದೆಗೆ ರೂಪಿಸಿರುವ ನಿಯಮಗಳು ರೈತ ವಿರೋಧಿಯಾಗಿವೆ. ಇದನ್ನು ಮಾರ್ಪಾಡು ಮಾಡಿ ರೈತ ಪರ ನಿಯಮಗಳನ್ನು ರೂಪಿಸಬೇಕು.
  • ಹಿಂದಿನ ಸರ್ಕಾರ ಭೂ ಮಂಜೂರಾತಿ ಕಾಯ್ದೆಯ ನಿಯಮಗಳನ್ನು ಮೀರಿ ಸರ್ಕಾರಿ ಭೂಮಿಯನ್ನು ಸಂಘ ಪರಿಹಾರಕ್ಕೆ ಮಂಜೂರು ಮಾಡಿದೆ. ಅವುಗಳನ್ನು ರದ್ದುಪಡಿಸಿ, ಸರ್ಕಾರ ವಶಕ್ಕೆ ಪಡೆಯಬೇಕು.
  • ಕೃಷಿ ಬೆಲೆ ಆಯೋಗದ ಅಧ್ಯಕ್ಷರ ನೇಮಕ ಮಾಡಬೇಕು ಹಾಗೂ ಸ್ವಾಮಿನಾಥನ್ ಸಮಿತಿ ವರದಿ ಆಧರಿಸಿ ರೈತರ ಹಕ್ಕಾಗಿರುವ ಕೃಷಿ ಬೆಂಬಲ ಬೆಲೆಯನ್ನು ಅನುಷ್ಠಾನಗೊಳಿಸಬೇಕು. ಇದಕ್ಕೆ ಪೂರಕವಾಗಿ ಕನಿಷ್ಠ 5 ಸಾವಿರ ಕೋಟಿ ಬೆಲೆ ಆವರ್ತನಿಧಿ ಸ್ಥಾಪಿಸಿ ಉತ್ಪನ್ನಗಳ ಧಾರಣೆ ಸ್ಥರೀಕರಣಕ್ಕೆ ಸಮರ್ಥ ಖರೀದಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು.
  • ಕೆಇಆರ್‌ಸಿ ಅವೈಜ್ಞಾನಿಕ ವಿದ್ಯುತ್ ದರವನ್ನು ಹೆಚ್ಚಳ ಮಾಡಿದ್ದು, ಅದನ್ನು ತಡೆಹಿಡಿದು ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜ ಮಾರಾಟವಾಗದಂತೆ ಹಾಗೂ ರೈತರಿಗೆ ಮೋಸದಿಂದ ಹಣ ವಸೂಲಿ ಮಾಡದಂತೆ ಕ್ರಮಕ್ಕೆ ಮುಂದಾಗಬೇಕು.
  • ಟಿಎಲ್‌ಬಿಸಿ ವ್ಯಾಪ್ತಿಯಲ್ಲಿ ಅನಧಿಕೃತ ನೀರಾವರಿ ತೆರವುಗೊಳಿಸಿ ಕೊನೆ ಭಾಗದ ರೈತರಿಗೆ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು ಎನ್ನುವುದು ಸೇರಿದಂತೆ ಇನ್ನೂ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮರ್ಯಾದಾಗೇಡು ಹತ್ಯೆ | ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಕುಟುಂಬ

ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ರಾಜ್ಯ ಉಪಾಧ್ಯಕ್ಷ ದೊಡ್ಡಬಸನಗೌಡ ಬಲ್ಲಟಗಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...