ದೇವದುರ್ಗ | ಕಟ್ಟಡ ಕುಸಿತ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯ

Date:

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದ ಸಮೀಪ ಪೋಸ್ಟರ್ ಅಳವಡಿಸುವ ವೇಳೆ ಕಟ್ಟಡದ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಹಾಗೂ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಘಟಕ ವತಿಯಿಂದ ಆಗ್ರಹಿಸಿದರು.

- Advertisement -

ಮೃತಪಟ್ಟ ಮೂವರು ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಕನಸು ಹೊತ್ತು ಸರ್ಕಾರಿ ವಸತಿ ನಿಲಯಗಳಲ್ಲಿ ವಾಸಿಸುತ್ತಿದ್ದರು. ಆದರೆ ಇಂತಹ ನಿರ್ಲಕ್ಷ್ಯದಿಂದ ಸಂಭವಿಸುವ ದುರಂತಗಳು ವಿದ್ಯಾರ್ಥಿಗಳ ಭವಿಷ್ಯವನ್ನೇ ಹಾಳು ಮಾಡುತ್ತಿವೆ ಎಂದು ಕಳವಳ ವ್ಯಕ್ತಪಡಿಸಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯಸರ್ಕಾರ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗಾವಕಾಶ ಕಲ್ಪಿಸಿ, ಮಾನವೀಯ ನೆಲೆಯಲ್ಲಿ ಅಗತ್ಯ ನೆರವು ಒದಗಿಸಬೇಕು ಎಂದರು.

ಅಲ್ಲದೆ, ಸಂತ್ರಸ್ತ ಕುಟುಂಬಗಳ ಪುನರ್ವಸತಿ ಕಾರ್ಯ ಕೈಗೊಳ್ಳುವುದರ ಜೊತೆಗೆ ಕಟ್ಟಡ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಘಟನೆಯು ಒತ್ತಾಯಿಸಿದರು.

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದ ಸಮೀಪ ಕಟ್ಟಡದ ಮೇಲ್ಭಾಗದಲ್ಲಿ ಪೋಸ್ಟರ್ ಅಳವಡಿಸುವ ಸಂದರ್ಭದಲ್ಲಿ ಏಕಾಏಕಿ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಸ್‌ಐಆರ್ ರದ್ದುಪಡಿಸಲು ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ

ಈ ವೇಳೆ ಲಕ್ಷ್ಮಣ ಮಸರಕಲ್, ಬಸವರಾಜ್ ಜಯಂ, ವೆಂಕಟೇಶ ಮುಷ್ಕಳ್ಳಿ, ಡೇವಿಡ್ ಮೇತ್ರಿ, ಚನ್ನಬಸವ ಮೇತ್ರಿ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...