ದೇವದುರ್ಗ | ದಲಿತರ ಮೇಲಿನ ಹಲ್ಲೆ ಖಂಡಿಸಿ ಎಂಆರ್‌ಎಸ್‌ಎಚ್‌ ಪ್ರತಿಭಟನೆ

Date:

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಮಡಿಕೇಶ್ವರದಲ್ಲಿ ದಲಿತ ಕುಟುಂಬದ ಮೇಲೆ ನಡೆದ ಹಲ್ಲೆ ಖಂಡಿಸಿ ದೇವದುರ್ಗ ತಾಲ್ಲೂಕಿನ ವಿವಿಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.

- Advertisement -

ಹಲ್ಲೆಗೊಳಗಾದ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಲು ಮಿನಿ ವಿಧಾನಸೌಧದ ಎದುರು ಸೋಮವಾರ ಪ್ರತಿಭಟನೆ ನಡೆಸಿ, ಬಳಿಕ ತಹಶೀಲ್ದಾ‌ರ್ ನಾಗಮ್ಮ ಕಟ್ಟಿಮನಿ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಂಆರ್‌ಎಸ್‌ಎಚ್‌ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪುರಿ, ದಲಿತ ಸಮುದಾಯದ ಪರಸಪ್ಪ ಬಹಿರ್ದೆಸೆಗೆ ತೆರಳಿದ್ದ ವೇಳೆ ಮೇಲ್ಟಾತಿಯವರು ಅವರನ್ನು ಗಿಡಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿದ್ದಾರೆ. ಬಿಡಿಸಲು ಹೊದ ದಲಿತ ಯುವಕ ಬಾಲಪ್ಪ ಅವರ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ’ ಎಂದು ಹೇಳಿದರು.

ದಲಿತ ಕುಟುಂಬ ದೂರು ನೀಡಲು ತಾಳಿಕೋಟೆ ಪೊಲೀಸ್‌ ಠಾಣೆಗೆ ತೆರಳಿದಾಗ ಪಿಎಸ್‌ಐ ಜ್ಯೋತಿ ಕೋಟಿ ದೂರು ಸ್ವೀಕರಿಸಿಲ್ಲ. ಹಲ್ಲೆ ಮಾಡಿದವರನ್ನು ರಕ್ಷಣೆ ಮಾಡುತ್ತಿದ್ದಾರೆ. ರಾಜ್ಯದಾದ್ಯಂತ ಮಾದಿಗ ಸಮಾಜದವರ ಮೇಲೆ ಪ್ರತಿನಿತ್ಯ ಹಲ್ಲೆ, ದೌರ್ಜನ್ಯ, ದಬ್ಬಾಳಿಕೆ ನಿರಂತರವಾಗಿ ನಡೆಯುತ್ತಿದೆ. ಸರ್ಕಾರ ಪರಸಪ್ಪ ಮತ್ತು ಬಾಲಪ್ಪ ಕುಟುಂಬಕ್ಕೆ ಭದ್ರತೆ ಒದಗಿಸಿ, ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪೊಲೀಸ್‌ ಠಾಣೆಗಳ ವಿರುದ್ಧ ಪ್ರತಿಭಟನೆ ಮಾಡುತ್ತೇವೆ’ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಂಧುತ್ವದ ಭಾವನೆ ಬೆಳೆಸಿದರೆ ದೇಶದಲ್ಲಿ ಸಹೋದರತ್ವ ಅರಳಲಿದೆ: ಉದಯ ಸಾಹುಕಾರ

ಎಂಆರ್‌ಎಸ್‌ಎಚ್ ತಾಲ್ಲೂಕು ಅಧ್ಯಕ್ಷ ಲಿಂಗಪ್ಪ ಗೌಡೂರು, ಮೌನೇಶ, ಯಲ್ಲಪ್ಪ ಆಲದರ್ತಿ, ರವಿ ಅಕ್ಕರಕಿ, ಬಸವರಾಜ ಅಕ್ಕರಕಿ, ಸಾಬಣ್ಣ, ಮೌನೇಶ, ಮಲ್ಲಿಕಾರ್ಜುನ, ಭೀಮರಾಯ, ಯಲ್ಲಪ್ಪ, ರಮೇಶ, ರವಿಚಂದ್ರ, ರಂಗಪ್ಪ, ಚನ್ನಬಸವ, ಹನುಮಂತ, ಚಿದಾನಂದಪ್ಪ, ಹನುಮಂತ ಪೌಡಿ, ಮಹಾದೇವ, ನಿಂಗಯ್ಯ, ರಾಮಣ್ಣ ಮತ್ತು ದಿಲೀಪ್‌ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...