ದೇವದುರ್ಗ | ರಸ್ತೆ ತಡೆ ಹೋರಾಟದ ಪರಿಣಾಮ: ಸ್ಥಳದಲ್ಲೇ ಕಳಪೆ ಕಾಮಗಾರಿ ತೆರವುಗೊಳಿಸಿದ ಅಧಿಕಾರಿಗಳು

Date:

ದೇವದುರ್ಗ ತಾಲ್ಲೂಕು ಜಾಲಹಳ್ಳಿ ಡಿವೈಎಫ್ಐ ಗ್ರಾಮ ಘಟಕದ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ಹಲವು ಜನಪರ ಬೇಡಿಕೆಗಳ ಈಡೇರಿಕೆಗೆ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೃಹತ್ ರಸ್ತೆ ತಡೆ ಹೋರಾಟ ನಡೆಸಲಾಯಿತು. ಹೋರಾಟದ ತೀವ್ರತೆಗೆ ಮಣಿದ ಅಧಿಕಾರಿಗಳು ಸ್ಥಳದಲ್ಲೇ ಕಳಪೆ ಸಿಸಿ ರಸ್ತೆಯನ್ನು ತೆರವುಗೊಳಿಸಲಾರಂಭಿಸಿದರು.

- Advertisement -

ಅಂಬೇಡ್ಕರ್ ವೃತ್ತದಿಂದ ಲಕ್ಷ್ಮೀ ರಂಗನಾಥ ದೇವಸ್ಥಾನದವರೆಗೆ ನಿರ್ಮಿಸಲಾದ ಕಳಪೆ ಸಿಸಿ ರಸ್ತೆಯನ್ನು ಮರುನಿರ್ಮಾಣ ಮಾಡುವುದು, ಗ್ರಾಮದಲ್ಲಿ 110 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪಿಸುವುದು, ಭಗತ್ ಸಿಂಗ್ ಕಾಲೋನಿಗೆ ಸಮರ್ಪಕ ವಿದ್ಯುತ್ ಸಂಪರ್ಕ ಕಲ್ಪಿಸುವುದು, ಬಳ್ಳಯ್ಯನ ಕಟ್ಟೆಯಿಂದ ಹಟ್ಟಿ ಮುಖ್ಯರಸ್ತೆಯವರೆಗೆ ಸಿಸಿ ರಸ್ತೆ ನಿರ್ಮಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ;...

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ...

ಹೋರಾಟವನ್ನು ಉದ್ದೇಶಿಸಿ ಮಾತನಾಡಿದ ಮುಖಂಡ ಶಬ್ಬೀರ್ ಅವರು, “ಗ್ರಾಮದಲ್ಲಿ ಒಳಚರಂಡಿಗಳು ಉಳುತುಂಬಿ ನಾರುತ್ತಿವೆ. ಲಕ್ಷಾಂತರ ರೂಪಾಯಿ ತೆರಿಗೆ ಸಂಗ್ರಹವಾಗುತ್ತಿದ್ದರೂ ಗ್ರಾಮಾಭಿವೃದ್ಧಿ ಶೂನ್ಯವಾಗಿದೆ. ಜನರ ಹಣ ಎಲ್ಲಿ ಮಾಯವಾಗುತ್ತಿದೆ ಎಂಬುದಕ್ಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉತ್ತರಿಸಬೇಕು. ಕೋಟ್ಯಂತರ ರೂಪಾಯಿ ವೆಚ್ಚದ ಕಟ್ಟಡಗಳು ವರ್ಷಗಳಾದರೂ ಪೂರ್ಣಗೊಳ್ಳುತ್ತಿಲ್ಲ. ಪೂರ್ಣಗೊಂಡ ಕಾಮಗಾರಿಗಳೂ ಕಳಪೆ ಗುಣಮಟ್ಟದಿಂದ ಕೂಡಿವೆ,” ಎಂದು ಆರೋಪಿಸಿದರು.

ಸಿಐಟಿಯು ಮುಖಂಡ ಗಿರಿಯಪ್ಪ ಪೂಜಾರಿ ಮಾತನಾಡಿ, “ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ನಾಚಿಕೆಯಾಗಬೇಕು. 14 ವರ್ಷಗಳಾದರೂ ವಾಲ್ಮೀಕಿ ಭವನ ನಿರ್ಮಾಣ ಪೂರ್ಣಗೊಳಿಸಲಾಗಿಲ್ಲ. ಪ್ರತಿಯೊಂದು ಕಾಮಗಾರಿಯಲ್ಲೂ ಭ್ರಷ್ಟಾಚಾರ ಮತ್ತು ಕಮಿಷನ್ ವ್ಯವಸ್ಥೆ ಇರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ. ಕಾಮಗಾರಿಗಳು ಪೂರ್ಣಗೊಂಡರೂ ಅತ್ಯಂತ ಕಳಪೆ ಗುಣಮಟ್ಟದಲ್ಲಿರುತ್ತವೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ ಮಾತನಾಡಿ, “ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಾದ ಸಾವಿರಾರು ಕೋಟಿ ರೂಪಾಯಿ ಅನುದಾನ ಎಲ್ಲಿಗೆ ಹೋಗುತ್ತಿದೆ ಎಂಬ ಪ್ರಶ್ನೆಗೆ ಉತ್ತರ ಸಿಗುತ್ತಿಲ್ಲ. ಒಂದು ತಿಂಗಳಲ್ಲೇ ರಸ್ತೆ ಕಿತ್ತು ಹೋಗುವಂತಹ ಕಾಮಗಾರಿಗಳು ನಡೆಯುತ್ತಿವೆ. ಜನರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ಸಹಿಸಲಾಗುವುದಿಲ್ಲ. ಬೇಡಿಕೆಗಳು ಈಡೇರದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು,” ಎಂದು ಎಚ್ಚರಿಕೆ ನೀಡಿದರು.

ಸ್ಥಳಕ್ಕೆ ಭೇಟಿ ನೀಡಿದ ಜೆಸ್ಕಾಂ ಎಇಇ ಅವರು ಭಗತ್ ಸಿಂಗ್ ಕಾಲೋನಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಿದ್ಧಪಡಿಸಿದ ಅಂದಾಜು ಪ್ರತಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆಗಸ್ಟ್ 15ರೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಜೊತೆಗೆ 110 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ಸಂಬಂಧಿಸಿದ ಪಹಣಿ ದಾಖಲೆ ಸೋಮವಾರ ದೊರೆಯಲಿದ್ದು, ದಾಖಲೆ ತಲುಪಿದ ಒಂದು ತಿಂಗಳೊಳಗೆ ಉಪಕೇಂದ್ರ ಕಟ್ಟಡ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಉಳಿದ ಬೇಡಿಕೆಗಳಿಗೂ ಹಂತ ಹಂತವಾಗಿ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಲಮೌಖಿಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಡಿವೈಎಫ್ಐ ನೇತೃತ್ವದ ರಸ್ತೆ ತಡೆ ಹೋರಾಟವನ್ನು ಹಿಂಪಡೆಯಲಾಯಿತು.

ಈ ಸುದ್ದಿ ಓದಿದ್ದೀರಾ? ದೇವದುರ್ಗ | ದಲಿತರ ಮೇಲಿನ ಹಲ್ಲೆ ಖಂಡಿಸಿ ಎಂಆರ್‌ಎಸ್‌ಎಚ್‌ ಪ್ರತಿಭಟನೆ

ಇದೆ ಸಂದರ್ಭದಲ್ಲಿ ಮುಖಂಡರಾದ ಮುಕ್ತುಂ ಬಾಷಾ, ರಿಯಾಜ್ ಆರ್ತಿ, ರಾಜು ನಾಯಕ,ಮೌನೇಶ್ ದಾಸರ, ರಂಗನಾಥ ಬಂಕಲದೊಡ್ಡಿ, ರಂಗಪ್ಪ ನಾಯಕ, ಹನುಮಂತ ಗುರಿಕಾರ, ಕಲೀಮ್ ಉದ್ದರ್, ಮಲ್ಲು ಗೌಡರ್, ವೆಂಕಟೇಶ್ ನಾಯಕ, ತಿಮ್ಮಣ್ಣ ನಾಯಕ , ಮೆಹಬೂಬ್ ಕುರುಕುಂದಿ, ರಿಯಾಝ್ ಕುರೇಶಿ, ಅಮೀರ್ ಪಟೇಲ್, ಮೆಹಬೂಬ್ ಕುರೇಶಿ, ನಿಂಗಣ್ಣ,ಯಲ್ಲಪ್ಪ, ನಬಿ ಟೈಲರ್, ಶಿವಮನ್ಯಪ್ಪ,ಕೊಂಡಯ್ಯ, ಬಾಲು ನಾಯಕ, ಸಂತೋಷ್ ನಾಯಕ, ಅಭಿಷೇಕ್ ಸೇರಿದಂತೆ ಅನೇಕರು ಹೋರಾಟದಲ್ಲಿ ಬಾಗಿಯಾಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...