ರಾಯಚೂರು | 100 ಕೋಟಿ ರೂ. ಅವ್ಯವಹಾರ ಪ್ರಕರಣ; ನಾಲ್ವರು ಪಿಡಿಒ ಅಮಾನತು

Date:

ಮನರೇಗಾ ಕಾಮಗಾರಿಗಳಲ್ಲಿ 100 ಕೋಟಿ ರೂ.ಗಳಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ದೇವದುರ್ಗ ತಾಲೂಕಿನ ನಾಲ್ವರು ಪಿಡಿಒಗಳನ್ನು ಅಮಾನತು ಮಾಡಲಾಗಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಪತ್ಯಪ್ಪ ರಾಠೋಡ್, ಶಾವಂತಗೆರಾ ಪಂಚಾಯತಿ ಪಿಡಿಒ ಗುರುಸ್ವಾಮಿ, ಗಾಣದಾಳ ಪಂಚಾಯತಿ ಪಿಡಿಒ ಮಲ್ಲಪ್ಪ ಹಾಗೂ ಕ್ಯಾದಿಗೇರಾ ಪಂಚಾಯಿತಿ ಪಿಡಿಒ ಸಿ.ಬಿ ಪಾಟೀಲ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಸಿಇಒ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶಿಸಿದ್ದಾರೆ. ಅಲ್ಲದೆ, ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ಕೂಡ ದಾಖಲಾಗಿದೆ.

ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿರುವ ಮನರೇಗಾ ಕಾಮಗಾರಿಗಳಲ್ಲಿ 100 ಕೋಟಿ ರೂ.ಗಳಿಗೂ ಅಧಿಕ ಅವ್ಯವಹಾರ ನಡೆದಿದೆ. ಮಾರುತೇಶ್ವರ ಎಂಟರ್‌ ಪ್ರೈಸಸ್‌ಗೆ ನಿಯಮ ಮೀರಿ 102.32 ಕೋಟಿ ರೂ.ಗಳನ್ನು ಪಾವತಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಜಿಲ್ಲಾ ಪಂಚಾಯತಿಯ ಮನರೇಗಾ ಯೋಜನಾ ಸಹಾಯಕ ನಿರ್ದೇಶಕರಿಗೆ ಅಣ್ಣರಾವ್ ಎಂಬವರು ದೂರು ಸಲ್ಲಿಸಿದ್ದರು. ಅಲ್ಲದೆ, ನಿರ್ಗಮಿತ ಸಹಾಯಕ ನಿರ್ದೇಶಕ ಬಸಣ್ಣ ನಾಯಕ ಹೇಮನೂರ ಎಂಬವರ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಕರಣ ಸಂಬಂಧ ಇಲಾಖಾ ಮಟ್ಟದ ತನಿಖೆ ನಡೆದಿದ್ದು, ನಾಲ್ವರು ಪಿಡಿಒಗಳನ್ನು ಅಮಾನತು ಮಾಡಲಾಗಿದೆ. ಬಸಣ್ಣ ನಾಯಕ ವಿರುದ್ಧ ಐಪಿಸಿ ಸೆಕ್ಷನ್ 465, 409, 420, 34ರ ಅಡಿ ಪ್ರಕರಣ ದಾಖಲಾಗಿದೆ. ಅವ್ಯವಹಾರದಲ್ಲಿ ಇನ್ನೂ ಕೆಲ ಪಿಡಿಒಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದಾರೆ. ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

‌ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ: ಗೀತಾ ಶಿವರಾಜ್‌ಕುಮಾರ್

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ...

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಕಾಂಗ್ರೆಸ್ ಪರ ಪ್ರಚಾರ ಮಾಡದಂತೆ ಸಿಪಿಐಎಂ ಕಾರ್ಯಕರ್ತನಿಗೆ ಜೆಡಿಎಸ್ ಮುಖಂಡರ ಬೆದರಿಕೆ

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಬಾರದು ಎಂದು ಜೆಡಿಎಸ್ ಕಾರ್ಯಕರ್ತರು ಸಿಪಿಐಎಂ...