ರಾಯಚೂರು | ಬಸ್ ಸೌಲಭ್ಯಕ್ಕಾಗಿ ಡಿಪೋ ಎದುರು ವಿದ್ಯಾರ್ಥಿಗಳ ಪ್ರತಿಭಟನೆ

Date:

ದೇವದುರ್ಗ ತಾಲೂಕಿನ ವಿದ್ಯಾಗಿರಿ ಪ್ರದೇಶದ ಹಾಸ್ಟೆಲ್‌ಗಳಿಗೆ ಹಾಗೂ ಮುಂಡರಗಿ, ಪರಪುರ, ಗಾಜಲದಿನ್ನಿ, ಚಡಕಲಗುಡ್ಡ ಸೇರಿದಂತೆ ತಾಲೂಕಿನ ಪ್ರತಿಯೊಂದು ಗ್ರಾಮಕ್ಕೂ ಸಮರ್ಪಕ ಮತ್ತು ಶಾಶ್ವತ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ದೇವದುರ್ಗ ತಾಲೂಕು ಸಮಿತಿ ನೇತೃತ್ವದಲ್ಲಿ ಗುರುವಾರ ದೇವದುರ್ಗದ ಕೆಕೆಆರ್‌ಟಿಸಿ ಬಸ್ ಡಿಪೋಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಎಫ್‌ಐ ರಾಯಚೂರು ಜಿಲ್ಲಾ ಅಧ್ಯಕ್ಷ ಮಹಾಲಿಂಗ ದೊಡ್ಡಮನಿ, “ತಾಲೂಕಿನ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜು ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಹಲವು ಬಾರಿ ಹೋರಾಟ ನಡೆಸಿ, ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದ ಕಾರಣ ಇಂದು ಡಿಪೋ ಮುತ್ತಿಗೆ ಹಾಕುವ ಅನಿವಾರ್ಯತೆ ಎದುರಾಗಿದೆ. ನಮ್ಮನ್ನು ಪೊಲೀಸರು ಬಂಧಿಸಿದರೂ ಪರವಾಗಿಲ್ಲ, ವಿದ್ಯಾರ್ಥಿಗಳ ಬಸ್ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

ದೇವದುರ್ಗ ತಾಲೂಕು ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಇಲ್ಲಿನ ಬಹುತೇಕ ವಿದ್ಯಾರ್ಥಿಗಳು ಬಡ ರೈತರು, ಕೃಷಿ ಕೂಲಿ ಕಾರ್ಮಿಕರು, ದಲಿತ ಹಾಗೂ ಹಿಂದುಳಿದ ವರ್ಗಗಳ ಕುಟುಂಬಗಳಿಂದ ಬಂದವರಾಗಿದ್ದಾರೆ. ಇಂತಹ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಸರ್ಕಾರಿ ಬಸ್ ಸೌಲಭ್ಯವೇ ಪ್ರಮುಖ ಆಧಾರವಾಗಿದೆ. ಆದರೆ ಸಾರಿಗೆ ಇಲಾಖೆಯ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ನೂರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಸಂಚಾರ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ದೇವದುರ್ಗ ಪಟ್ಟಣದ ಹೊರವಲಯದಲ್ಲಿರುವ ವಿದ್ಯಾಗಿರಿ ಪ್ರದೇಶದಲ್ಲಿ ಸರ್ಕಾರಿ ಹಾಸ್ಟೆಲ್‌ಗಳು, ವಸತಿ ಶಾಲೆಗಳು ಹಾಗೂ ಕಾಲೇಜುಗಳಿದ್ದು, ನೂರಾರು ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ. ಆದರೆ ಹಾಸ್ಟೆಲ್‌ಗಳವರೆಗೆ ಬಸ್ ಸೌಲಭ್ಯವಿಲ್ಲದ ಕಾರಣ ವಿದ್ಯಾರ್ಥಿಗಳು ಪ್ರತಿದಿನ 3ರಿಂದ 5 ಕಿ.ಮೀ. ದೂರ ನಡೆದುಕೊಂಡು ಪಟ್ಟಣಕ್ಕೆ ಬರಬೇಕಾದ ಪರಿಸ್ಥಿತಿ ಇದೆ. ಮಳೆ, ಬಿಸಿಲೆನ್ನದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ವಿದ್ಯಾರ್ಥಿನಿಯರು ಸಂಜೆ ವೇಳೆಯಲ್ಲಿ ಹಾಸ್ಟೆಲ್‌ಗಳಿಗೆ ಮರಳಲು ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಅವರ ಸುರಕ್ಷತೆ ಮತ್ತು ಶಿಕ್ಷಣದ ಹಿತದೃಷ್ಟಿಯಿಂದ ಕೂಡಲೇ ಶಾಶ್ವತ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮುಂಡರಗಿ, ಪರಪುರ, ಗಾಜಲದಿನ್ನಿ, ಲಿಂಗದಹಳ್ಳಿ, ಬಾಗೂರು, ಜಾಲಹಳ್ಳಿ ಹಾಗೂ ಗಬ್ಬೂರು ಹೋಬಳಿ ಸೇರಿದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬೆಳಿಗ್ಗೆ ಸಮಯಕ್ಕೆ ಸರಿಯಾಗಿ ಬಸ್ ಸಿಗದೆ ಶಾಲಾ-ಕಾಲೇಜುಗಳಿಗೆ ತಡವಾಗಿ ತಲುಪುತ್ತಿದ್ದಾರೆ. ಸಂಜೆ ಬಸ್‌ಗಾಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅನಿವಾರ್ಯವಾಗಿ ಆಟೋ ಹಾಗೂ ಖಾಸಗಿ ವಾಹನಗಳನ್ನು ಅವಲಂಬಿಸಿ ದಿನಕ್ಕೆ 80ರಿಂದ 100 ರೂ. ಖರ್ಚು ಮಾಡಬೇಕಾಗಿದ್ದು, ಇದು ಬಡ ಪೋಷಕರಿಗೆ ಆರ್ಥಿಕ ಹೊರೆಯಾಗಿದೆ. ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಶಾಶ್ವತ ಪರಿಹಾರ ಕಲ್ಪಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಶಿಕ್ಷಣದ ವಿಚಾರದಲ್ಲಿ ಸಾರಿಗೆ ಇಲಾಖೆ ನಿರ್ಲಕ್ಷ್ಯ ತೋರಬಾರದು ಎಂದು ಎಚ್ಚರಿಸಿದರು.

ನಂತರ ಮಾತನಾಡಿದ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ರಾಜ್ಯ ಕಾರ್ಯದರ್ಶಿ ಶಬ್ಬೀರ್ ಜಾಲಹಳ್ಳಿ, ಬಸ್ ಸೌಲಭ್ಯ ಎನ್ನುವುದು ಕೇವಲ ವಿದ್ಯಾರ್ಥಿಗಳ ಸಮಸ್ಯೆಯಲ್ಲ. ಇದು ಗ್ರಾಮೀಣ ಭಾಗದ ಪ್ರತಿಯೊಂದು ಕುಟುಂಬದ ಬದುಕಿಗೆ ಸಂಬಂಧಿಸಿದ ಮೂಲಭೂತ ಅಗತ್ಯವಾಗಿದೆ. ಕಟ್ಟಡ ನಿರ್ಮಾಣ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ರೈತರು, ಮಹಿಳೆಯರು ಹಾಗೂ ಸಾಮಾನ್ಯ ಜನರು ತಮ್ಮ ದಿನನಿತ್ಯದ ಕೆಲಸ ಕಾರ್ಯಗಳಿಗಾಗಿ ದೇವದುರ್ಗ ಪಟ್ಟಣಕ್ಕೆ ಬರಬೇಕಾಗುತ್ತದೆ. ಆದರೆ ಗ್ರಾಮಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ಜನರು ಖಾಸಗಿ ವಾಹನಗಳನ್ನು ಅವಲಂಬಿಸಿ ಹೆಚ್ಚಿನ ಹಣ ವ್ಯಯಿಸುವಂತಾಗಿದೆ ಎಂದು ಹೇಳಿದರು.

ಸರ್ಕಾರಿ ಸಾರಿಗೆ ವ್ಯವಸ್ಥೆ ಜನಸಾಮಾನ್ಯರ ಅನುಕೂಲಕ್ಕಾಗಿ ಇರಬೇಕೇ ಹೊರತು, ಜನರನ್ನು ಖಾಸಗಿ ವಾಹನಗಳ ಅವಲಂಬನೆಗೆ ತಳ್ಳುವಂತಿರಬಾರದು. ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ, ಕಾರ್ಮಿಕರು ಜೀವನೋಪಾಯಕ್ಕಾಗಿ ಪ್ರತಿನಿತ್ಯ ಪ್ರಯಾಣಿಸುತ್ತಾರೆ. ಬಸ್ ಸೌಲಭ್ಯವಿಲ್ಲದ ಕಾರಣ ಅವರ ಸಮಯ ಮತ್ತು ಹಣ ಎರಡೂ ವ್ಯರ್ಥವಾಗುತ್ತಿವೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಬಡ ಕುಟುಂಬಗಳ ಮೇಲೆ ಇದರ ಪರಿಣಾಮ ಹೆಚ್ಚಾಗಿದೆ. ಸಾರಿಗೆ ಇಲಾಖೆ ಅಧಿಕಾರಿಗಳು ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರತಿಯೊಂದು ಗ್ರಾಮಕ್ಕೂ ನಿಯಮಿತ ಬಸ್ ಸಂಚಾರ ಆರಂಭಿಸಬೇಕು. ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ನಡೆಯುತ್ತಿರುವ ಈ ಹೋರಾಟಕ್ಕೆ ಕಾರ್ಮಿಕ ಸಂಘಟನೆಗಳ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಭಾಷಾ ಶ್ಯಾನೇರ್ ಮಾತನಾಡಿ, ವಿದ್ಯಾಗಿರಿ ಹಾಸ್ಟೆಲ್‌ಗಳಿಗೆ ಬೆಳಿಗ್ಗೆ ಮತ್ತು ಸಂಜೆ ಶಾಶ್ವತ ಬಸ್ ವ್ಯವಸ್ಥೆ ಕಲ್ಪಿಸಬೇಕು. ದೇವದುರ್ಗದಿಂದ ಮುಂಡರಗಿ ಮಾರ್ಗವಾಗಿ ಮಧ್ಯಾಹ್ನ 12:30 ಹಾಗೂ 1:45ಕ್ಕೆ ಬಸ್ ಸಂಚಾರ ಆರಂಭಿಸಬೇಕು. ಪರಪುರ ಗ್ರಾಮಕ್ಕೆ ಬೆಳಿಗ್ಗೆ 6:30ಕ್ಕೆ ಮತ್ತು ಸಂಜೆ 4:30ಕ್ಕೆ, ಗಾಜಲದಿನ್ನಿ ಗ್ರಾಮಕ್ಕೆ ಬೆಳಿಗ್ಗೆ 7 ಗಂಟೆಗೆ ಹಾಗೂ ಸಂಜೆ 4:30ಕ್ಕೆ ಬಸ್ ಬಿಡಬೇಕು. ಗಲಗ ವ್ಯಾಪ್ತಿಯ ಚಡಕಲಗುಡ್ಡ ಗ್ರಾಮಕ್ಕೂ ಬಸ್ ಸೌಲಭ್ಯ ಕಲ್ಪಿಸಬೇಕು. ತಿಂಥಣಿ ಬ್ರಿಜ್‌ನಿಂದ ದೇವದುರ್ಗ ಮಾರ್ಗವಾಗಿ ಸಂಜೆ 4:30, 5:30 ಹಾಗೂ 6:30ಕ್ಕೆ ಬಸ್ ಸಂಚಾರ ಆರಂಭಿಸಬೇಕು. ಕೋವಿಡ್‌ಗೂ ಮುನ್ನ ಜಾಲಹಳ್ಳಿ ಹೋಬಳಿಯಲ್ಲಿ ಇದ್ದ ಬಸ್ ಸಂಚಾರವನ್ನು ಪುನರಾರಂಭಿಸಬೇಕು. ತಾಲೂಕಿನ ಪ್ರತಿಯೊಂದು ಹಳ್ಳಿಗೂ ನಿಯಮಿತ ಬಸ್ ಸೌಲಭ್ಯ ಕಲ್ಪಿಸುವುದರ ಜೊತೆಗೆ ವಿದ್ಯಾರ್ಥಿಗಳ ಬಸ್ ಪಾಸ್ ಸೌಲಭ್ಯ ಸರಳಗೊಳಿಸಿ, ಪರೀಕ್ಷಾ ಸಮಯದಲ್ಲಿ ಹೆಚ್ಚುವರಿ ಬಸ್‌ಗಳನ್ನು ಓಡಿಸಬೇಕು ಎಂದು ಒತ್ತಾಯಿಸಿದರು.

ಇದು ಕೇವಲ ಬಸ್‌ಗಾಗಿ ನಡೆಯುತ್ತಿರುವ ಹೋರಾಟವಲ್ಲ; ವಿದ್ಯಾರ್ಥಿಗಳ ಶಿಕ್ಷಣದ ಹಕ್ಕು, ಕಾರ್ಮಿಕರ ಬದುಕು ಹಾಗೂ ಗ್ರಾಮೀಣ ಜನರ ಸಂಚಾರದ ಹಕ್ಕಿಗಾಗಿ ನಡೆಯುತ್ತಿರುವ ಹೋರಾಟವಾಗಿದೆ. ಬಸ್ ಸೌಲಭ್ಯವಿಲ್ಲದೆ ಒಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು. ಸಾರಿಗೆ ಇಲಾಖೆ ಅಧಿಕಾರಿಗಳು ಕೂಡಲೇ ಎಲ್ಲ ಬೇಡಿಕೆಗಳನ್ನು ಈಡೇರಿಸಿ ಲಿಖಿತ ಭರವಸೆ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪೋತ್ನಾಳ ಗ್ರಂಥಾಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸ್ಪರ್ಧಾರ್ಥಿಗಳ ಪ್ರತಿಭಟನೆ

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ದೇವದುರ್ಗ ತಾಲೂಕು ಸಮಿತಿ ಕಾರ್ಯದರ್ಶಿ ಸಂತೋಷ್ ತ್ಯಾಪ್ಲಿ, ಉಪಾಧ್ಯಕ್ಷ ಬಾಬು ಶ್ಯಾನೇರ್, ಪದಾಧಿಕಾರಿ ಸಿದ್ದು ಮುಂಡರಗಿ, ಡಿವೈಎಫ್ಐ ಮುಖಂಡ ರಾಜು ನಾಯಕ, ಶಿವು ನಡಿಗೇರ, ವೆಂಕಟೇಶ್ , ರಿಯಾಜ್ ಆರ್ಥಿ, ಮುಕ್ಕನಗೌಡ, ವಿದ್ಯಾರ್ಥಿಗಳು, ಕಾರ್ಮಿಕ ಸಂಘಟನೆಯ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮನರೇಗಾ ಯೋಜನೆಯ ₹13.57 ಲಕ್ಷ ದುರುಪಯೋಗ; ಮಾಜಿ ಗ್ರಾಪಂ ಅಧ್ಯಕ್ಷ ಸೇರಿ ಇಬ್ಬರಿಗೆ ಜೈಲು ಶಿಕ್ಷೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಮನರೇಗಾ) ₹13.57...

ಹಾವೇರಿ | ಉಡಚಪ್ಪ ಮಳಗಿ ಅವರಿಗೆ ಭೀಮ ಸೇವಾ ರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ...

ಬಾಗಲಕೋಟೆ | ಸೇತುವೆ ಮೇಲಿನ ಗುಂಡಿ ಸರಿಪಡಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಕಲಾದಗಿ - ಅಂಕಲಗಿ ಸೇತುವೆ ಮೇಲೆ ಬೃಹತ್‌ ಪ್ರಮಾಣದ...