ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Date:

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ಹಾಗೂ ಡಿವೈಎಫ್‌ಐ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದರು.

- Advertisement -

ಮೇದನಾಪುರ ಹಾಗೂ ಬಾಗೂರು ಗ್ರಾಮಗಳಿಗೆ ತೆರಳುವ ಶಾಲಾ ವಿದ್ಯಾರ್ಥಿಗಳು ಪ್ರತಿದಿನ ಸಂಜೆ 4.30ಕ್ಕೆ ಶಾಲೆ ಮುಗಿಸಿಕೊಂಡು ಬಸ್‌ಗಾಗಿ ಕಾಯಬೇಕಾದ ಪರಿಸ್ಥಿತಿ ಇದೆ. ನಿಗದಿಯಂತೆ ಸಂಜೆ 5 ಗಂಟೆಗೆ ಬರಬೇಕಾದ ಬಸ್ ಒಂದು ವಾರದಿಂದ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಬದಲಾಗಿ ರಾತ್ರಿ 7.30ರಿಂದ 8 ಗಂಟೆಯವರೆಗೆ ತಡವಾಗಿ ಬರುತ್ತಿದೆ. ಇದರಿಂದ ವಿದ್ಯಾರ್ಥಿಗಳು ಮನೆಗೆ ತಲುಪಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಸಾರಿಗೆ ಇಲಾಖೆಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತಿದೆ. ದೇವದುರ್ಗ ಸಾರಿಗೆ ಘಟಕದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪ್ರತಿದಿನ ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಎಫ್‌ಐ ಮುಖಂಡ ಸಂತೋಷ್ ಸ್ಟಾಪ್ಲಿ ಮಾತನಾಡಿ, “ವಿದ್ಯಾರ್ಥಿಗಳು ಸಂಜೆ 5 ಗಂಟೆಗೆ ಮನೆ ಸೇರಬೇಕಾದವರು ಸಾರಿಗೆ ಇಲಾಖೆಯ ನಿರ್ಲಕ್ಷ್ಯದಿಂದ ರಾತ್ರಿ 8 ಗಂಟೆಗೆ ಮನೆ ತಲುಪುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಸ್ಪಂದಿಸಬೇಕು” ಎಂದು ಒತ್ತಾಯಿಸಿದರು.

ಕಾರ್ಮಿಕ ಸಂಘಟನೆಯ ರಾಜ್ಯ ಮುಖಂಡ ಶಬ್ಬೀರ್ ಜಾಲಹಳ್ಳಿ ಮಾತನಾಡಿ, ದೇವದುರ್ಗ ಸಾರಿಗೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲ್ಲೂಕಿನ ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ಜನರು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳ ಬಸ್ ಸಮಸ್ಯೆ ಬಗೆಹರಿಸುವಲ್ಲಿ ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು. ಇಲ್ಲದಿದ್ದರೆ ನವೆಂಬರ್ 19ರಂದು ದೇವದುರ್ಗ ಬಸ್ ಡಿಪೋಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಡಿವೈಎಫ್‌ಐ ಜಿಲ್ಲಾ ಮುಖಂಡ ಮಹಾಲಿಂಗ ದೊಡ್ಡಮನಿ ಮಾತನಾಡಿ, ದೇವದುರ್ಗ ತಾಲ್ಲೂಕಿನ ಹಲವು ಗ್ರಾಮಗಳಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಲ್ಲಿ ಸಾರಿಗೆ ಇಲಾಖೆ ವಿಫಲವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಕ್ಷಣವೇ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ನ.19ರಂದು ಬಸ್ ಡಿಪೋ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಡಿವೈಎಫ್‌ಐ ಜಿಲ್ಲಾಧ್ಯಕ್ಷ ರಾಜು ನಾಯಕ್, ರಿಯಾಜ್ ಅರ್ತಿ, ಭೂತಪ್ಪ ದೇವರಮನಿ, ಅಮೀರ್ ಪಟೇಲ್, ಕೊಂಡಯ್ಯ, ಮಲ್ಲು, ಹೈದರಸಾಬ್ ಮುಲ್ಲಾ, ಮನ್ಸೂರ್, ಮೆಹಬೂಬ್ ಬಲಿಗಾರ್, ನಬಿ ಟೈಲರ್, ರಂಗನಾಥ್, ರಿಯಾಜ್ ಸೇರಿದಂತೆ ಸಂಘಟನೆಗಳ ಮುಖಂಡರು, ಶಾಲಾ ವಿದ್ಯಾರ್ಥಿಗಳು, ಪಾಲಕರು ಹಾಗೂ ಬಾಗೂರು ಗ್ರಾಮದ ನಿವಾಸಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

ಚಿಕ್ಕಮಗಳೂರು | ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವೆಂಬರ್ ೧೮ ರಂದು ಬೆಳಿಗ್ಗೆ 8.೦೦...

ಕರ್ನಾಟಕದ ಕಡಲ ಕ್ಷೇತ್ರಕ್ಕೆ ಬಂಪರ್ ಹೂಡಿಕೆ: ₹8,295 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ

ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಕರಾವಳಿ...