ಬೆಂಗಳೂರಿನಲ್ಲಿ ಜ.7ವರಗೆ ನಡೆಯಲಿರುವ ಅಂತರಾಷ್ಟಿಯ ಸಿರಿಧಾನ್ಯ ಮತ್ತು ಸಾವಯವ ಮೇಳದ ಪೂರ್ವಭಾವಿಯಾಗಿ ಡಿ.23 ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಹಾಗೂ ಸಿರಿಧಾನ್ಯ ಹಬ್ಬವನ್ನು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ ಹೇಳಿದರು.
ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “ಸಿರಿಧಾನ್ಯ ಬೆಳೆಗಳನ್ನು ಪ್ರೋತ್ಸಾಹಿಸಲು ಅನೇಕ ಹಂತದ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲಾಗುತ್ತದೆ. ಜನರಿಗೆ ಸಿರಿಧಾನ್ಯದ ಬಳಕೆ, ಬೆಳೆಯನ್ನು ಪ್ರೋತ್ಸಾಹಿಸಲು ಸಿರಿಧಾನ್ಯಗಳ ಜಾಗೃತ ನಡಿಗೆ , ಸಿರಿಧಾನ್ಯ ಪಾಕ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.
“ಡಿ.23 ರಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸಿರಿಧಾನ್ಯಗಳ ಜಾಗೃತಿ ನಡಿಗೆ ಪ್ರಾರಂಭವಾಗಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವರೆಗೆ ನಡೆಯಲಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಪ್ರಗತಿಪರ ರೈತರನ್ನು ಆಹ್ವಾನಿಸಲಾಗುತ್ತದೆ. ನಂತರ ಕೃಷಿ ವಿಶ್ವವಿದ್ಯಾಲಯದಲ್ಲಿ ಸಿರಿಧಾನ್ಯಗಳ ಹಬ್ಬ ನಡೆಯಲಿದ್ದು ಬೆಳೆಗಾರರಿಗೆ ದೊರೆಯುವ ಪ್ರೋತ್ಸಾಹ, ಬೆಳೆ ಪದ್ದತಿ ಕುರಿತು ಮಾಹಿತಿ ನೀಡಲಾಗುತ್ತದೆ” ಎಂದು ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಿ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹ
ಸಿರಿಧಾನ್ಯ ಬೆಳೆಗಳಿಗೆ ಪ್ರೋತ್ಸಾಹಿಸಲು ಸಜ್ಜೆ, ಜೋಳ ಹೊರತುಪಡಿಸಿ ಉಳಿದ ಬೆಳೆಗಳಿಗೆ ಪ್ರತಿ ಹೆಕ್ಟೇರ್ ಗೆ 6 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಮುಂದಿನ ತಿಂಗಳನಿಂದ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದರು.
ವರದಿ : ಹಫೀಜುಲ್ಲ