ರಾಯಚೂರು | ಕೇಂದ್ರ ಸರ್ಕಾರ ಜಾರಿಗೊಳಿಸಿದ ಗುತ್ತಿಗೆ ಪದ್ದತಿಯಿಂದ ಕಾರ್ಮಿಕರ ಶೋಷಣೆ: ಬಿ ರುದ್ರಯ್ಯ

Date:

ಕೇಂದ್ರದ ಬಿಜೆಪಿ ಸರ್ಕಾರ ದೇಶದಲ್ಲಿ ಗುತ್ತಿಗೆ ಪದ್ದತಿ ಜಾರಿಗೆ ತಂದು ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದು,  ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಕಾರ್ಮಿಕರು ಹಗ್ಗಕ್ಕೆ ಕೊರಳೊಡ್ಡಿದಂತಾಗುತ್ತದೆ ಎಂದು ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಕ್ಷದ ರಾಜ್ಯ ಕಾರ್ಯದರ್ಶಿ ಬಿ.ರುದ್ರಯ್ಯ ಹೇಳಿದರು.

- Advertisement -

ಕರ್ನಾಟಕ ರಾಜ್ಯ ಟ್ರೇಡ್ ಯುನಿಯನ್ ಸೆಂಟರ್ ಆಫ್ ಇಂಡಿಯಾ ವತಿಯಿಂದ ರಾಯಚೂರು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ 9ನೇ ರಾಜ್ಯ ಸಮ್ಮೇಳನದ ಅಂಗವಾಗಿ ನಡೆದ ಬಹಿರಂಗ ಸಭೆ ಉದ್ಘಾಟಿಸಿ ಅವರು ಮಾತನಾಡಿದರು .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕೇಂದ್ರ ಸರ್ಕಾರ ಹಿಂದುತ್ವ, ಜಾತಿವಾದಿ, ಪ್ಯಾಸಿಸ್ಟ್ ಆಡಳಿತ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮುಂಚೆ 2 ಕೋಟಿ ಉದ್ಯೋಗ ಸೃಷ್ಠಿಸುವುದಾಗಿ ಹೇಳಿದರು, ಅಧಿಕಾರಕ್ಕೆ ಬಂದು ಉದ್ಯೋಗ ಸೃಷ್ಠಿಸುವ 16 ಸಾರ್ವಜನಿಕ ಸಂಸ್ಥೆ ಮಾರಾಟ ಮಾಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಗುತ್ತಿಗೆ ಕಾರ್ಮಿಕ ಪದ್ದತಿ ಜಾರಿಗೆ ತಂದು ಉದ್ಯೋಗ ಭದ್ರತೆ, ಸಾಮಾಜಿಕ ಭದ್ರತೆ ನೀಡದೇ ದುಡಿಯುವ ಜನರ ಶೋಷಣೆ ಮಾಡುತ್ತಿದ್ದಾರೆ. 44 ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಿ 4 ಕಾರ್ಮಿಕ ಸಂಹಿತೆ ಜಾರಿಗೆ ತಂದಿದ್ದಾರೆ” ಎಂದು ದೂರಿದರು.

“ದೇಶದ ಅಭಿವೃದ್ಧಿಗಾಗಿ ಕಾರ್ಮಿಕರು ಶ್ರಮಿಸಿದರೆ ಬಂಡವಾಳಶಾಹಿಗಳು ಕಾರ್ಮಿಕರ ರಕ್ತ ಹೀರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಬಂಡವಾಳಶಾಹಿಗಳ ಪರ ದಲ್ಲಾಳಿಯಂತೆ ಕೆಲಸ ಮಾಡುತ್ತಿದ್ದಾರೆ. ಜಿಎಸ್‌ಟಿ ಜಾರಿಯಿಂದ ಸಣ್ಣ ಕೈಗಾರಿಕೆಗಳು ಮುಚ್ಚಿವೆ. ದೇಶದಲ್ಲಿ ಹಿಂದುತ್ವದ ಹೆಸರಿನಲ್ಲಿ ನಾಗರಿಕರನ್ನು ವಿಭಜಿಸುತ್ತಿದೆ. ಜನರ ಗಮನ ಬೇರೆಡೆ ಸೆಳೆಯಲು ಧರ್ಮದ ಮಧ್ಯೆ ವಿಷಬೀಜ ಬಿತ್ತುತ್ತಿದ್ದಾರೆ. ಕಾರ್ಮಿಕರು ದೇಶದಲ್ಲಿ ನಡೆಯುವ ವಿದ್ಯಾಮಾನ ಅರ್ಥೈಸಿಕೊಂಡು ಜಾಗೃತರಾಗಬೇಕು” ಎಂದು ಎಚ್ಚರಿಸಿದರು.

ಸಮಾವೇಶಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ವೀರಶೈವ ಕಲ್ಯಾಣ ಮಂಟಪದವರಗೆ ಬೃಹತ್ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.

ಈ ಸುದ್ದಿ ಓದಿದ್ದೀರಾ? ಎಬಿಪಿಎಸ್‌ ಕಡ್ಡಾಯಗೊಳಿಸಿದ ಕೇಂದ್ರ; ಮನರೇಗಾ ಉದ್ಯೋಗದಿಂದ 1.78 ಕೋಟಿ ಕಾರ್ಮಿಕರು ವಂಚಿತ

ಕಾರ್ಯಕ್ರಮದಲ್ಲಿ ಕಾರ್ಮಿಕ ಮುಖಂಡರಾದ ವರದರಾಜೇಂದ್ರ, ಅಮೀರ್ ಅಲಿ, ಕಂದಗಲ ಶ್ರೀನಿವಾಸ, ರುಕ್ಮಿಣಿ, ಟಿಯುಸಿಐ ಜಿಲ್ಲಾ ಘಟಕದ ಅಧ್ಯಕ್ಷ ಜಿ. ಅಮರೇಶ, ಕೆ.ಕೃಷ್ಣಪ್ಪ, ಸಂಗಪ್ಪ, ಅಜೀಜ್ ಜಾಗೀರದಾರ, ಎಸ್ಆರ್ ಮಂಜುನಾಥ ಸೇರಿದಂತೆ ಕಾರ್ಮಿಕರು, ಸಂಘಟಕರು, ಸಾಮಾಜಿಕ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...