ಹಟ್ಟಿ ಜ್ಯೋತಿ ಸಾವು, ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ರಾಜ್ಯ ಮಹಿಳಾ ಒಕ್ಕೂಟ ಆಗ್ರಹ

Date:

ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಹಾಗೂ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಡೆದ ಜ್ಯೋತಿ ಎಂಬ ಯುವತಿಯ ನಿಗೂಢ ಸಾವಿನ ಪ್ರಕರಣ ಸಬಂಧ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ಪಟ್ಟಣದ ಪಾಮನ್ ಕಲ್ಲೂರ ಕ್ರಾಸ್‌ನಿಂದ ಆರಂಭವಾದ ಮೆರವಣಿಗೆ ಹಳೆ ಬಸ್ ನಿಲ್ದಾಣ, ಕೋಠಾ ಕ್ರಾಸ್ ಮೂಲಕ ಸಾಗುತ್ತ ಕೆನರಾ ಬ್ಯಾಂಕ್‌ವರೆಗೆ ತೆರಳಿ, ಅಲ್ಲಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಕಳೆದ ವಾರ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣ ವ್ಯಾಪ್ತಿಯ ಹಿರೇನಗನೂರು ಗ್ರಾಮದ ನಿವಾಸಿ, ಸ್ಟಾಫ್ ನರ್ಸ್ ಜ್ಯೋತಿ ಅವರನ್ನು ರೋಡ್ ರೋಲರ್ ವಾಹನಕ್ಕೆ ನೇಣು ಬಿಗಿದು ಕೊಲೆ ಮಾಡಲಾಗಿದೆ. ಇದು ಪೂರ್ವ ಯೋಜಿತ ಕೊಲೆಯಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು” ಎಂದು ಕೆಂದು ಒತ್ತಾಯಿಸಿದರು.

“ಹಟ್ಟಿ ಪಟ್ಟಣದಲ್ಲಿ ಇಂತಹ ಅನೇಕ ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಅವು ಬಹುತೇಕ ಬೆಳಕಿಗೆ ಬಾರದೆ ಮಹಿಳೆಯರು ಬಲಿಯಾಗುತ್ತಿದ್ದಾರೆ. ಇಂತಹ ಎಲ್ಲ ಪ್ರಕರಣಗಳನ್ನು ತೀವ್ರವಾಗಿ ವಿರೋಧಿಸುವುದರ ಜತೆಗೆ, ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಹಿಳಾ ಒಕ್ಕೂಟ ಅಧ್ಯಕ್ಷೆ ವಿದ್ಯಾ ಪಾಟೀಲ್, “ಜ್ಯೋತಿ ಕೊಲೆಗೆ ಸೆಕ್ಷನ್‌ಗಳು ಹಾಕಿರುವುದು ಸರಳವಾಗಿವೆ. ಕೂಡಲೇ ಕಠಿಣವಾಗಿ ಸೆಕ್ಷನ್ ಸೇರಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಇಂತಹ ಪ್ರಕರಣಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

ವಿರುಪಮಾ ಸಿಂಧನೂರು ಮಾತನಾಡಿ, “ಹಟ್ಟಿ ಪಟ್ಟಣದಲ್ಲಿ ಕೆಲವು ದಿನಗಳಿಂದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ, ಸ್ಟಾಫ್ ನರ್ಸ್ ಹಾಗೂ ಇಂತಹ ಹಲವು ಪ್ರಕರಣಗಳು ನಡೆದರೂ ಕಠಿಣ ಶಿಕ್ಷೆ ವಿಧಿಸುವಲ್ಲಿ ವಿಫಲರಾಗಿದ್ದಾರೆ” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಗುರುರಾಜ್, ಮೌಕ್ಷಮ್ಮ, ಮಾರೆಮ್ಮ ರಾಯಚೂರು, ಗುಂಡಪ್ಪ ಯರಡೋಣ, ಲಕ್ಷ್ಮೀ ಹಕ್ಕಾವಟಗಿ, ರಾಧಾ ಐದನಾಳ, ದುರುಗಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | SIR : ನೈಜ ಮತದಾರರನ್ನೇ ಗುರಿಯಾಗಿಸಿ ಫಾರ್ಮ್-7 ಸಲ್ಲಿಕೆ, ಎಸ್‌ಐಟಿ ತನಿಖೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ,...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು...

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...