ರಾಯಚೂರು ಜಿಲ್ಲಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಕೆ.ಶಾಂತಪ್ಪ ಅವರನ್ನು ಬುಧವಾರ ನೇಮಕ ಮಾಡಲಾಗಿದೆ.
ಕಳೆದ ಬಾರಿ ಲಿಂಗಾಯತ ಸಮುದಾಯದ ಬಸವರಾಜ ಇಟಗಿ ಅವರು ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಈ ಬಾರಿ ಹಿಂದುಳಿದ ವರ್ಗದ ಕಬ್ಬಲಿಗ ಸಮುದಾಯಕ್ಕೆ ಸೇರಿದ ಶಾಂತಪ್ಪ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲಾಗಿದೆ.
ಹಿಂದುಳಿದ ವರ್ಗಗಳ ಒಕ್ಕೂಟ ನಾಯಕತ್ವದೊಂದಿಗೆ ಕೆ.ಶಾಂತಪ್ಪ ಅವರು ಸಂಘಟನೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಕಾಂಗ್ರೆಸ್ ಪಕ್ಷದ ಗೆಲುವಿನಲ್ಲೂ ಮಹತ್ವದ ಕೊಡುಗೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ವೈದ್ಯಕೀಯ ವಿದ್ಯಾರ್ಥಿಗಳು, ಯುವಕ-ಯುವತಿಯರನ್ನು ಬ್ಲ್ಯಾಕ್‌ಮೇಲ್ ಆರೋಪ: ಮೂವರು ಬಂಧನ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಈ ಬಾರಿ ಎಐಸಿಸಿ ವೀಕ್ಷಕ ತಂಡವು ರಾಯಚೂರಿಗೆ ಆಗಮಿಸಿ, ಮಹತ್ವದ ಸಭೆ ನಡೆಸಿ ತಾಲೂಕುವಾರು ಮಾಹಿತಿ ಸಂಗ್ರಹಿಸಿತು.





